Breaking
Wed. Dec 18th, 2024

ಜೀವ ಜಲ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು 3 ಲಕ್ಷ ಸಹಾಯಧನ

Spread the love

ಜೀವ ಜಲ ಯೋಜನೆಯ ಉದ್ದೇಶ:

ಬೆಳಗಾಂ, ಬಾಗಲಕೋಟೆ, ವಿಜಯಪುರ ಮುಂತಾದ ಕಡೆಗಳಲ್ಲಿ ಸಮೀಪದಲ್ಲೇ ನದಿಗಳು ಹರಿಯುವುದರಿಂದ ತೆರೆದ ಬಾವಿಗಳಿಗೆ ಹೆಚ್ಚು ಹೆಚ್ಚು ಬೇಡಿಕೆಗಳಿವೆ. ಕೊಳವೆ ಬಾವಿಗಳು ಅವಶ್ಯಕವಿರುವಲ್ಲಿ ತೆರೆದ ಬಾವಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಿದರೆ, ಕೃಷಿಕನ ಜೀವನ ಸುಧಾರಿಸುತ್ತದೆ. ಆದುದರಿಂದ, ಈ ಕಾರ್ಯಕ್ಕೆ ನಿಗಮವು ಆರ್ಥಿಕ ಸಹಾಯ ನೀಡಲು ಮುಂದೆ ಬಂದಿದೆ. ವೀರಶೈವ-ಲಿಂಗಾಯತ (ಪ್ರವರ್ಗ-3ಬಿ) ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.

ಅರ್ಹತೆ:

ಹಿಂದುಳಿದ ವರ್ಗಗಳ (ಪ್ರವರ್ಗ-3ಬಿ) ರ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವಾಗಿರಬೇಕು.

ಸೌಲಭ್ಯ:

ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣಕನ್ನಡ, ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಟ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಟ 2 ಎಕರೆ ಜಮೀನು ಇರಬೇಕು.

ಹೆಚ್ಚಿನ ಮಾಹಿತಿ:- https://kvldcl.karnataka.gov.in/

ಘಟಕ ವೆಚ್ಚ

ರೂ.2.50 ಲಕ್ಷಗಳು ರೂ.2.00ಲಕ್ಷಗಳ ಸಹಾಯಧನ (ಸಬ್ಸಿಡಿ) ಹಾಗೂ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ರೂ. 50,000. ರೂ.2.00 ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚ, ಪಂಪೈಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.1.50 ಲಕ್ಷಗಳ ವೆಚ್ಚ ಭರಿಸಲಾಗುವುದು. ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್.ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ದೀಕರಣ ವೆಚ್ಚವಾಗಿ, ಪ್ರತಿ ಕೊಳವೆ ಬಾವಿಗೆ ರೂ.50,000/-ಗಳಂತೆ ಪಾವತಿಸಲಾಗುವುದು,

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.00 ಲಕ್ಷಗಳು, ಇದರಲ್ಲಿ ರೂ. 3.50 ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಸಾಲವಾಗಿರುತ್ತದೆ.

ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ ವೀರಶೈವ-ಲಿಂಗಾಯತ ಸಮುದಾಯಕ್ಕೆ (ಪ್ರವರ್ಗ-3ಬಿ) ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ 8 ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕವಾಗಿ ನೀರಾವರಿ ಸೌಲಭ್ಯ

ಘಟಕ ವೆಚ್ಚ:

8-15 ಎಕರೆ ಜಮೀನಿಗೆ ರೂ.4.00 ಲಕ್ಷಗಳ ವೆಚ್ಚದಲ್ಲಿ 2 ಕೊಳವೆ ಬಾವಿ ಹಾಗೂ 15 ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗದಿತ ಘಟಕ ವೆಚ್ಚ ರೂ.6.00 ಲಕ್ಷಗಳ ವೆಚ್ಚದಲ್ಲಿ 3 ಕೊಳವೆ ಬಾವಿಗಳನ್ನು ಕೊರೆಯಿಸಿ ಪಂಪ್ ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು, ಇದು ಪೂರ್ಣ ಅನುದಾನವಾಗಿರುತ್ತದೆ.

https://kvldcl.karnataka.gov.in/

ತೆರೆದ ಬಾವಿ:

ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಸಾಮೂಹಿಕ ಏತ ನೀರಾವರಿ ಯೋಜನೆ:

ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲಸಂಪನ್ಮೂಲಗಳಾದ ನದಿ, ಕೆರೆ, ಹಳ್ಳ ಇವುಗಳಿಗೆ ಮೋಟಾರ್ ಅಳವಡಿಸಿ ಪೈಪ್‌ಲೈನ್ ಮೂಲಕ ಖುಷಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.

ಘಟಕ ವೆಚ್ಚ

ಸಾಮೂಹಿಕ ನೀರಾವರಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಸೌಲಭ್ಯ ಒದಗಿಸಲಾಗುವುದು.

ಮರುಪಾವತಿ ಅವಧಿ

ಸಾಲದ ಮರುಪಾವತಿ ಅವಧಿ 3 ವರ್ಷಗಳು.

https://chat.whatsapp.com/DgyceSrfHaIHrMa62BudxU

ಪ್ರೀಮಿ-5 ಸೋಪ್ ಬಳಕೆಯಿಂದ ಪ್ರಾಣಿಗಳ ಮೈಯನ್ನು ಶುದ್ಧವಾಗಿಡಬಹುದು, ಜಾನುವಾರುಗಳಿಗೆ ಒಂದು ವರದಾನ, Medicated soap for Catle*

ಎರಡು ದಿನದ ಅಣಬೆ ಕೃಷಿ ತರಬೇತಿ ಅಕ್ಟೋಬರ್ 5 ನೊಂದಣಿ ಮಾಡಲು ಕೊನೆಯ ದಿನಾಂಕ*

ಮ್ಯಾಂಗೋಸ್ಟಿನ್ ಹಣ್ಣಿನ ಬೇಸಾಯ ಎಕರೆಗೆ ಲಕ್ಷಗಟ್ಟಲೆ ಸಂಪಾದನೆ, ಒಂದು ಕೆಜಿ ಹಣ್ಣಿಗೆ 200 ರೂಪಾಯಿ*

Related Post

Leave a Reply

Your email address will not be published. Required fields are marked *