Breaking
Tue. Dec 17th, 2024

40810 ರೈತರ ಖಾತೆಗೆ ನೇರವಾಗಿ 2038.91 ಲಕ್ಷ ರು.ಗಳ ಸಬ್ಸಿಡಿ ಜಮಾ ಆಗಿದೆ.

Spread the love

ಮೇ 2ರಂದು ನಮ್ಮ ಸರಕಾರವು 40810 ರೈತರ ಖಾತೆಗೆ ನೇರವಾಗಿ 2038.91 ಲಕ್ಷ ರು.ಗಳ ಸಬ್ಸಿಡಿಯನ್ನು ಜಮೆ ಮಾಡಲು ಅನುಮೋದನೆ ನೀಡಲಾಗಿದೆ. ಯಾವ ರೈತರ ಹೊಲದ ಆಧಾರ್‌ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು.

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ : ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.

ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್, ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲೈಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು.

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ, ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ‘ಟಿಕೆಟಗಳ ಹಾರ ಹಾಕಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮೀ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ ಚಿನ್ನದುಂಗುರವನ್ನು ಖರೀದಿಸಿರುವುದನ್ನೂ ಮುಖ್ಯಮಂತ್ರಿಗಳು ಉಲ್ಲೇಖಿಸಿದರು. ಬಡವರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದರು. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು.

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದರು. ಶಿವಮೊಗ್ಗ ಲೋಕಸಭಾ ಕೇತದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸಂಸದರು ರಾಜ್ಯದ ಸಮಸ್ಯೆ ಬಗ್ಗೆ ಧ್ವನಿ ಎತ್ತಲಿಲ್ಲ ಲೋಕಸಭೆಯಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುವಂಥವರನ್ನು ಮತದಾರರು ಆಯ್ಕೆ ಮಾಡಬೇಕು. ರಾಜ್ಯದಿಂದ 25 ಸಂಸದರು ಬಿಜೆಪಿಯಿಂದ ಆಯ್ಕೆಯಾದರು, ಆದರೆ ಯಾರೂ ಸಹ ಕೇಂದ್ರದಿಂದ ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮಾತನಾಡಲಿಲ್ಲ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದರೂ, ಒಂದು ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ ಎಂದರು, ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು.

ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,೦೫ಆಅ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು. ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರೂ ಪಕ್ಷದ ಕಾರ್ಯಾಧ್ಯಕ್ಷರೂ ಆದ ಮಂಜುನಾಥ್ ಭಂಡಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾ‌ರ್ ಸೇರಿ ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರ : ಮೋದಿ ಪ್ರೀತಿ, ಗ್ಯಾರಂಟಿಯ ಆಸೆ

2004ರ ಚುನಾವಣೆ ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಆಗಿದೆ. ಸುರೇಶ ಅಂಗಡಿ ಸತತ ನಾಲ್ಕು ಸಲ, ಅವರ ಪತ್ನಿ ಮಂಗಲಾ ಒಂದು ಸಲ ಸಂಸದರಾಗಿದ್ದಾರೆ. ಆದರೆ, ಈ ಬಾರಿ ಜಗದೀಶ ಶೆಟ್ಟರ್ ಪ್ರವೇಶದಿಂದ ಚುನಾವಣೆಯ ದಿಕ್ಕೇ ಬದಲಾಗಿದೆ. ಇಪ್ಪತ್ತು ವರ್ಷಗಳಿಂದ ಕಟ್ಟಿದ ಕೋಟೆ ಭೇದಿಸಲು ಕಾಂಗ್ರೆಸ್‌ನವರು ಒಟ್ಟಾಗಿ ಮುಗಿಬಿದ್ದಿದ್ದಾರೆ.

ಇಬ್ಬರೂ ಅಭ್ಯರ್ಥಿಗಳು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಕಣಕ್ಕಿಳಿದಿದ್ದಾರೆ. ವೈಯಕ್ತಿಕ ಸಾಮರ್ಥ್ಯಕ್ಕಿಂತ ತಮ್ಮ ಪಕ್ಷದ ನಾಯಕರ ವರ್ಚಸ್ಸು, ಪಕ್ಷಗಳ ಕೊಡುಗೆ ಅವಲಂಬಿಸಿದ್ದಾರೆ. ಮೋದಿ ಅಲೆಯನ್ನು ಬಿಜೆಪಿ ಮತ್ತು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ನೆಚ್ಚಿಕೊಂಡಿದೆ. ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಆಗಿ. ಎರಡು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದವರು. ಅದಾಚೆಗೆ ಮೋದಿ ವರ್ಚಸ್ಸನ್ನೇ ಅವರು ಬಲವಾಗಿ ಅವಲಂಬಿಸಿದ್ದಾರೆ. ಬಿಜೆಪಿಯ ರಾಷ್ಟ್ರಪ್ರೇಮ, ರಾಮ ಮಂದಿರ ನಿರ್ಮಾಣ, ಹಿಂದೂ ಧರ್ಮದ ಅಸ್ತಿತ್ವಗಳನ್ನು ಬಾಣಗಳಾಗಿ ಹೂಡಿದ್ದಾರೆ. 2014ರಲ್ಲಿ ಲಕ್ಕಿ ಹೆಬ್ಬಾಳಕರ ಅವರು ಸುರೇಶ ಅಂಗಡಿ ವಿರುದ್ಧ ಸೋಲುಂಡಿದ್ದರು.

ದಶಕದ ಬಳಿಕ ಅವರ ಪುತ್ರ ಮೃಣಾಲ್ ಕಣಕ್ಕಿಳಿದರೂ ತಾವೇ ಅಭ್ಯರ್ಥಿ ಎಂಬಷ್ಟು ಓಡಾಟ ನಡೆಸಿದ್ದಾರೆ. 2021ರ ಉಪಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಕೂಡ ಸೋಲುಂಡರು. ಈಗ ಸತೀಶ ಅವರೇ ಬೆಳಗಾವಿ ಕ್ಷೇತ್ರದ ಉಸ್ತುವಾರಿ. ಇಬ್ಬರೂ ನಾಯಕರು ತಮ್ಮ ಸೋಲಿನ ಕಾರಣ ಮನಗಂಡಿದ್ದಾರೆ. ಈ ಬಾರಿ ದುಪ್ಪಟ್ಟು ಶಕ್ತಿಯೊಂದಿಗೆ ಧುಮುಕಿದ್ದಾರೆ. ಈ ಭಾಗದ ಪ್ರಭಾವಿ ರಾಜಕಾರಣಿ, ಶಾಸಕ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲಿರುವುದು, ಮೃಣಾಲ್‌ಗೆ ಹೆಚ್ಚಿನ ಧೈರ್ಯ ತಂದಂತಿದೆ. ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಮೃಣಾಲ್‌ಗೆ ಆನೆಬಲ ತಂದಿದೆ. ಎಲ್ಲ ಗ್ಯಾರಂಟಿಗಳು ಮಹಿಳಾ ಕೇಂದ್ರಿತ ಆಗಿದ್ದು, ಅವುಗಳ ಕ್ರೆಡಿಟ್ ಬಾಚಿಕೊಳ್ಳುವಲ್ಲಿ ಲಕ್ಷ್ಮಿ ಹೆಬ್ಬಾಳಕರ ಸಿದ್ಧಹಸ್ತರು. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ, ದಲಿತ ಮಹಿಳೆ ಮತಾಂತರ ಯತ್ನದ ಪ್ರಕರಣಗಳೂ ಪ್ರಭಾವ ಬೀರಲಿವೆ. ‘ಲವ್ ಜಿಹಾದ್’ ಸಂಗತಿಯ ಮೂಲಕ ಮತದಾರನ ಮನಸ್ಸನ್ನು ಘಾಸಿಗೊಳಿಸಿ ವಾಲಿಸಿಕೊಳ್ಳುವ ಯತ್ನವನ್ನು ಬಿಜೆಪಿ ನಡೆಸಿದೆ.

ಕ್ಷೇತ್ರದ ಬಹಳಷ್ಟು ಪುರುಷರು ‘ರಾಜ್ಯದಲ್ಲಿ ಯಾವ ಸರ್ಕಾರವಾದರೂ ಬರಲಿ. ಆದರೆ, ದೇಶಕ್ಕೆ ಮೋದಿ ಬೇಕು’ ಎನ್ನುತ್ತಾರೆ. ಬಹಳಷ್ಟು ಮಹಿಳೆಯರು ‘ಗ್ಯಾರಂಟಿಗಳಿಂದ ನಮ್ಮ ಸಂತಿಪ್ಯಾಟಿ ನಡೀತದ. ಗ್ಯಾರಂಟಿಗೇ ಮತ’ ಎನ್ನುತ್ತಾರೆ.

Related Post

Leave a Reply

Your email address will not be published. Required fields are marked *