Breaking
Wed. Dec 18th, 2024

2022-23 ನೇ ಸಾಲಿನ ಮುಂಗಾರು/ಹಿಂಗಾರಿನ ಬೆಳೆ ವಿಮೆ ಹಣ ಬಂದಿಲ್ಲ ಅಂದರೆ ಈಗ ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಬಹುದು

Spread the love

2022-23 ನೇ ಸಾಲಿನ ಮುಂಗಾರು/ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ರೈತರ ವಿವರಗಳನ್ನೂ ನೋಡುವುದು ಹೇಗೆ?

ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://samrakshane.karnataka.gov.in/Premium/CheckStatusMain_aadhaar.aspx

ನಂತರ ಅಲ್ಲಿ ನಿಮ್ಮ ಪ್ರಪೋಸಲ್ ನಂಬರ್ proposal number, ಮತ್ತು ಕ್ಯಾಪ್ಚರ್ ಕೋಡ್ ಅನ್ನು ಹಾಕಿ ಸರ್ಚ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಹಾಗೆ ನಿಮಗೆ ಒಂದು ಪುಟ ನಿಮ್ಮ ಮುಂದೆ ಬರುತ್ತದೆ ಅದರಲ್ಲಿ ಸರಿಯಾದ ಮಾಹಿತಿ ಇರುತ್ತದೆ. ಮೊದಲು ಕೆಳಗೆ ಇರುವ ಚಿತ್ರದಲ್ಲಿ ಏನಿದೆ ಎಂದು ನೋಡಿ. Verified and Rejected by Insurance Company After Crop Verification/Verified and Rejected by Insurance Company After Crop Verification/Proposal Marked For verification/ Verification Done and Proposal Proposed for Rejection. ಅದೇ ರೀತಿ ನಿಮಗೂ ಕೂಡ ಈ ರೀತಿ ಬಂದಿದ್ದರೆ ನಾವು ಕೆಳಗೆ ತಿಳಿಸಿರುವ ಹಾಗೆ ಕೆಲಸ ಮಾಡಿ.

ಚಿತ್ರದಲ್ಲಿ ಕಾಣುವ ಹಾಗೆ ನಿಮ್ಮ ತಲಾಟಿ ಅಂದರೆ ಗ್ರಾಮ ಸೇವಕನ ಹತ್ತಿರ ಈ ರೀತಿಯ ಒಂದು ಪಟ್ಟಿ ಇರುತ್ತದೆ. ಪಟ್ಟಿಯಲ್ಲಿ ನಿಮ್ಮ ಯಾವ ತೋಟಗಾರಿಕೆ ಬೆಳೆಯ ಬೆಳೆಯುಮೆ ಬಂದಿಲ್ಲ ಅಥವಾ ತಿರಸ್ಕಾರಗೊಂಡಿದೆ ಎಂದು ಇರುತ್ತದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲಾತಿಗಳು ಬೇಕು?

ಈ ಮೇಲೆ ತಿಳಿಸಿರುವ ಪಟ್ಟಿಯಲ್ಲಿರು ರೈತರ 2022-23 ನೇ ಸಾಲಿನ ಮುಂಗಾರು/ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕೃತಗೊಂಡ ಕಾರಣ ರೈತರು 2022-23 ನೇ ಸಾಲಿನ ಉತಾರ-ಉತಾರದಲ್ಲಿ ವಿಮಾ ತುಂಬಿರುವ ಬೆಳೆಯ ಹೆಸರು ನಮೂದಾಗಿರಬೇಕು ಅಥವಾ ಕನಿಷ್ಠ ಬೆಂಬಲ ಬೆಲೆ ರಸೀದಿ ಅಥವಾ ಎ.ಪಿ.ಎಂ.ಸಿ ಮಾರುಕಟ್ಟೆ ರಸೀದಿಯನ್ನು ಲಗತ್ತಿಸಿ ದಿನಾಂಕ 29-02-2024 ರ ಒಳಗೆ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿಯನ್ನು (ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ, ಗದಗ ಕಚೇರಿಗೆ ಸಲ್ಲಿಸಬೇಕು) ಸಲ್ಲಿಸಬೇಕು.

ವಿದ್ಯುತ್ ಮಗ್ಗಗಳಿಗೆ ಹಳೆಯ ದರ ಪುನ‌ರ್ ಪರಿಶೀಲನೆ

ಹತ್ತು ಅಶ್ವಶಕ್ತಿಗೂ ಅಧಿಕ ಸಾಮರ್ಥ್ಯದ ವಿದ್ಯುತ್ ಮಗ್ಗ ನೇಕಾರರಿಗೆ ಈ ಮೊದಲಿನಂತೆ ಯೂನಿಟ್ ಗೆ 1.25 ರೂ. ನಿಗದಿಪಡಿಸಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ

ಪ್ರಶೋತ್ತರ ಅವಧಿಯಲ್ಲಿ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದರಿಂದ ಹತ್ತು ಅಶ್ವಶಕ್ತಿ ಸಾಮರ್ಥ್ಯದ ವಿದ್ಯುತ್ ಮಗ್ಗಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಹತ್ತು ಅಶ್ವಶಕ್ತಿಗೂ ಅಧಿಕ ಸಾಮರ್ಥ್ಯದ ವಿದ್ಯುತ್ ಕೈ ಮಗ್ಗಗಳಿಗೆ ಈ ಮೊದಲು ನಿಗದಿಪಡಿಸಿದ್ದ ದರವನ್ನೇ ಜಾರಿಗೆ ತರುವ ಬಗ್ಗೆ ಇಂಧನ ಸಚಿವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಪರಿಶೀಲಿಸಲಾಗುವುದು ಎಂದು ಹೇಳಿದರು.

ಶಾಲಾ ಸಮವಸ್ತ್ರ ಪೂರೈಕೆಗೆ ಈ ಮೊದಲು ಆದೇಶ ನೀಡಲಾಗಿತ್ತು. ಆದರೆ ಗುಣಮಟ್ಟ ಕಳಪೆಯಾಗಿದ್ದರಿಂದ ಆದೇಶ ಹಿಂತೆಗೆದುಕೊಳ್ಳಲಾಗಿತ್ತು. ಬಟ್ಟೆ ಸರಬರಾಜಿಗೆ ಪುನಃ ಅವಕಾಶ ನೀಡುವ ಬಗ್ಗೆ ಚಿಂತನೆ ಇದೆ ಎಂದು ತಿಳಿಸಿದರು. ಬೇರೆ ಬೇರೆ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿರುವ ಕಾರಣ ನೇಕಾರರ ಸಂಖ್ಯೆ ಕಡಿಮೆಯಾಗಿದೆ. ನೇಕಾರರ ನಿಖರ ಸಂಖ್ಯೆ ಅರಿಯಲು ಜನಗಣತಿ ಮಾಡಿಸುವ ಬೇಡಿಕೆಯನ್ನು ಪರಿಗಣಿಸಲಾಗುವುದು.

ನೇಕಾರರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ವಾರ್ಷಿಕ ಐದು ಸಾವಿರ ರೂಗಳನ್ನು ಪಾವತಿ ಮಾಡಲಾಗುತ್ತಿದೆ. ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಕೈಮಗ್ಗ ವಿಕಾಸ ಯೋಜನೆಯಲ್ಲಿ ಕೈಮಗ್ಗ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಘಟಕ ವೆಚ್ಚದ ಪ್ರತಿಶತ 50ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು. ಕಳೆದ ಮೂರು ವರ್ಷಗಳಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ಒಟ್ಟು 70 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ.

ಸಾಲ ಸೌಲಭ್ಯಕ್ಕಾಗಿ ಅರ್ಜಿ

ಬಾಗಲಕೋಟೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧ ಧರ್ಮಿಯರು, ಸಿಬ್ಬರು ಮತ್ತು ಪಾರ್ಸಿ ಜನಾಂಗಕ್ಕೆ ಸೀರಿದ ಅರ್ಹ ಅಭ್ಯರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ವಾರ್ಷಿಕ ವರಮಾನ ನಗರ ಪ್ರದೇಶದವರಿಗೆ 1,03 ಲಕ್ಷ ರೂ. ಗ್ರಾಮಿಣ ಪ್ರದೇಶದವರಿಗೆ 81 ಸಾವಿರ ರೂ. ಮೀರಿರಬಾರದು. 18 ರಿಂದ 55 http://kmdconline.karnataka.gov.in ನಲ್ಲಿ ಫೆಬ್ರವರಿ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೇಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೇಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆಸಕ್ತ ಪರಿಶಿಷ್ಟ ಪಂಗಡಗಳ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15, 2024 ರಿಂದ ಮಾರ್ಚ್ 14, 2024 ರವರೆಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪ್ಲಾಟ ನಂ.4, ಸತ್ತೂರ ಕಾಲನಿ, 1ನೇ ಕ್ರಾಸ, ವಿದ್ಯಾಗಿರಿ, ಧಾರವಾಡ-580004 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ, ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು.

ಅರ್ಜಿಯೊಂದಿಗೆ ಧೃಢೀಕೃತ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ರೇಷನ್ ಕಾರ್ಡ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ ಪಾಸ್ ಬುಕ್ಕ, ಪಾನ್ ಕಾರ್ಡ, ಪತ್ರಿಕೋದ್ಯಮದಲ್ಲಿ ಪದವಿ ಪಡೆದ ವಿದ್ಯಾರ್ಹತೆ ಪ್ರಮಾಣಪತ್ರ ಹಾಗೂ ಅಂಕಪಟ್ಟಿಗಳ ಪ್ರತಿಗಳ ದಾಖಲಾತಿಗಳೊಂದಿಗೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ-0836.2460855 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಕಲಚೇತನ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳದಲ್ಲಿ ಉದ್ಯೋಗಾವಕಾಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆಬ್ರವರಿ 26, ಮತ್ತು 27, 2024 ರಂದು ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಟಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತ ವಿಕಲಚೇತನ https://udyoga.skillconnet.kaushalkar.com ನೋಂದಾಯಿಸಬೇಕು ಮತ್ತು ಉದ್ಯೋಗ ಮೇಳದ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಕಛೇರಿ ದೂರವಾಣಿ ಸಂಖ್ಯೆ:0836- 2744474ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *