Breaking
Tue. Dec 17th, 2024

40 ಲಕ್ಷ ರೈತರಿಗೆ 4000 ಕೋಟಿ ಬೆಳೆ ಪರಿಹಾರ ಹಣ ಜಮಾ, crop loss money

Spread the love

40 ಲಕ್ಷ ರೈತರಿಗೆ 4000 ಕೋಟಿ ಬೆಳೆ ಪರಿಹಾರ ಹಣ ಜಮಾ. ನಿಮಗೂ ಈ ಹಣ ಜಮಾ ಆಗಿರಬಹುದು. ನಮ್ಮ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವಾಗಲೆಂದು 3000ಗಳನ್ನು ಬೆಳೆ ಪರಿಹಾರದ ಮೂಲಕ ನೀಡಿದ್ದಾರೆ. ಈ ಹಣವು ಜೂನ್ ತಿಂಗಳಲ್ಲಿ ಬಹಳ ಜನ ರೈತರಿಗೆ ತಲುಪಿದೆ. ಒಂದು ವೇಳೆ ನಿಮಗೆ ಬರೆದಿದ್ದರೆ ಜುಲೈ ತಿಂಗಳಲ್ಲಿ ಜಮಾ ಆಗುತ್ತದೆ.

ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://bhoomisuddi.com/the-government-has-released-a-new-direct-link-for-crop-relief-third-installment-money-deposit-check/

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ. ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ. ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.


ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ. ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.


ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3 ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆರ್ ನ್ಯೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ. 73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2021- ಅವರ 26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ. ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ 2/ 3200 ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ. 15 ನೇ ಹಣಕಾಸು ಆಯೋಗವು 2020- 21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.


ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 4ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಜೂನ್ 30 ಹಾಗೂ ಜುಲೈ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜುಲೈ 2 ರಿಂದ 4ರ ತನಕ ಕರಾವಳಿ ಭಾಗಗಳನ್ನು ಹೊರತು ಪಡಿಸಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 5 ಅಥವಾ 6ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

29.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಇವತ್ತಿನಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಕುಂಠಿತವಾಗಲಿದ್ದು, ಉತ್ತರ ಭಾರತದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಭಾರತದ ಅಧಿಕ ಉಷ್ಣಾಂಶ ಸಾಮಾನ್ಯ ಸ್ಥಿತಿಗೆ ಬಂದರೆ, ಅಂದರೆ ಜುಲೈ 5 ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಆದರೆ ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆ ಕಡಿಮೆ. ದಿನದಲ್ಲಿ 2, 3 ಮಳೆಯ ಸಾಧ್ಯತೆ ಇದೆ.

Related Post

Leave a Reply

Your email address will not be published. Required fields are marked *