2025-26 ನೇ ಸಾಲಿನ ಹನಿ ನೀರಾವರಿಯೊಂದಿಗೆ ಗೋಡಂಬಿ ಕೃಷಿಗೆ ಆರ್ಥಿಕ ನೆರವು. ಗೋಡಂಬಿ ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಇದರ ಹೊಸ ಗೋಡಂಬಿ ತಳಿಗಳ ಮುಂಚೂಣಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ (ಸಾಮಾನ್ಯ ಪದ್ಧತಿ) ಮತ್ತು ಹಳೆಯ ಸೂಕ್ತ ಗೋಡಂಬಿ ತಳಿಗಳ ಮುಂಚೂಣಿ ತಂತ್ರಜ್ಞಾನ ಪ್ರಾತ್ಯಕ್ಷಿಕೆ (ಸಾಂದ್ರ ಪದ್ಧತಿ) ಯೋಜನೆಯಡಿಯಲ್ಲಿ 2025-26 ನೇ ಸಾಲಿನ ಗೋಡಂಬಿ ಕೃಷಿಗೆ ಆರ್ಥಿಕ ಸಹಾಯಕ್ಕೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಸಹಾಯ: ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ, ಕೊಚ್ಚಿ, ಕೇರಳ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಆಗಸ್ಟ್, 2025
ಅರ್ಜಿಯನ್ನು https://cashewresearch.in ನಿಂದ ಡೌನ್ ಲೋಡ್ ಮಾಡಿಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : ಡಾ. ಈರದಾಸಪ್ಪ ಹಿರಿಯ ವಿಜ್ಞಾನಿಗಳು, ಪುತ್ತೂರು, ದಕ್ಷಿಣ ಕನ್ನಡ ಗೋಡಂಬಿ ಸಂಶೋಧನಾ ನಿರ್ದೇಶನಾಲಯ, ವಾಟ್ಸಾಪ್ ಸಂಖ್ಯೆ :9916074454.
04.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಆಗಸ್ಟ್ 4ರಿಂದ 8ರ ತನಕ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಆಗಷ್ಟ್ 6 ಹಾಗೂ 7ರಂದು. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಆಗಸ್ಟ್ 5ರಿಂದ 8ರ ತನಕ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ದಾವಣಗೆರೆ ಜಿಲ್ಲೆಗಳ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 8ರ ತನಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
03.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 4ರಿಂದ ಉತ್ತರ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿದ್ದು, ಆಗಸ್ಟ್ 5ರಿಂದ 8ರ ತನಕ ಉತ್ತಮ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 6ರಿಂದ 8ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಮೈಸೂರು ಜಿಲ್ಲೆಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 4ರಿಂದ ಆಗಸ್ಟ್ಮ 8ರ ತನಕ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಕೊಪ್ಪಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು ಹೆಚ್ಚಿನ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಲು ಆರಂಭವಾಗಿದ್ದು, *ಅರಬ್ಬಿ ಸಮುದ್ರದ ಕಡೆಯಿಂದ ಸಾಗುವ ಮುಂಗಾರು ಮಾರುತಗಳು ಹಾಗೂ ಬಂಗಾಳ ಕೊಲ್ಲಿಯ* *ಭಾಗದಿಂದ ಬೀಸುವ ಗಾಳಿಯು, ಪಶ್ಚಿಮ ಕರಾವಳಿಯಲ್ಲಿ ಸಂಧಿಸುವುದರಿಂದ, ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 4 ಅಥವಾ 5 ದಿವಸಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.