2024–25 ನೇ ಸಾಲಿಗೆ ಅತ್ಯುತ್ತಮ ವೈಜ್ಞಾನಿಕ ತಾಂತ್ರಿಕಗಳನ್ನು ಅಳವಡಿಸಿಕೊಂಡು ಮೆಕ್ಕೆಜೋಳ ಬೆಳೆಯಲ್ಲಿ ಎಕರೆಗೆ ಹೆಚ್ಚಿನ ಇಳುವರಿಯನ್ನು ಪಡೆದಂತ ರೈತರನ್ನು ಕೃಷಿ ಪ್ರಶಸ್ತಿ ಯೋಜನೆ ಅಡಿಯಲ್ಲಿ ಕೃಷಿ ಪ್ರಶಸ್ತಿ ನೀಡಿ ಗೌರವಿಸುವುದು, ಜಮೀನಿನಲ್ಲಿ ಬೆಳೆಕಟಾವು ಸ್ಪರ್ಧೆಯಲ್ಲಿ ಬರುವ ಇಳುವರಿ ತಾಲೂಕ ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಸ್ವಂತ ಜಮೀನು ಹೊಂದಿದ ಕನಿಷ್ಠ 01 ಎಕರೆ ವಿಸ್ತರಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಿರುವ ಆಸಕ್ತ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನಕ್ಕಾಗಿ ತಮ್ಮ ಹೊಂಬಳಿ ಕೇಂದ್ರಗಳಿಗೆ 5/9/24 ರ ರೂಳಗಾಗಿ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ ಯೋಜನೆಗಳಡಿ ಸಾಮಾನ್ಯ ವರ್ಗದ ರೈತರು ಯಂತ್ರೋಪಕರಣಗಳಾದ ಯಂತ್ರ, ಹಿಟ್ಟಿನ ಗಿರಣಿ, ಪಲ್ವರೈಸರ್, ಮೋಟಾರ್ ಚಾಲಿತ ಸಣ್ಣ ಎಣ್ಣೆ ಗಾಣಗಳು ಶೇ 50% ರ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿ ಬೆಳೆಗಳಿಗೆ ನೀರು ಹಾಯಿಸಿಕೊಳ್ಳಲು ತುಂತುರು ನೀರಾವರಿ ಘಟಕಗಳನ್ನು (ಸ್ಟಿಂಕ್ಲರ್) ಗಳನ್ನು ರೈತರಿಗೆ ಶೇ 90% ರ ಸಹಾಯಧನದಲ್ಲಿ ನೀಡಲು ಅವಕಾಶವಿದ್ದು, ಈ ಹಿಂದಿನ 7 ವರ್ಷದಲ್ಲಿ ಪಡೆಯದಿರುವ ರೈತರು ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಪಡೆಯಬಹುದಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕರಾದ ಗಣೇಶ್ ಕಮ್ಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಣಸಿನಕಾಯಿಗೆ ರೋಗದಿಂದ ಕುಂದಗೋಳ ರೈತರು ಚಿಂತಾಕ್ರಾಂತ
ಕುಂದಗೋಳ : ಮುಂಗಾರಿನ ವಾಣಿಜ್ಯ ಬೆಳೆಯಾದ ಮೆಣಸಿನಕಾಯಿ ಬೆಳೆ ಸತತ ಮಳೆಯಿಂದ ಕೊಳೆ ರೋಗ ಹಾಗೂ ಡೊಣ್ಣೆ ಹುಳು ಬಾಧೆಗೆ ತುತ್ತಾಗುತ್ತಿದ್ದು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ರೈತರು ಬೆಳೆ ತಾಲ್ಲೂಕಿನ ಮೆಣಸಿನಕಾಯಿ ರಾಜ್ಯದಲ್ಲಿಯೆ ಪ್ರಸಿದ್ದಿ ಹೊಂದಿದ್ದು, ಬ್ಯಾಡಗಿ ಡಬ್ಬಿ, ಕಡ್ಡಿ, ಗುಂಟೂರು, ಜ್ವಾಲಾ, ಕಾಶ್ಮೀರಿ, ಇಂಡೋ, ವಾರಂಗಲ್, ಚಪ್ಪಟಾ ಹೀಗೆ ನಾನಾ ರೀತಿಯ ಮೆಣಸಿನಕಾಯಿ ತಳಿಗಳನ್ನು ಇಲ್ಲಿನ ರೈತರು ಬೆಳೆಯುತ್ತಿದ್ದಾರೆ. ಕಳೆದ ವರ್ಷ 8,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ವರ್ಷ ಅಂದಾಜು 6,000 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ.
ಆದರೆ ಅತಿಯಾದ ಮಳೆಯಿಂದ ನೀರಿನ ತೇವಾಂಶ ಹೆಚ್ಚಾಗಿ ಬೆಳೆ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನೊಂದಡೆ ಡೊಣ್ಣು ರೋಗಗಳ ಕಾಟ ಹೆಚ್ಚಾಗಿದೆ. ಕೀಟ ಬಾಧೆ ಜೊತೆ ಬೆಳೆಗಳಿಗೆ ಮುರುಟು ರೋಗದ ಕಾಟವೂ ಹೆಚ್ಚಾಗಿದೆ. ಇದರಿಂದ ರೈತರು ಚಿಂತೆಗೀಡಾಗಿದ್ದಾರೆ. ಈ ವರ್ಷ ಡೊಣ್ಣೆ ಹುಳುಗಳ ಬಾಧೆ ಹೆಚ್ಚಾಗಿದ್ದು, ಇದಕ್ಕೆ ಗಿಡಗಳ ಬೇರುಗಳಿಗೆ ಸ್ಪೀಚಿಂಗ್ ಮೂಲಕ ಉಪಚಾರ ಮಾಡಬೇಕಾಗಿದೆ. ಇದು ರೈತರಿಗೆ ಕಷ್ಟದ ಕೆಲಸ. ಇನ್ನೂ ಹಳದಿ ರೋಗ ಕೂಡ ಹೆಚ್ಚಾಗಿದೆ’ ಎಂದು ರೈತ ನಾಗರಾಜ ದೇಶಪಾಂಡೆ ‘ಪ್ರಜಾವಾಣಿ’ಗೆ ತಿಳಿಸಿದರು.
ಔಷಧೋಪಚಾರ ಸಲಹೆ: ಹೊಲಗಳಲ್ಲಿ ನೀರು ನಿಲ್ಲದಂತೆ ನೊಡಿಕೊಳ್ಳಬೇಕು. ಡೊಣ್ಣು ಹುಳ ನಿಯಂತ್ರಣಕ್ಕೆ ಪ್ಲೋರೇನ್ನು ಗಿಡಗಳ ಸುತ್ತಲು ಬೇರಿಗೆ ಹಾಕಿ ಮಣ್ಣು ಮುಚ್ಚುವ ಮೂಲಕ ಉಪಚಾರ ಮಾಡಬಹುದು. ಎಲೆಗಳು ಹಳದಿ ಬಣ್ಣ ನಿಯಂತ್ರಣಕ್ಕೆ 19.19.19 ಹಾಗೂ 13.26 ಗೊಬ್ಬರವನ್ನು ನೀರಿನಲ್ಲಿ ಬೆರೆಸಿ ಎಲೆಗಳಿಗೆ ಸಿಂಪಡಣೆ ಮಾಡುವುದು. ಮುರುಟು ರೋಗಕ್ಕೆ ಪೇಗಾಟಸ್ ಪೌಡರನ ಒಂದು ಪ್ಯಾಕೇಟನ್ನು ಒಂದು ಪಂಪ ಕ್ಯಾನ್‌ಗೆ ನೀರಿನೊಂದಿಗೆ ಬೆರೆಸಿ ಸಿಂಪಡಿಸಬೇಕು ಎಂದು ತೋಟಗಾರಿಕೆ ಇಲಾಖೆ ತಾಲ್ಲೂಕು ಅಧಿಕಾರಿ ಮಂಜುನಾಥ ಕರೋಶಿ ಸಲಹೆ ನೀಡಿದರು.
31.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮತ್ತು ಶಿವಮೊಗ್ಗ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಪಾವಗಡ, ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಯಾದಗಿರಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಳಿದ ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಸುತ್ತಮುತ್ತ), ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಇಂದು ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಿ ಸೆಪ್ಟೆಂಬರ್ 2ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಮಳೆ ಕಡಿಮೆಯಾಗಲಿದ್ದು, ಸೆಪ್ಟೆಂಬರ್ 2ರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ತಿರುಗುವಿಕೆಯೂ ಶಿಥಿಲಗೊಂಡರೆ ಮಾತ್ರ ರಾಜ್ಯದ ಕರಾವಳಿಯಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಪರಿಸ್ಥಿತಿ ಕಾದುನೋಡಬೇಕಾಗಿದೆ. ಸೆಪ್ಟೆಂಬರ್ 2ರಂದು ಸ್ಪಷ್ಟತೆ ಸಿಗಬಹುದು.
30.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಮೈಸೂರು ಉತ್ತರ, ಚಾಮರಾಜನಗರ (ಕೊಳ್ಳೇಗಾಲ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ – ಹಾವೇರಿ ಗಡಿಭಾಗಗಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಾವಣಗೆರೆ, ಹಾವೇರಿ ಹಾಗೂ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಪಾಕಿಸ್ತಾನದ ಕರಾವಳಿ ಮೂಲಕ ಸಾಗಿ ಆಗಸ್ಟ್ 31ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ವಾಯುಭಾರ ಕುಸಿತವಾಗುವ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ.
29.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಲಿದ್ದು, ಆಗಸ್ಟ್ 31ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿನ ಈಗಿನ ಮಳೆಯೂ ಕಡಿಮೆಯಾಗುವ ಲಕ್ಷಣಗಳಿದ್ದರೂ, ಕರಾವಳಿಯಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯ ಪರಿಣಾಮವನ್ನು ಕಾದು ನೋಡಬೇಕಾಗಿದೆ.
ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ಚ.ಕಿತ್ತೂರ ಪಟ್ಟಣ ಪಂಚಾಯತನ ಸ್ವಚ್ಛ ಭಾರತ ಮಿಷನ್ (ನಗರ)2.0 ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಫಲಾನುಭವಿಗಳಿಂದ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೆ.23 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಚ.ಕಿತ್ತೂರಿನ ಪಟ್ಟಣ ಪಂಚಾಯತ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಕಿಯರ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
ನಿಪ್ಪಾಣಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-04 ಹಾಗೂ ಅಂಗನವಾಡಿ ಸಹಾಯಕಿಯರ-13 ಹುದ್ದೆಗಳನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದ್ದು, ಆದ್ದರಿಂದ ಸಮಸ್ಯೆಯನ್ನು ಸರಿ ಮಾಡಿ ಮತ್ತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 30 ಸಂಜೆ 5.30 ರವರೆಗೆ ವಿಸ್ತರಿಸಲಾಗಿದೆ.
https://karnemakaone.kar.nic.in/abcd/ 5.30 ರೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ. 08338-222523 ಸಂಖ್ಯೆಗೆ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಸು ಅಭಿವೃದ್ಧಿ ಯೋಜನೆ ಮಹಿಳೆಯರಿಂದ ಅರ್ಜಿ ಆಹ್ವಾನ
ಪ್ರಸ್ತಕ ಸಾಲಿನ ಶಿಸು ಅಭಿವೃದ್ಧಿ ಯೋಜನೆ ಬೆಳಗಾವಿ ನಗರದ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮಹಿಳೆಯರು ಬೆಳಗಾವಿ ಒನ್/ಕರ್ನಾಟಕ ಒನ್ https://sevasindhu.karnataka.gov.in ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ:0831-2007020 ಸಂಖ್ಯೆಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಬೆಳಗಾವಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕಾಗಿ: ಅರ್ಜಿ ಆಹ್ವಾನ
ಆಲಮಟ್ಟಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಗೆ 2025ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು www.navodaya.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-09- 2024. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08426-281088, 9901940188, 9036902859 9449441422 ಸಂಪರ್ಕಿಸಬಹುದಾಗಿದೆ ಎಂದು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ವಸತಿ ಸೌಲಭ್ಯ
ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಉಚಿತವಾಗಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಸೆಪ್ಟೆಂಬರ್ 2 ರಂದು ಆರಂಭವಾಗುವ ಕಾಗದದ ಕವರ್ ಹೊದಿಕೆ ಮತ್ತು ಫೈಲ್ ತಯಾರಿಕೆಗೆ 10 ದಿನಗಳ ತರಬೇತಿ. ಸೆಪ್ಟೆಂಬರ್ 10 ರಿಂದ ಆರಂಭವಾಗುವ ಸಿಸಿಟಿವಿ ಕ್ಯಾಮೆರಾ ಭದ್ರತಾ ಆಲಂ ಮತ್ತು ಹೊಗೆಯ ಸ್ಥಾಪನೆ ಮತ್ತು ಸೇವೆಯ 13 ದಿನಗಳ ತರಬೇತಿ, ಸೆಪ್ಟೆಂಬರ್ 12 ರಿಂದ ಪ್ರಾರಂಭವಾಗುವ ಸೆಣಬು ಉತ್ಪನ್ನಗಳ ಉದ್ಯಮಿಯ 13 ದಿನಗಳ ತರಬೇತಿ, ಸೆಪ್ಟೆಂಬರ್ 15 ರಿಂದ ಆರಂಭವಾಗುವ ಫೋಟೋ ಕೃಷಿ ಲ್ಯಾಮಿನೇಶನ್ ಮತ್ತು ಸ್ಟೀನ್ ಪ್ರಿಂಟಿಂಗ್ 10 ದಿನಗಳ ತರಬೇತಿ, ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯ 30 ದಿನಗಳ ತರಬೇತಿಗಳು ಉಚಿತವಾಗಿ ಇರುತ್ತದೆ ಎಂದು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯಾದಗಿರಿ ಜಿಲ್ಲೆಯ ಗ್ರಾಮೀಣ ಯುವಕ ಹಾಗೂ ಯುವತಿಯರು 18 ರಿಂದ 45 ವರ್ಷದೊಳಗಿನ ಕನಿಷ್ಠ 7ನೇ ತರಗತಿ ವ್ಯಾಸಂಗ ಹೊಂದಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿದ್ದು, ಗ್ರಾಮೀಣ ಪ್ರದೇಶದವರೆಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ವಸತಿ ಸೌಲಭ್ಯಗಳು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಗ್ರಾಮೀಣ ಪ್ರದೇಶದ ಯುವತಿಯರು ವಿದ್ಯಾರ್ಹತೆ ಅಂಕಪಟ್ಟಿ ಅಥವಾ ವರ್ಗಾವಣೆ ಪತ್ರ, ಗ್ರಾಮೀಣ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಇತಿ- ಚಿನ ನಾಲ್ಕು ಪಾಸ್ ಪೋರ್ಟ್ ಅಳತೆ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು.
ತರಬೇತಿ ಸಮಯದಲ್ಲಿ ಸಂಪೂರ್ಣ ವಿವರವನ್ನು ಆರ್ ಸೆ ಟಿ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತುಂಬಿ ಚಿತ್ತಾಪುರ ರಸ್ತೆ ಆದರ್ಶ ಶಾಲೆಯ ಹತ್ತಿರ ದ ಇರುವ ಕಚೇರಿಯಲ್ಲಿ ಸಲ್ಲಿಸಬೇಕು. ಮೊದಲು ಬಂದ 25 ರಿಂದ 35 ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448994164, 9880666117, 8088235941, 9483236840 ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಡೇ-ನಲ್ಟ್ ಯೋಜನೆಯಡಿ ಅರ್ಜಿ ಆಹ್ವಾನ
ಡೇ-ನಲ್ಡ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರು ಲಕ್ಷಿ ?ಮೀಕಾಂತ ಅವರು ತಿಳಿಸಿದ್ದಾರೆ. ಯಾದಗಿರಿ ನಗರಸಭೆ ಡೇ-ನಲ್ಡ್ ಅಭಿಯಾನ ಮತ್ತು ಪಿ.ಎಂ. ಸ್ವ ನಿಧಿ TULP-The Ur- ban Learning Internship Programme ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿದ್ದು, ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಯಾವುದಾದರೂ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಇಚ್ಛೆಯುಳ್ಳ ಅಭ್ಯರ್ಥಿಗಳು ಇಂಟರ್‌ಶೀಪ್ ಗಾಗಿ ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ.
ಯಾವುದಾದರು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು, ಇಂಟ- ರ್‌ಶೀಫ್ ಅವಧಿಯ 3 ರಿಂದ 5 ತಿಂಗಳ ಅವಧಿಯವರೆಗೆ ಮಾತ್ರ ಸೀಮಿತವಾಗಿರುತ್ತದೆ. ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಇರುವಂತಹ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. 2024ರ ಸೆಪ್ಟೆಂಬರ್ 5ರ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಟ್ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆ ಮಾಡಿದ್ದಾರೆ.