Breaking
Tue. Dec 17th, 2024

ನಮ್ಮ ರಾಜ್ಯದ 7 ಲಕ್ಷ ರೈತರಿಗೆ 2000 ರೂ ಬೆಳೆ ಪರಿಹಾರ ಜಮಾ, ಚೆಕ್ ಸ್ಟೇಟಸ್

Spread the love

ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service92/

ಆಮೇಲೆ Year/ವರ್ಷ 2023-24, Season Kharif Calamity Type Drought ಸೆಲೆಕ್ಟ್ ಮಾಡಿ Get Data/ ಹುಡುಕು ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆಮೇಲೆ ಕೆಳಗೆ ಆಧಾರ್ ಕಾರ್ಡ್ ನಂಬರ್ ಹಾಕಿ Fetch ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಕೆಳಗಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಹುಡುಕಿ.

ಎಚ್‌ಡಿಕೆ ಮಂಡ್ಯಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಉಳಿಸಿಕೊಳ್ತಾರೆ : ಡಿ.ಕೆ.ಸುರೇಶ್

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರು ಚನ್ನಪಟ್ಟಣ ಬಿಟ್ಟು ಹೋಗಲ್ಲ, ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿ ಅವರಿಗೆ ಅಧಿಕಾರ ಮುಖ್ಯವಲ್ಲ, ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಗೌರವ ಮುಖ್ಯ ಎಂದು ಭಾವಿಸಿ ನಿಮ್ಮನ್ನು ಅವರು ಉಳಿಸಿಕೊಳ್ಳುವ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದು ವ್ಯಂಗ್ಯವಾಡಿದರು. ಇಲ್ಲಿನ ಜನ ಕುಮಾರಸ್ವಾಮಿಯವರ ಕಷ್ಟಕಾಲದಲ್ಲಿ ಕೈಹಿಡಿದ ಹಿನ್ನೆಲೆಯಲ್ಲಿ ನಿಮ್ಮ ಮೇಲಿನ ಪ್ರೀತಿಯಿಂದ ಕ್ಷೇತ್ರವನ್ನು ಉಳಿಸಿಕೊಳ್ಳುವರು ಎಂಬ ನಂಬಿಕೆ ಇದೆ.

ಕುಮಾರಸ್ವಾಮಿಯವರು ಒಂದು ಕಣ್ಣು ಅಲ್ಲಿದೆ. ಒಂದು ಕಣ್ಣು. ಇಲ್ಲಿದೆ ಅನ್ನುತ್ತಿದ್ದರು. ಆದ್ದರಿಂದ ಅವರಿಗೆ ಅಧಿಕಾರ ಮುಖ್ಯವಲ್ಲ, ನೀವು ಮುಖ್ಯವಾಗುತ್ತೀರಾ. ಮಣ್ಣಿನ ಮಕ್ಕಳಿಗೆ ಗೌರವ ಕೊಡುವ ಕೆಲಸವನ್ನು ಅವರು ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಕಳೆದ ಮೂರು ಅವಧಿಯಲ್ಲಿ ಸಂಸದನಾಗಿ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದೆ. ಜನ ನನಗೆ ಕೂಲಿ ಕೊಡಲು ಆಗುವುದಿಲ್ಲ ಎಂದು ವಿರಾಮ ನೀಡಿದ್ದಾರೆ. ಜನ ವಿರಾಮ ನೀಡಿರುವುದು ಅಭಿವೃದ್ಧಿಗೆ ಹೊರತು ನನಗಲ್ಲ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಯಾರನ್ನು ಹೊಣೆ ಮಾಡುವುದಿಲ್ಲ ಎಂದು ತಿಳಿಸಿದರು. ಜಾತಿ ಅಡ್ಡಬರುತ್ತದೆ ಅಂದುಕೊಳ್ಳಲಿಲ್ಲ.

ಕ್ಷೇತ್ರದಲ್ಲಿ ಸಾಕಷ್ಟು ಚೆಕ್ ಡ್ಯಾಂ ನಿರ್ಮಿಸುವ ಮೂಲಕ ನೀರಿನ ಸಮಸ್ಯೆ ಪರಿಹರಿಸಲು ಶ್ರಮಿಸಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯು ಶೇ.96ರಷ್ಟು ಫಲಾನುಭವಿಗಳಿಗೆ ತಲುಪಿರುವುದಕ್ಕೆ ನನ್ನ ಶ್ರಮವೇ ಕಾರಣ. ನಾನು ಎಲ್ಲೂ ಜಾತಿ ನೋಡಲಿಲ್ಲ. ಆದರೆ ಲೋಕಸಭಾ ಚುನಾವಣೆಯಲ್ಲಿ ನನಗೆ ಜಾತಿ ಅಡ್ಡ ಬರುತ್ತದೆ ಅಂದುಕೊಂಡಿರಲಿಲ್ಲ. ಭಾವನಾತ್ಮಕ ವಿಚಾರ ಕೆಲಸ ಮಾಡುತ್ತದೆ ಎಂದು ಗೊತ್ತಿರಲಿಲ್ಲ. ನಾನೇನು ತಪ್ಪು ಮಾಡಿದೆ ಎಂದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನೇನು ಕೆಲ ತಿಂಗಳಲ್ಲೇ ಜಿಪಂ ಹಾಗೂ ತಾಪಂ ಸ್ಥಳೀಯ ನಾಯಕತ್ವ ಬೆಳೆಸುವ ಕೆಲಸ ಮಾಡಿ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಜತೆ ನಿಲ್ಲುತ್ತೇನೆ ಎಂದು ತಿಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಿಲ್ಲೆಯ ಜನ ಸಹಕರಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳು ನಿಲ್ಲುವ ಕುರಿತು ವದಂತಿ ಇದೆ. ಆದರೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು. ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ. ರಾಮೋಜಿಗೌಡ, ಮಾಜಿ ಶಾಸಕ ಎಂ.ಸಿ.ಅಶ್ವತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ಪ್ರಮೋದ್, ಸುನೀಲ್, ಮುಖಂಡರಾದ ದುಂತೂರು ವಿಶ್ವನಾಥ್ ಇತರರು ಇದ್ದರು.

ಕೇರಳಕ್ಕೆ ಪ್ರಯಾಣ ಬೆಳೆಸುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತ ಕೋರಿದರು.

ಗಿಲ್ಲೇಸೂಗೂರು ಅಲ್ಪಸಂಖ್ಯಾತರ ವಸತಿ ಶಾಲೆ : ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲೆಯ ಗಿಲ್ಲೇಸೂಗೂರಿನ ಆಶ್ರಯ ಕಾಲೋನಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಉನ್ನತೀಕರಿಸಿದ ವಸತಿ ಶಾಲೆಯಲ್ಲಿ ವಿವಿಧ ಶಿಕ್ಷಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕನ್ನಡ ವಿಷಯ-01 ಉಪನ್ಯಾಸಕರ ಹುದ್ದೆ, ಇಂಗ್ಲಿಷ್-01 ಉಪನ್ಯಾಸಕರ ಹುದ್ದೆ, ಹಿಂದಿ-01 ಉಪನ್ಯಾಸಕರ ಹುದ್ದೆ, ಭೌತಶಾಸ್ತ್ರ-01 ಉಪನ್ಯಾಸಕರ ಹುದ್ದೆ, ರಾಸಾಯನಶಾಸ್ತ್ರ-01 ಉಪನ್ಯಾಸಕರ ಹುದ್ದೆ, ಉಪನ್ಯಾಸಕರ ಹುದ್ದೆ, ಗಣಿತ (ಪಿಸಿಎಮ್)-01 ಸಹ ಶಿಕ್ಷಕರು, ವಿಜ್ಞಾನ (ಸಿಬಿಜೆಡ್)-01 ಸಹ ಶಿಕ್ಷಕರು, ಸಮಾಜ ವಿಜ್ಞಾನ-01 ಸಹ ಶಿಕ್ಷಕರು ಹುದ್ದೆಗೆ ಜೂನ್.15ರೊಳಗಾಗಿ ಅಗತ್ಯ ದಾಖಲಾತಿಗಳ ಹಾಗೂ ಸ್ವ-ವಿವರದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಸ್ಪಾನರ್ಸ-01 ದೂರವಾಣಿ ಸಂಖ್ಯೆ: 96634666051 ಮಾಡಬಹುದಾಗಿದೆ ಎಂದು ಅಲ್ಪಸಮಖ್ಯಾತರ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *