ಆತ್ಮೀಯ ನಾಗರಿಕರಿಗೆ, ನಿಮ್ಮ ಮನೆಯಲ್ಲಿ ಅಥವಾ ನೀವೇ ಅಲ್ಪಸಂಖ್ಯಾತ ಸಮುದಾಯದ ವಿಧವೆಯರು, ವಿಚ್ಛೇದಿತರು, ಅವಿವಾಹಿತ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆ ಅಡಿಯಲ್ಲಿ ನೀವು ಸಾಲ ಮತ್ತು ಸಹಾಯಧನವನ್ನು ಪಡೆಯಲು ಸರ್ಕಾರವು ಈಗ ನಿರ್ಧಾರ ಮಾಡಿ ಅರ್ಜಿ ಸಲ್ಲಿಸಲು ಅಕ್ಟೋಬರ್ ಮೂರನ್ನು ಕೊನೆ ದಿನಾಂಕವನ್ನು ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ. ಈ ಯೋಜನೆಯಡಿಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು 25000/- ಸಾಲ ಮತ್ತು 25,000/- ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಷ್ಟು ಮತ್ತು ಹೇಗೆ ಅರ್ಜಿ ಸಲ್ಲಿಸುವುದು?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03-Oct-2023 ಮತ್ತು ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://kmdconline.karnataka.gov.in/Portal/login ಆಗ ನೀವು ಅಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತುಂಬಿ ಮತ್ತು ನಾವು ಕೆಳಗೆ ತಿಳಿಸುವ ಎಲ್ಲ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಇಲ್ಲವಾದರೆ ನಿಮ್ಮ ಹತ್ತಿರದ ಸೇವಾ ಸಿಂಧು ಸೆಂಟರ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?
ಯೋಜನಾ ವರದಿ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ, ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ), ಬ್ಯಾಂಕ್ ಪಾಸ್ ಬುಕ್ ಪ್ರತಿ, ಖಾತರಿ ನೀಡುವವರ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ, ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ.
ನಾಳೆ ಕೊನೆಯ ದಿನಾಂಕ ಕೂಡಲೇ ಅರ್ಜಿ ಸಲ್ಲಿಸಬೇಕಾಗಿ ವಿನಂತಿ, ಗೂಡ್ಸ್ ಆಟೋ ಖರೀದಿಸಲು 300000 ಸಹಾಯಧನ
ಸರ್ಕಾರಿ ಜಮೀನು ಒತ್ತುವರಿಗೆ ಬ್ರೇಕ್ ಹಾಕಿದ ಸರ್ಕಾರ*
ಜೀವ ಜಲ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು 3 ಲಕ್ಷ ಸಹಾಯಧನ*