ರೈತರಿಗೆ ವಾರದೊಳಗೆ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು ಪರಿಹಾರ ನೀಡುತ್ತಾರೆ.
ರೈತರಿಗೆ ವಾರದೊಳಗೆ ಪರಿಹಾರ “ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಕೃಷ್ಣಬೈರೇಗೌಡ, ಕಂದಾಯ ಸಚಿವರು ಹೇಳಿದ್ದಾರೆ.
03.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 5ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಗಡಿಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ನವೆಂಬರ್ 9 ಅಥವಾ 10ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ನವೆಂಬರ್ 4ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಈ ತಿರುಗುವಿಕೆಯು ತಮಿಳುನಾಡು ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಗಳಿವೆ. ನವೆಂಬರ್ 9ರ ಸುಮಾರಿಗೆ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.
20.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕಾಸರಗೋಡು ಹಾಗೂ ಕೇರಳ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಕಡಿಮೆ ಇರಬಹುದು.
ಚಿತ್ರದುರ್ಗ ಉತ್ತರ, ಬಳ್ಳಾರಿ ದಕ್ಷಿಣ ಹಾಗೂ ದಾವಣಗೆರೆ ಪೂರ್ವ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಆಗಸ್ಟ್ 20ರಂದು ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ಆಗಸ್ಟ್ 23ರ ತನಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿದ್ದು, ಆಗಸ್ಟ್ 24ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದ ಮುಂಗಾರು ಮಾರುತಗಳು ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಸೇರುತ್ತಿರುವುದು ಕಡಿಮೆಯಾಗಲಿರುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ದಕ್ಷಿಣ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 17ರಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ. ಬಂಗಾಳಕೂಲ್ಲಿಯ ಬಂಗ್ಲಾದೇಶ ಕರಾವಳಿಯಲ್ಲಿ ಹಾಗೂ ತಮಿಳುನಾಡಿನ ತುತುಕುಡಿ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆಗಸ್ಟ್ 17,18ರಂದು ಸ್ಪಷ್ಟತೆ ಸಿಗಬಹುದು. ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಕರ್ನಾಟಕದ – ವಿಭಜಿತ ಆಂದ್ರಾ ಗಡಿ ಭಾಗಗಳಲ್ಲಿ ಸಂಧಿಸುತ್ತಿರುವುದರಿಂದ ಆ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಮುಂಗಾರು ದುರ್ಬಲತೆ ಮುಂದುವರಿಯಲಿದೆ.