Breaking
Sun. Dec 22nd, 2024

ಇಂದು ಮದ್ಯಾಹ್ನ 3.45 ಕ್ಕೆ ನಮ್ಮ ತಾಯಿಗೆ 2000 ರೂ ಗೃಹಲಕ್ಷ್ಮಿ ಹಣ ಜಮಾ

Spread the love

ಇಂದು ಮದ್ಯಾಹ್ನ 3.45 ಕ್ಕೆ ನಮ್ಮ ತಾಯಿಯ ಖಾತೆಗೆ 2000 ರೂ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ನಿಮಗೂ ಬಂದಿದೆಯಾ check ಮಾಡಿ.

ಹಣ ನಿಮಗೆ ಬಂದಿದೆಯಾ ಚೆಕ್ ಮಾಡುವುದು ಹೇಗೆ ನೋಡಿ?

https://bhoomisuddi.com/grilahakshmi-4th-installment-deposited-how-to-check-status-check/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಫಲ : ಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಚಿವ ಎಚ್.ಕೆ.ಪಾಟೀಲ

ಈ ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿ ಆಸ್ವಾದಿಸಬೇಕೆಂದರು. ಪ್ರದರ್ಶನವನ್ನು ಉದ್ಘಾಟಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಫಲ-ಪುಷ್ಪ ಪ್ರದರ್ಶನ ಎನ್ನುವದಕ್ಕಿಂತ ಕಲಾ ಪುಷ್ಪ ಪ್ರದರ್ಶನ ಎನ್ನುವದು ಉತ್ತಮ ಎನ್ನುವಂತಿದೆ. ಇದೊಂದು ಶ್ರೇಷ್ಠ ಪ್ರದರ್ಶನವಾಗಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಉಚಿತ ಅವಕಾಶವನ್ನು ಇಲಾಖೆಯಿಂದ ಮಾಡಲಾಗಿದ್ದು ಜನಸಾಮಾನ್ಯರು ಶೈಲೇಂದ್ರ ಬಿರಾದಾರ, ಗೀರಿಶ ಹೊಸೂರ, ಗಣ್ಯರಾದ ಬಿ.ಬಿ.ಅಸೂಟಿ, ಅಶೋಕ ಮಂದಾಲಿ. ಎಸ್. ಎನ್.ಬಳ್ಳಾರಿ ಸೇರಿದಂತೆ ಇತರರು ಇದ್ದರು.

ಪ್ರದರ್ಶನದ ಆಕರ್ಷಣೆಗಳು: ಗುಲಾಬಿ ಹೂವುಗಳಿಂದ ಅಲಂಕೃತಗೊಂಡ ವೀರನಾರಾಯಣ ದೇವಸ್ಥಾನ, ಸಿರಿಧಾನ್ಯಗಳಲ್ಲಿ ಅರಳಿದ ಕನ್ನಡಾಂಬೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ, ಮರಳಿನಲ್ಲಿ ಸಾಂಸ್ಕೃತಿಕ ರಾಯಭಾರಿ ಬಸವಣ್ಣನ ಮೂರ್ತಿ, ಏಲಕ್ಕಿಯಲ್ಲಿ ಗಣೇಶನ ಮೂರ್ತಿ, ಹೂವುಗಳಲ್ಲಿ ಅಲಂಕೃತಗೊಂಡಿರುವ ಸೆಲ್ಪಿ ಪಾಯಿಂಟ್‌ಗಳು, ತಬಲಾ, ಪಿಯಾನೋ, ಕಲ್ಲಂಗಡಿ ಹಣ್ಣಿನಲ್ಲಿ ಕೆತ್ತನೆಗೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳು ನೋಡುಗರ ಗಮನ ಸೆಳೆದವು.

ಮತ್ತೊಂದೆಡೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆದಿರುವ ತಾಳೆ, ಸೇವಂತಿಗೆ, ಚೆಂಡು ಹೂವು. ಲಿಂಬೆ, ಹೂಕೋಸು, ಟೊಮ್ಯಾಟೊ, ಹುಣಸೆ, ಪಪ್ಪಾಯಿ, ಕಪ್ಪು ದ್ರಾಕ್ಷಿ, ದ್ರಾಕ್ಷಿ, ಪೇರಲ, ಚಿಕ್ಕು, ಮಾವು, ನುಗ್ಗೆಕಾಯಿ, ಹೀರೇಕಾಯಿ, ಬಾಳೆ, ಯಾಲಕ್ಕಿ ಬಾಳೆ, ಈರುಳ್ಳಿ, ಚಕ್ಕೋತಾ, ಗೋಡಂಬಿ, ಎಳ್ಳೆದೆಲೆ ಸೇರಿ ವಿವಿಧ ತರಕಾರಿ, ಹಣ್ಣುಗಳು, ಹೂವುಗಳು ಸಾರ್ವಜನಿಕರನ್ನು ಆಕರ್ಷಿಸಿದವು. ಅದರಲ್ಲೂ ನೋಡಲು ಹಾಗೂ ತಿಣ್ಣಲು ಅಪರೂಪವಾದ ರಾಮ ಗಮನ ಸೆಳೆದವು. ಫಲ-ಪುಷ್ಪ ಪ್ರದರ್ಶನದಲ್ಲಿ ಫಲ, ಸೀತಾ ಫಲ, ಸ್ಟಾರ್ ಫ್ರುಟ್ಸ್

ಮೀನುಗಾರಿಕೆ ಇಲಾಖೆಯು ಕೂಡ ವಿವಿಧ ಬಗೆಯ ಮೀನುಗಳನ್ನು ಸಾರ್ವಜನಿಕರಿಗೆ ಪರಿಚಯಿಸಿದವು. ಆಸ್ಕರ್ ಫಿಶ್, ಟೈಗರ್ ಬರ್ಬ್, ಕಲರ್ ವಿಡೋವ್ ಟೆಟ್ರಾ, ಬ್ಲಾಕ್ ಮೋರ್ ಫಿಶ್, ಗಪ್ಪಿ ಫಿಶ್, ಬ್ಲಾಕ್ ಘೋಸ್ಟ್ ಫಿಶ್, ಗೋಲ್ಡ್ ಫಿಶ್, ಟೈಗರ್ ಶಾರ್ಕ್, ಅಂಜೆಲ್, ಫ್ಲಾವರ್ ಹಾರ್ನ್ ಫಿಶ್ ಗಳನ್ನು ನೋಡಿ ಕಣ್ಣುಂಬಿಕೊಂಡರು.

ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರ

ದೇಶದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವಾಗಿದ್ದು, ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ ಅವರು, ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಫೆ.11 ರಂದು ನಗರದ ಗಾಂಧಿಭವನದಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ, ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ಜಿಲ್ಲೆಯ ನೋಂದಾಯಿತ ಸ್ಯಾನಿಂಗ್ ಸೆಂಟರ್ ವೈದ್ಯರುಗಳಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ ಕುಂದ‌ರ್ ಅವರು ಮಾತನಾಡಿ, ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡಲು ಹೆರಿಗೆಗೆ ಮುನ್ನ ಭ್ರೂಣಲಿಂಗ ಪತ್ತೆ ಮಾಡುವ ನಿಷೇಧ ಕಾಯ್ದೆ-1994 ಜಾರಿಯಲ್ಲಿದೆ. ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಕಾನೂನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮಕ್ಕೆ ಅವಕಾಶವಿದೆ ಎಂದು ಹೇಳಿದರು.

ಇದರಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳು, ಕಾನೂನು ಕ್ರಮಗಳು, ದಾಖಲಾತಿಗಳ ನಿರ್ವಹಣೆ ಕುರಿತು ಎಐಎಂಸಿ ಸದಸ್ಯರಾದ ಪಿಸಿ&ಪಿಎಡಿಟಿಯ ಗೊರಕ ಮಂದ್ರಪಕರ ಅವರು ಹಾಗೂ ಕುಟುಂಬದ ವ್ಯವಸ್ಥೆ ಮೇಲೆ ಬೀರುವ ಪರಿಣಾಮ, ವಿವಾಹ ವಿಚ್ಛೇದನ, ಮತ್ತಿತರ ಸಮಸ್ಯೆ ಕುರಿತು ಪಿಸಿ&ಪಿ ಎಡಿಟಿ ವಿಭಾಗದ ಉಪ ನಿರ್ದೇಶಕರಾದ ಡಾ.ಚಂದ್ರಿಕಾ, ಸ್ತ್ರೀರೋಗ ತಜ್ಞರು, ರೇಡಿಯೋಲಾಜಿಸ್ಟ್, ವೈದ್ಯರುಗಳಿಗೆ ಉಪನ್ಯಾಸ ನೀಡಿದರು.

Related Post

Leave a Reply

Your email address will not be published. Required fields are marked *