Breaking
Tue. Dec 17th, 2024
Spread the love

ಆತ್ಮೀಯ ರೈತ ಬಾಂಧವರೇ, ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು.ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಘಟಕ ವೆಚ್ಚ : ₹25 ಲಕ್ಷ / ₹20 ಲಕ್ಷ
ಸಹಾಯಧನ : ಶೇ.50
ಸಾಲ : ಶೇ. 50 (ಶೇ.6 ರಷ್ಟು ಬಡ್ಡಿದರ)

ಯಾಕೆ ಗೊತ್ತಾ ಈ ಯೋಜನಯಡಿಯಲ್ಲಿ ಹಣ ಕೊಟ್ಟು ಅದನ್ನು ಹೊಲ ಗದ್ದೆ ಖರೀದಿಸಲು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಕುತೂಹಲ ಇದೆಯಾ? ಇದಕ್ಕೆಲ್ಲ ಕಾರಣ ಭಾರತದ ಕೃಷಿ ವಿಭಾಗವನ್ನು ಹೆಚ್ಚಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭೂಮಿಯಲ್ಲಿ ಕೆಲಸ ಮಾಡಿ ಅವರ ಆದಾಯವನ್ನು ಇನ್ನಷ್ಟು ಹೆಚ್ಚು ಮಾಡಿಕೊಳ್ಳುವುದು. ಇದರಿಂದ ಭಾರತೀಯ ಆರ್ಥಿಕತೆ ಚೇತರಿಕೆಗೆಗೊಂಡು ನಮ್ಮ ರಾಷ್ಟ್ರದ ಹೆಸರು ಎಲ್ಲ ಕಡೆ ಹರಿದಾಡುವಂತಾಗುತ್ತದೆ.

https://sevasindhu.karnataka.gov.in/Sevasindhu/Kannada

ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು. ಘಟಕ ವೆಚ್ಚದ ಮಿತಿಯೊಳಗೆ ಕನಿಷ್ಟ 2.00 ಎಕರೆ ಖುಷ್ಕಿ, 1.00 ಎಕರೆ ನೀರಾವರಿ, 1/2 ಎಕರೆ ಭಾಗಾಯ್ತು ಖರೀದಿಸಿ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗುವುದು. ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯನ್ನು ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುತ್ತದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಘಟಕ ವೆಚ್ಚವನ್ನು ರೂ.25.00 ಲಕ್ಷಗಳು ಮತ್ತು ಉಳಿದ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ. ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ಮತ್ತು ಶೇ.50 ರಷ್ಟು ಅವಧಿಸಾಲವಾಗಿರುತ್ತದೆ. ಅವಧಿಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ. ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ. ಜಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

• ಭಾವಚಿತ್ರ
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ (Caste and income Certificate)
• ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
• ಕೃಷಿ ಕಾರ್ಮಿಕರ ದೃಡೀಕರಣ ಪತ್ರ

ಪ್ರಧಾನಮಂತ್ರಿ ಮತ್ಯ ಸಂಪದ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೊಸಪೇಟೆ : 2020-21 ರಿಂದ 2023-24ನೇ ಸಾಲಿನಲ್ಲಿ

ಫಲಾನುಭವಿ ಆಧಾರಿತ ಪ್ರಧಾನಮಂತ್ರಿ ಮತ್ಯ ಸಂಪದ ಯೋಜನೆ

ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. 1) ಕನ್‌ಸ್ಪಕ್ಷನ್ಸ್ ಆಫ್ ನ್ಯೂ ರಿಯರಿಂಗ್ ಪೊಂಡ್, 2) ಕನ್‌ಸ್ಟ್ರಕ್ಷನ್ಸ್ ಆಫ್ ಬಯೋಪ್ಲಾಕ್ ಪೊಂಡ್ಸ್ ಫಾರ್ ಬ್ರಾಕಿಶ್ ವಾಟರ್/ಸಿಲೈನ್/ಅಲ್ಕಲೈನ್. 3) ಕನ್‌ಸ್ಪಕ್ಷನ್ಸ್ ಆಫ್ ನ್ಯೂ ಪೊಂಡ್, ಫಾರ್ ಸಲೈನ್/ ಅಲ್ಕಲೈನ್/ ಏರಿಯಾಸ್.. 4) ಎಸ್ಟಾಬ್ಲಿಶ್‌ಮೆಂಟ್ ಆಫ್ ಲಾರ್ಜ್ ಆರ್‌ಎಎಸ್..5) ಮೋಟಾರ್ ಸೈಕಲ್ ವಿಥ್ ಐಸ್ ಬಾಕ್ಸ್, 6) ಸೈಕಲ್ ವಿಥ್ ಐಸ್ ಬಾಕ್ಸಸ್ 7) ನ್ಯು ಗೋ ಔಟ್ ಪೊಂಡ್ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ 60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚ 40 ರಂತೆ ಸಹಾಯಧನ ನೀಡಲಾಗುವುದು.

ಅರ್ಜಿಗಳನ್ನು ಸೆಪ್ಟೆಂಬರ್ 27ರೊಳಗೆ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರು, ಬಳ್ಳಾರಿ ಜಿಲ್ಲೆ ಮೊ.ಸಂ:9449593156, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಹೊಸಪೇಟೆ, ಹಡಗಲಿ ಮೊ.ಸಂ:9620177588 ಹಾಗೂ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕೂಡ್ಲಿಗಿ, ಹರಪನಹಳ್ಳಿ ಮೊ. ಸಂ: 8217725319 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬಳ್ಳಾರಿಯ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ಹಾನಿ ಪರಿಹಾರ : ಆಕ್ಷೇಪಣೆಗೆ ಅರ್ಜಿ ಆಹ್ವಾನ

ಇಲ್ಲಿಯ ಜಿಲ್ಲಾಡಳಿತದ ವತಿಯಿಂದ 2024-25 ನೈಸರ್ಗಿಕ ವಿಕೋಪಗಳಾದ ಪ್ರವಾಹ ಅಥವಾ ಅತಿವೃಷ್ಟಿಯಿಂದ ಜಿಲ್ಲೆಯ ರಾಯಚೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಅರ್ಹ ರೈತರಿಂದ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮೂಲಕ ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ರಾಯಚೂರು ತಾಲೂಕಿನಲ್ಲಿ 85.91 ದೇವದುರ್ಗ430.60 ಹೆಕ್ಟರ್ ಸೇರಿದಂತೆ ಒಟ್ಟು 516.51 ಹೆಕ್ಟರ್ ಹಾನಿಯಾದ ಪ್ರದೇಶ ಎಂದು ಗುರುತಿಸಲಾಗಿದ್ದು, ಜಂಟಿ ಸಮೀಕ್ಷೆಯvಪರಿಶೀಲನಾ ವರದಿಯಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ/ಉಪ ವಿಭಾಗಾಧಿಕಾರಿಗಳ ತಹಶೀಲ್ದಾರರ/ ಗ್ರಾಮ ಪಂಚಾಯತ/ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜಾಲತಾಣದಲ್ಲಿ (https://raichur.nic.in) ಸೆ.10ರಂದು ಪ್ರಕಟಿಸಲಾಗಿದ್ದು, ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಂಬಂಧಿಸಿದ ತಹಶೀಲ್ದಾರ್/ ಕೃಷಿ ಇಲಾಖೆ/ ತಾಲ್ಲೂಕು ಕಚೇರಿಗಳಲ್ಲಿ ಅಥವಾ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ 07ದಿನಗಳ ಒಳಗಾಗಿ ಸಲ್ಲಿಸಬಹುದಾಗಿದೆ. ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗಿಲ್ಲ. ಎಂದಾದಲ್ಲಿ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಸಲು ಕ್ರಮವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿಷನ್ ವಾತ್ಸಲ್ಯ ಯೋಜನೆಯಡಿ ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಮಿಷನ್ ವಾತ್ಸಲ್ಯ ಯೋಜನೆ ಮಾರ್ಗಸೂಚಿಯಂತೆ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕರ ಸರ್ಕಾರಿ ಬಾಲಮಂದಿರ ಹಾಗೂ ಬಾಲಕಿಯರ ಸರ್ಕಾರಿ ಬಾಲಮಂದಿರಗಳಲ್ಲಿನ ಮಕ್ಕಳಿಗೆ 2024-25ನೇ ಸಾಲಿನಲ್ಲಿ ಯೋಗ/ದೈಹಿಕ ಶಿಕ್ಷಣ ಹಾಗೂ ಗಣಿತ, ವಿಜ್ಞಾನ ವಿಷಯಗಳಿಗೆ ಬೋಧಿಸಲು ಅಥವಾ ತರಬೇತಿ ನೀಡಲು ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲಕಿಯರ ಬಾಲಮಂದಿರ ಸಂಸ್ಥೆಯಲ್ಲಿ ಯೋಗ/ದೈಹಿಕ ಶಿಕ್ಷಕರ 01 ಹುದ್ದೆಗೆ ಡಿಪ್ಲೋಮ್ ಇನ್ ದೈಹಿಕ ಶಿಕ್ಷಣ/ಯೋಗ, ಬಿಪಿ.ಎಡ್/ಸಿಪಿ.ಎಡ್/ಸ್ಪೆಷಲ್ ಟ್ರೈನಿಂಗ್ ಇನ್ ಯೋಗ ವಿದ್ಯಾರ್ಹತೆ ಹಾಗೂ ಕನಿಷ್ಠ ಮೂರು ವರ್ಷ ಅನುಭವವನ್ನು ಹೊಂದಿರಬೇಕು. ಬಾಲಕರ ಸರ್ಕಾರಿ ಬಾಲಮಂದಿರ ಸಂಸ್ಥೆಯಲ್ಲಿ ಗಣತಿ/ವಿಜ್ಞಾನ ಶಿಕ್ಷಕರ 01 ಹುದ್ದೆಗೆ ಬಿಎಸ್‌ಸಿ, ಬಿ.ಎಡ್. ಎಮ್ ಅನುಭವವನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಪೊಲೀಸ್ ಪರಿಶೀಲನಾ ವರದಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 20 ಸಂಜೆ 5 ಗಂಟೆಯೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಅಪೂರ್ಣ ಹಾಗೂ ವಿಳಂಬವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539- 225030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪ್ರೈಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನ

ಎ ಎಲ್ ತಾಂತ್ರಿಕ ತರಬೇತಿ ಸಂಸ್ಥೆ ಮೂಲದ ಎಚ್.ಎ.ಎಲ್ ವಿಭಾಗದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅಪ್ರೇಂಟಿಸ್‌ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಐಟಿಐನಲ್ಲಿ ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ನಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪ್ರೆಟರ್ ಆ್ಯಂಡ್ ಪ್ರೋಗ್ರಾಮಿಂಗ್ ಅಶಿಸ್ಟೆಂಟ್, ಕಾರ್‌ಪೆಂಟರ್ ಕಮ್ ಆಪರೆಟರ್‌ಗಳಲ್ಲಿ ಕರ್ನಾಟಕ ಮಾನ್ಯತೆ ಪಡೆದ ಮತ್ತು ಐಟಿಐ ಕೋರ್ಸಿನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ apprenticeshipindia. ರಾತಎಟಿ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಲಭ್ಯವಿದ್ದು, 2.05.10.2024 ರೊಳಗಾಗಿ ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುವರ್ಣ ವಿಧಾನ ಸೌಧ ಕೆಳಮಹಡಿಯರುವ ಜಿಲ್ಲಾ ಉದ್ಯೋಗ ವಿನಿಮಯದ ಸಹಾಯಕ ನಿರ್ದೇಶಕರು ಕೇಂದ್ರಕ್ಕೆ ಅಥವಾ 08312443948 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಶಿಕ್ಷಕರುಗಳಿಂದ ಅರ್ಜಿ ಆಹ್ವಾನ

ಬೆಳಗಾವಿ : 2024ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಅಥವಾ ಸಲ್ಲಿಸಿರುವ ವಿಶೇಷ ಶಿಕ್ಷಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಅಂತಿಮದಿನಾಂಕ 15-10-2024 ನ್ನು ನಿಗದಿಗೊಳಿಸಲಾಗಿದೆ.

ಆಸಕ್ತಿಯುಳ್ಳ ವ್ಯಕ್ತಿ, ವಿಶೇಷ ಶಿಕ್ಷಕರು. ಸಂಸ್ಥೆಯವರು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ www. dwdsc.kar.nic.in ಕಛೇರಿಯಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 15 ಒಳಗಾಗಿ ದ್ವಿ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ 0831-2476096/7, 8050609098

ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ಸರ್ಕಾರ ನಿರ್ಧಾರ

ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ (ಅಸೆಟ್ ಮಾನಿಟೈಸೇಷನ್) ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ. ತೆರಿಗೆಯೇತರ ಆದಾಯ ಸಂಪನ್ಮೂಲಗಳನ್ನು ಹೆಚ್ಚಿಸಲು, ಸರ್ಕಾರದ ಆಸ್ತಿಗಳ ಸಮರ್ಪಕ ಬಳಕೆ, ನಿರ್ವಹಣೆ ಮತ್ತು ತನೂಲಕ ಖಾಸಗಿ ಬಂಡವಾಳವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಆಕರ್ಷಿಸಲು ಸಲಹೆಗಳನ್ನು ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹ ಸಾಮರ್ಥ್ಯ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕ ರಣದ ಅವಕಾಶವನ್ನು ಗುರುತಿಸಲು ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿಯನ್ನು ರಚಿಸಲಾಗಿದೆ.

ಸಮಿತಿಯಲ್ಲಿ ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರಿಯ ಮಂಡಳಿ ಮಾಜಿ ಅಧ್ಯಕ್ಷ ನಜೀಬ್ ಶಾ, ನಿವೃತ್ತ ಐಎಎಸ್ ಅಧಿಕಾರಿ ಎಚ್. ಶಶೀಧರ್, ಐಎಸ್‌ಇಸಿ ಸಂಸ್ಥೆಯ ಪ್ರೊಫೆಸ‌ರ್ ಡಾ. ಕೃಷ್ಣರಾಜು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಕಾರ್ಯವ್ಯಾಪ್ತಿಯು ಇಲಾಖೆಗಳ ಕೆಲವು ಯೋಜನೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಸೀಮಿತಗೊಂಡಿದೆ. ಹೊಸ ಮೂಲ ಸೌಕರ್ಯಗಳು ಹಾಗೂ ಸಂಪನ್ಮೂಲಗಳನ್ನು ಸೃಷ್ಟಿಸಿ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವ ವಿಶಾಲ ಕಾರ್ಯವ್ಯಾಪ್ತಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಪಾಲುಗಾರಿಕೆಯನ್ನು ಹೆಚ್ಚಿಸಲು, ಆಸ್ತಿ ನಗದೀಕರಣ ಗುರುತಿಸಲು ಸಮಿತಿ ಕೆಲಸ ನಿರ್ವಹಿಸಬೇಕಿದೆ ಎಂದು ಕಳೆದ ಆಗಸ್ಟ್ 23ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಈ ಸಮಿತಿಯು ಹೊಸ ತೆರಿಗೆಯೇತರ ಆದಾಯದ ಮೂಲಗಳನ್ನು ಗುರುತಿಸಬೇಕು, ಖಾಸಗಿ ಸಹಭಾಗಿ ತ್ವದಲ್ಲಿ ಆಸ್ತಿ ನಗದೀಕರಣ ಮೂಲಕ ಆದಾಯ ಹೆಚ್ಚಿಸಲು ಇರುವ ಹೊಸ ಅವಕಾಶಗಳು ಹಾಗೂ ಕಾರ್ಯ ಸಾಧ್ಯವಾದ ಯೋಜನೆಗಳನ್ನು ಗುರುತಿಸಬೇಕು.

ರಾಜ್ಯದ ಪ್ರಸ್ತುತ ತೆರಿಗೆಗಳು, ತೆರಿಗೆಯೇತರ ಆದಾಯದ ಮೂಲಗಳನ್ನು ವಿಸ್ತ- ರಿಸಲು ಮತ್ತು ತೆರಿಗೆ ಸಂಗ್ರಹಣೆಯನ್ನು ಹೆಚ್ಚಿಸಲು ಕಾರ್ಯ ಸಾಧ್ಯವಿರುವ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಸ್ತಿ ನಗದೀಕರಣ ಯೋಜನೆಗಳನ್ನು ಪರಿಣಾಮ ಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನ ಗೊಳಿಸಲು ಬಲಿಷ್ಠ ನಿಯಮಾವಳಿಗಳು, ಪರಿಣಾಮಕಾರಿ ಕಾರ್ಯತಂತ್ರ ಮತ್ತು ಪಾರದರ್ಶಕ ಕಾರ್ಯ ವಿಧಾನಗಳನ್ನು ರೂಪಿಸಬೇಕು ಸರ್ಕಾರ ಸಮಿತಿಗೆ ಕಾಲಕಾಲಕ್ಕೆ ಸೂಚಿಸಬಹುದಾಗಿದ್ದು, ಸಮಿತಿ ತನ್ನದೇ ಆದ ಕಾರ್ಯ ವಿಧಾನಗಳನ್ನು ರೂಪಿಸಿಕೊಂಡು, ಪರಶೀಲನಾರ್ಹ ಅಂಶಗಳಿಗೆ ಅಗತ್ಯ ಎನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

ಸಮಿತಿ 12 ತಿಂಗಳೊಳಗಾಗಿ ಶಿಫಾರಸ್ಸುಗಳ ವರದಿಯನ್ನು ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆ ಆದೇಶಿಸಿದೆ. ಕೇಂದ್ರ ಸರ್ಕಾರ ಆಸ್ತಿ ನಗದೀಕರಣ ಯೋಜನೆಯನ್ನು ಜಾರಿಗೆ ತಂದಾಗ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಸರ್ಕಾರದ ಸ್ವತ್ತುಗಳನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿದ್ದವು. ಈಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸ್ಥಳೀಯ ಸ್ವತ್ತುಗಳನ್ನು ಪರಭಾರೆ ಮಾಡಲು ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅದರಲ್ಲೂ ಪಂಚಖಾತ್ರಿ ಯೋಜನೆಗಳನ್ನು ರಾಜಕೀಯ ಕಾರಣಕ್ಕೆ ಜಾರಿಗೆ ತಂದು ಸಂಪನ್ಮೂಲ ಕ್ರೂಢೀಕರಣಕ್ಕೆ ಆಸ್ತಿಗಳ ಪರಭಾರೆಗೆ ಮುಂದಾಗಿರುವುದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ.

ಬೀದಿ ಬದಿ ವ್ಯಾಪಾರಿಗಳು ಆರ್ಥಿಕವಾಗಿ ಸದೃಢರಾಗಲು ಪಿ.ಎಂ.ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯಿರಿ

ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರವನ್ನು ವಿಸ್ತರಿಸಿಕೊಳ್ಳಲು ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದ್ದು, ಸದರಿ ಸೌಲಭ್ಯವನ್ನು ವ್ಯಾಪಾರಿಗಳು ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಸದರಿ ಯೋಜನೆಯಡಿ ಯಾದಗಿರಿ ಜಿಲ್ಲೆಯ ಪ್ರಗತಿಯು ರಾಜ್ಯದಲ್ಲಿ 03 ನೇ ಸ್ಥಾನದಲ್ಲಿರುವುದು ಸಂತೋಷಕರ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶಿಲ ಬಿ. ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ನಗರಸಭೆ ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಬುಧವಾರದಂದು ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ( ಪಿಎಂ ಸ್ವನಿಧಿ) ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ( ನಾನು ಕೂಡ ಡಿಜಿಟಲ್) ಆರಿವು ಮೂಡಿಸುವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಬೀದಿ ವ್ಯಾಪಾರಿಗಳಿಗೆ ಸಾಂಕೇತಿಕವಾಗಿ ಡಿಜಿಟಲ್ ಗುರುತಿನ ಚೀಟಿ, ಕ್ಯೂ ಆರ್ ಕೋಡ್. ಸಾಲದ ಚೆಕ್ಕುಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಯಾದಗಿರಿ ಜಿಲ್ಲೆಯು ಶೇ. 111 ರಷ್ಟು ಪ್ರಗತಿ ಸಾಧಿಸಿದೆ. ಈ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯದ ಜೊತೆಗೆ ಡಿಜಿಟಲ್ ವ್ಯವಹಾರ ಮಾಡಲು ಕ್ಯೂ ಆರ್ ಕೊಡ್ ನ್ನು ಉಪಯೋಗಿಸಬೇಕು ಎಂದರು. ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಶೇ. 90 ರಷ್ಟು ಬೀದಿ ವ್ಯಾಪಾರಿಗಳು ಕ್ಯೂ ಆರ್ ಕೋಡ್ ಬಳಸುತ್ತಿದ್ದಾರೆ ಹಾಗೂ ಸುಮಾರು ಜನರು ತೆಗೆದುಕೊಂಡ ಸಾಲದ ಮರು ಪಾವತಿ ಸಹ ಆಗುತ್ತಿದೆ ಎಂಬುದು ಗಮನಕ್ಕೆ ಬಂದಿರುತ್ತದೆ. ನಮ್ಮ ಜಿಲ್ಲೆಯ ಬೀದಿ ವ್ಯಾಪಾರಿಗಳು ಯಾವುದೇ ಸಂಕಷ್ಟಕ್ಕೆ ಸಿಲುಕಿಕೊಳ್ಳಬಾರದು. ತಾವು ಬೇರೆ ಜಿಲ್ಲೆಗಳಿಗೆ ಮಾದರಿ ಆಗಬೇಕು.

ಎಲ್ಲಾ ಬೀದಿ ವ್ಯಾಪಾರಿಗಳು ಕಡ್ಡಾಯವಾಗಿ ನಗರಸಭೆ ವತಿಯಿಂದ ನೀಡಲಾಗುವ ಗುರುತಿನ ಚೀಟಿಯನ್ನು ತೆಗೆದುಕೊಳ್ಳಬೇಕು ಹಾಗೂ ವ್ಯವಹಾರದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಕೂಡಾ ಗಮನ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರ ಮಾಡುವವರು ಕಡ್ಡಾಯವಾಗಿ ನಗರಸಭೆ ವತಿಯಿಂದ ನೀಡಲಾಗುವ ಗುರುತಿನ ಚೀಟಿಯನ್ನು ತೆಗೆದುಕೊಳ್ಳಬೇಕು ಹಾಗೂ ವಿವಿಧ ಬ್ಯಾಂಕುಗಳಿಂದ ದೊರೆಯುವ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಸಾಲ ವಿತರಣೆಯಲ್ಲಿ ಬ್ಯಾಂಕಿನಿಂದ ತೊಂದರೆಯಾದಲ್ಲಿ ನಗರಸಭೆಯನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಭೀಮರಾವ ಪಾಂಚಾಳ ಮಾತನಾಡಿ: ಜಿಲ್ಲೆಯ ವಿವಿಧ ಬ್ಯಾಂಕುಗಳಲ್ಲಿ ಸಾಲ ವಿತರಿಸಲು ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಈಗಾಗಲೇ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳಿಗೆ ನಿರ್ದೇಶನ ನೀಡಲಾಗಿದೆ. ಸಾಲ ಪಡೆದುಕೊಂಡ ಬೀದಿ ವ್ಯಾಪಾ- ರಿಗಳು ತಪದೇ ಸಾಲ ಮರು ಪಾವತಿ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಹಾಯಕ ಕಾರ್ಯಪಾಲಕ ಅಭಿಯಂತರ ರಜನಿಕಾಂತ ಮಾತನಾಡಿ: ನಗರದಲ್ಲಿ ಬೀದಿ ವ್ಯಾಪಾರಿಗಳು ವ್ಯಾಪಾರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ತಮ್ಮ ವ್ಯಾಪಾರ ಮಾಡಬೇಕು ಹಾಗೂ ನಗರದ ವಿವಿಧ ಕಡೆಗೆ ನಗರಸಭೆ ವತಿಯಿಂದ ಒಣ ಕಸ ಹಸಿ ಕಸದ ಬುಟ್ಟಿಗಳನ್ನು ಇಡಲಾಗಿದೆ.

ಬೀದಿ ವ್ಯಾಪಾರಗಳು ಈ ಬುಟ್ಟಿಗಳಲ್ಲಿಯೇ ಕಸವನ್ನು ಹಾಕಿ ನಗರದಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್.ಬಿ.ಐ ಪ್ರಾದೇಶಿಕ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ದೀಪಕ್, ಕೆನರಾ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಆಲೋಕ್, ನಗರ ವೈಧ್ಯಾಧಿಕಾರಿ ಡಾ. ವಿನೂತಾ, ಜಿಲ್ಲಾ ಕೌಶಲ್ಯ ಮಿಷನ್ ಸಹಾಯಕ ನಿರ್ದೇಶಕ ಬಸಪ್ಪ ತಳವಡಿ, ಅಭಿಯಾನ ವ್ಯವಸ್ಥಾಪಕರು ವಿಠೋಬ ಬಿ ಹಾಗೂ ವಿಜಯಕುಮಾರ ಪಾಟೀಲ್, ಎಸ್.ಬಿ.ಐ ಬ್ಯಾಂಕ್ ಚಿತ್ತಾಪುರ ರಸ್ತೆ ವ್ಯವಸ್ಥಾಪಕಿ ಜ್ಯೋತಿಕುಮಾರಿ, ಸಮುದಾಯ ಸಂಘಟಕ ಭೀಮಣ್ಣ ಕೆ. ವೈದ್ಯ, ಜಿಲ್ಲಾ ಲೀಡ್ ಬ್ಯಾಂಕ್ ಸಹಾಯಕ ಅಮೀರ್ ಪಟೇಲ್, ನಗರದ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಸಮುದಾಯ ಸಂಘಟಕರು ಮತ್ತು ಸಮುದಾಯ ಸಂಘಟಕರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *