Breaking
Thu. Dec 19th, 2024

ಹೊಸ ಕೃಷಿ ನವೋದ್ಯಮಿಗಳಿಗೆ 5 ರಿಂದ 20 ಲಕ್ಷಗಳ ಬ್ಯಾಂಕ್ ಸಾಲ ಸೌಲಭ್ಯ

Spread the love

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ( ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಹೊಸ ಕೃಷಿ ನವೋದ್ಯಮಗಳಿಗೆ Startups at Incubation Stage) ಆರ್ಥಿಕ ನೆರವು

ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಠ ರೂ. 5.00 ಲಕ್ಷದಿಂದ ಗರಿಷ್ಠ ರೂ. 20 ಲಕ್ಷಗಳವರೆಗೆ) ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು.

https://bhoomisuddi.com/agricultural-innovation-scheme-5-to-20-lakhs-bank-loan-facility-loan/

ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scale up of business/ Expansion of of established estab Startups) ಆರ್ಥಿಕ ನೆರವು. ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷಗಳವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ (Backended subsidy) ನೀಡಲಾಗುವುದು.

ಹೊಸ ಸರ್ಕಾರದ ಮೊದಲ 100 ದಿನಗಳ ಮಾರ್ಗಸೂಚಿ ರೆಡಿ ಮಾಡಿ : ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

2024ರ ಲೋಕಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಭರ್ಜರಿ ಗೆಲುವಿನ ವಿಶ್ವಾಸದಲ್ಲಿ ಇರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮತ್ತೊಮ್ಮೆ ಆತ್ಮ ವಿಶ್ವಾಸದ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ಸಚಿವರೂ ಅಧಿಕಾರಿಗಳ ಜೊತೆ ಚರ್ಚಿಸಿ ತಮ್ಮ ನೂತನ ಸರ್ಕಾರದ ಮೊದಲ ನೂರು ದಿನಗಳ ಮಾರ್ಗಸೂಚಿ ಸಿದ್ದ ಮಾಡಿ ಎಂದಿದ್ದಾರೆ. ಅಷ್ಟೇ ಅಲ್ಲ. ಹೊಸ ಸರ್ಕಾರದ ಮುಂದಿನ 5 ವರ್ಷಗಳ ಅವಧಿಯ ಮಾರ್ಗ ಸೂಚಿ ಕರಡನ್ನೂ ಸಿದ್ದಪಡಿಸಲು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಮಾರ್ಚ್ 16 ಶನಿವಾರ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮಾರ್ಚ್ 17 ಭಾನುವಾರ ಬೆಳಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು.

ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲಾ ಸಚಿವರೂ ತಮ್ಮ ಸಚಿವಾಲಯ ಕಾರ್ಯದರ್ಶಿಗಳು ಹಾಗೂ ಇತರ ಅಧಿಕಾರಿಗಳ ಜೊತೆ ಕೂತು ಮುಂದಿನ ಸರ್ಕಾರದ ಅಜೆಂಡಾ ಕುರಿತಾಗಿ ಚರ್ಚಿಸಿ ಎಂದು ಸೂಚನೆ ನೀಡಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದರೆ ಸತತ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ ಪಾತ್ರ ಆಗಲಿದೆ. ಚುನಾವಣಾ ಆಯೋಗ ಶನಿವಾರ ಪ್ರಕಟ ಮಾಡಿದ ಲೋಕಸಭಾ ಚುನಾವಣೆ ವೇಳಾ ಪಟ್ಟಿ ಪ್ರಕಾರ ಏಪ್ರಿಲ್ 19 ರಂದು ಮೊದಲ ಸುತ್ತಿನ ಮತದಾನ ನಡೆಯಲಿದೆ.

ಜೂನ್ 1ಕ್ಕೆ ಕೊನೆಯ ಸುತ್ತಿನ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ದೇಶಾದ್ಯಂತ ಒಟ್ಟು 7 ಸುತ್ತುಗಳಲ್ಲಿ ಮತದಾನ ನಡೆಯಲಿದೆ. ಶನಿವಾರದಿಂದಲೇ ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಕೂಡಾ ಜಾರಿಯಾಗಿದೆ. ಚುನಾವಣೆ ಘೋಷಣೆ ಆಗೋದಕ್ಕೂ ಮುನ್ನವೇ ದೇಶಾದ್ಯಂತ ಹಲವು ಸಮೀಕ್ಷಾ ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಡೆಸಿವೆ. ಎಲ್ಲಾ ಸಮೀಕ್ಷೆಗಳೂ ಮತ್ತೊಮ್ಮೆ ಬಿಜೆಪಿ ಸಾರಥ್ಯದ ಎನ್‌ಡಿಎ ಗೆಲುವಿನ ಭವಿಷ್ಯ ನುಡಿದಿವೆ. ಭಾರೀ ಬಹುಮತದೊಂದಿಗೆ ಎನ್‌ಡಿಎ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದೇ ಸಮೀಕ್ಷೆಗಳು ಅಂದಾಜಿಸಿವೆ.

ಚುನಾವಣಾ ಬಾಂಡ್ ಬಿಜೆಪಿಯ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ..? : ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಯವರು ನೆರೆ, ಬರ ಸೇರಿದಂತೆ ಹಲವಾರು ಸಂಕಷ್ಟ ಸಂದರ್ಭದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡಲಿಲ್ಲ. ಲೋಕಸಭೆ ಚುನಾವಣೆ ಕಾರಣಕ್ಕಾಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರಿಗೆ ಸ್ವಾಗತ ಎಂದು ಪ್ರತಿಕ್ರಯಿಸಿದ್ದಾರೆ.

ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರ ಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಏಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ. ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ. ನಾ ಖಾವೂಂಗಾ ನಾ ಖಾನೆ ದೂಂಗಾ. ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಏಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಕ್‌ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ದವಾಗಿ ನಡೆದಿದ್ದರೆ ಎಸ್‌ಬಿಐ ಏಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಕ್‌ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧಿನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೆ ಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷ ಉತ್ಪಾದನಾ ಕಂಪೆನಿಗಳು, ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ ಎಂದಿದ್ದಾರೆ. ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ. ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Related Post

Leave a Reply

Your email address will not be published. Required fields are marked *