Breaking
Tue. Dec 17th, 2024

ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯಡಿ 20 ಲಕ್ಷ ರೂ ಸಾಲ

Spread the love

ಪಿಎಂ ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಅರ್ಹತೆ ಇರುವವರು
* ಚಿಲ್ಲರೆ ಮಾರಾಟಗಾರರು ಮತ್ತು ಅಂಗಡಿಯವರು
* ಕೃಷಿ ಮತ್ತು ಆಹಾರ ಉತ್ಪಾದನಾ ಕೈಗಾರಿಕೆಗಳು
* ಕರಕುಶಲ ಮತ್ತು ಸಣ್ಣ ಪ್ರಮಾಣದ ತಯಾರಕರು
* ಸ್ವಯಂ ಉದ್ಯೋಗಿ ಉದ್ಯಮಿಗಳು ಮತ್ತು ಸೇವಾ ಪೂರೈಕೆದಾರರು
* ದುರಸ್ತಿ ಮತ್ತು ಪುನಃಸ್ಥಾಪನೆ ಅಂಗಡಿಗಳು
ಟ್ರಕ್ ಮಾಲೀಕರು ಮತ್ತು ಇತರ ಸಾರಿಗೆ ವ್ಯವಹಾರಗಳು.

ಲಾಭ ಮತ್ತು ಲಾಭರಹಿತ ವಲಯದ ಕಂಪನಿಗಳು
ಇವು ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯಡಿ 20 ಲಕ್ಷ ರೂಗಳವರೆಗೆ ಸಾಲವನ್ನು ಪಡೆಯಬಹುದಾಗಿದೆ.

ಮುದ್ರಾ ಯೋಜನೆಯಡಿ ಯಾವೆಲ್ಲಾ ಸಾಲ ಪಡೆದುಕೊಳ್ಳಬಹುದು?
* ಅಂಗಡಿಯವರು, ವ್ಯಾಪಾರಿಗಳು, ಮಾರಾಟಗಾರರು ಮತ್ತು ಸೇವಾ ವಲಯದ ಇತರ ಚಟುವಟಿಕೆಗಳಿಗೆ ಬಿಸಿನೆಸ್ ಲೋನ್
ಸಣ್ಣ ಉದ್ಯಮ ಘಟಕಗಳಿಗೆ ಸಲಕರಣೆ ಹಣಕಾಸು
* ಮುದ್ರಾ ಕಾರ್ಡ್ಗಳ ಮೂಲಕ ವರ್ಕಿಂಗ್ ಕ್ಯಾಪಿಟಲ್ಗೆ ಸಾಲ
* ಸಾರಿಗೆ ವಾಹನ ಸಾಲ
* ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತು ಮೀನು ಸಾಕಾಣಿಕೆಯಂತಹ ಕೃಷಿ ಸಂಬಂಧಿತ ಕೃಷಿಯೇತರ ಆದಾಯವನ್ನು ಉತ್ಪಾದಿಸುವ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಸಾಲ.
ವಾಣಿಜ್ಯ ಚಟುವಟಿಕೆಗಳಿಗೆ ಟ್ರಾಕ್ಟರು, ಟಿಲ್ಲರ್ ಮತ್ತು ದ್ವಿಚಕ್ರ ವಾಹನಗಳನ್ನು ಬಳಸುವ ಜನರಿಗೆ ಸಾಲ.

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಆಗಷ್ಟ್ 1ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 2ನೇ ತಾರೀಕಿನಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಗಷ್ಟ್ 4 ಅಥವಾ 5ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

*ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದರ ಪರಿಣಾಮ ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.* ಈ ತಿರುಗುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.

28.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜುಲೈ 31ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಆಗಷ್ಟ್ 3ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮತ್ತು ಆಗಸ್ಟ್ 4 ಅಥವಾ 5ರ ನಂತರ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಈ ಸಮಯದಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

27.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 27ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 31ರ ತನಕವೂ ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗಷ್ಟ್ 1ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

26.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆ ಮುಂದುವರಿಯಲಿದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗಾಳಿಯೊಂದಿಗೆ ಆಗಾಗ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ,
ಮೈಸೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈಗಿನಂತೆ ಜುಲೈ 31ರ ತನಕವೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗಾಳಿ ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಮುಂದಿನ 10 ದಿನಗಳವರೆಗೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಸಿಗುವ ಸಣ್ಣ ಅವಧಿಗಳಲ್ಲಿ ಸಿಂಪಡಿಸಬೇಕಾಗಬಹುದು.
ಮುಂಗಾರು ಅತ್ಯಂತ ಉತ್ತಮ ಸ್ಥಿತಿಯಲ್ಲಿರುವುದೇ ಈ ಗಾಳಿಗೆ ಕಾರಣವಿರಬಹುದು. ಬೇರೆ ಯಾವುದೇ ಕಾರಣ ಕಾಣಿಸುತ್ತಿಲ್ಲ.

Related Post

Leave a Reply

Your email address will not be published. Required fields are marked *