ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದೆ.
ಈ QR CODE ಬಳಸಿಯೂ ಲಾಗಿನ್ ಮಾಡಬಹುದಾಗಿದೆ.
ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ) https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.
ನಿಮ್ಮ ಊರಿನಲ್ಲಿ ಏಷ್ಟು ಜನರ ಆಧಾರ್ ಸೀಡಿಂಗ್ ಆಗಿಲ್ಲ ಎಂದು ಇಲ್ಲಿ ನೋಡಿ
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://bhoomisuddi.com/see-how-many-people-in-your-town-have-not-been-seeded-aadhaar-here/
ತೋಟಗಾರಿಕೆ ತರಬೇತಿ ಅರ್ಜಿ ಅಹ್ವಾನ
2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ 10 ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರ ಮಕ್ಕಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯಿಂದ ಒಟ್ಟು 17 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ.
ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ಸಾಮಾನ್ಯ ವರ್ಗದವರಿಗೆ 30ರೂ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ : 01-04-2024 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಎಪ್ರಿಲ್ 6 ರಂದು ನಡೆಯಲಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1750ರೂ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಇಲಾಖೆಯ ವಸತಿಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಸೆಸೆಲ್ಸಿ ಪಾಸ್ ಆಗಿರಬೇಕು. ತಂದೆ ಅಥವಾ ತಾಯಿ ಅಥವ ಸ್ವತಹ ತಮ್ಮ ಹೆಸರಿನಲ್ಲಿ ಜಮಿನು ಇರುವ ದಾಖಲೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ತೋಟಗಾರಿಕೆ ನಿರ್ದೇಶಕರು ವಿಜಯಪುರ (8971851518, ), ಸಹಾಯಕ ತೋಟಗಾರಿಕೆ ನಿರ್ದೇಶಕರು(9972784696) ಸಹಾಯಕ ತೋಟಗಾರಿಕೆ ನಿರ್ದೇಶಕರು(7019295542) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ನೋಂದಣಿಗೆ ಅವಕಾಶ
2023-24 ನೇ ಸಾಲಿಗೆ ಸಹಕಾರ ಇಲಾಖೆಯಿಂದ ಯಶಸ್ವಿನಿ ಆರೋಗ್ಯ ರಕ್ಷಣಾಯೋಜನೆಯನ್ನು ಜಾರಿಗೊಳಿಸಿರುತ್ತದೆ. ಜನವರಿ 1 ರಿಂದ ಸದರಿ ಯೋಜನೆಯಲ್ಲಿ ಸದಸ್ಯರಾಗಿ ನೋಂದಾಯಿಸಲು ಪ್ರಾರಂಭವಾಗಿರುತ್ತದೆ. ಮಾರ್ಚ 5 ರಂದು ಯಶಸ್ವಿನಿ ಯೋಜನೆಯ ವಿಶೇಷವಾದ ದಿನ ಎಂದು ಪರಿಗಣಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಗಳು, ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೇಎಲ್ಲಾ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು/ವ್ಯವಸ್ಥಾಪಕರು ತಮ್ಮ ಸಂಘದ ಮುಂದೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರನ್ನು ಉಚಿತವಾಗಿ ನೋಂದಾಯಿಸುವುದು.
ಅದೇ ದಿನ ಮಧ್ಯಾಹ್ನ 2-30 ಗಂಟೆಯಿಂದ ಎಲ್ಲಾ ಸಾಮಾನ್ಯ ಸದಸ್ಯರನ್ನು ನೋಂದಾಯಿಸುವವರೆಗೂ ಮತ್ತು ಈಗಾಗಲೇ ನೋಂದಾಯಿಸಿಕೊಂಡ ಸದಸ್ಯರನ್ನು ನವೀಕರಣಗೊಳಿಸುವುದು ಮತ್ತು ಹೊಸದಾಗಿ ನೋಂದಾಯಿಸುವವರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ-125 ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಎ.ಪಿ.ಎಂ.ಸಿ. ಯಾರ್ಡ, ಎಸ್.ಬಿ.ಆಯ್ ಮುಖ್ಯ ಶಾಖೆ ಎದುರಿಗೆ. ಗದಗದೂರವಾಣಿ ಸಂಖ್ಯೆ-08372-238598 ಹಾಗೂ ತಾಲೂಕಾ ಸಹಕಾರ ಅಭಿವೃದ್ಧಿ ಅಧಿಕಾರಿ, ನರಗುಂದ-8660099227.
ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ & ಮಾರಾಟಗಾರರ ಸಮ್ಮೇಳನ.
ರೈತರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಸಂಸದ ಗದ್ದಿಗೌಡರ. ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾಡಿಕೊಡಲಾಯಿತು. ಆದರೆ ರೈತರು ಬೇಡಿಕೆಗೆ ಬೆಳೆ ಬೆಳೆದಲ್ಲಿ ಉತ್ತಮ ಬೆಲೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾರಂಭದಲ್ಲಿ ಬೆಂಗಳೂರಿನ ಲಾಲ್‌ಬಾಗ್‌ನ ಅಪರ ನಿರ್ದೇಶಕ ಡಾ.ಪಿ.ಎಂ.ಸೊಬರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿತ್ತು.
ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಅಧಿಕಾರಿಗಳು ವೀಕ್ಷಿಸಿದರು. ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ಸಭಾಂಗಣದಲ್ಲಿ ವಿಶ್ವವಿದ್ಯಾಲಯದ ಬುಧವಾರ ತೋಟಗಾರಿಕೆ ಇಲಾಖೆ ಮತ್ತು ಕ್ಯಾಪೆಕ್ ಜಂಟಿ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಹಿಂದೆ ಖರೀದಿದಾರರ ಹಾಗೂ ಮಾರಾಟಗಾರರ ನಡುವಿನ ಅಂತರ ದೂರವಿತ್ತು. ಇದರಿಂದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿರಲಿಲ್ಲ. ಮಧ್ಯವರ್ತಿಗಳು ಕಡಿಮೆ ಬೆಳೆಗೆ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇದರಿಂದ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುತ್ತಿರಲಿಲ್ಲ ಎಂದರು. ರೈತರು ಬೆಳೆದ ಹಣ್ಣುಗಳಾಗಿರಲಿ.
ಮಾರಾಟಗಾರರ ನೇರ ಸಂಪರ್ಕ ಕಲ್ಪಿಸುವ ಕೆಲಸ ಸರಕಾರ ಮಾಡುತ್ತಿದೆ. ಇದರಿಂದ ಬೆಳೆಗೆ ತಕ್ಕಂತೆ ಮಾರಾಟ ಮಾಡಲು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ತೋಟಗಾರಿಕೆ ಪ್ರದೇಶದ ವ್ಯಾಪ್ತಿ ಹೆಚ್ಚಿಗೆ ಇದ್ದು, ಈ ಭಾಗದ ರೈತರಿಗೆ ಹಲವಾರು ಕಂಪನಿಗಳ ಜೊತೆ ಒಪ್ಪಂದ ಮಾಡುವ ಮೂಲಕ ಖರೀದಿದಾರರ ಬೆಡಿಕೆಗೆ ತಕ್ಕಂತೆ ಉತ್ಪನ್ನಗಳನ್ನು ಮಾರಾಟ ಮಾಡಿ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಜಿಲ್ಲೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಇದೆ. ಉತ್ತಮ ಹವಾಮಾನ, ನೀರು ಇದ್ದು, ಉತ್ತಮ ತರಕಾರಿ ಹಾಗೂ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಆದರೆ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಇದಕ್ಕೆ ಕಾರಣ ಮಾರುಕಟ್ಟೆಯ ಕೌಶಲ್ಯತೆ ಕೊರತೆ. ರೈತ ಸಾಕಷ್ಟು ಶ್ರಮವಹಿಸಿ ಬೆಳೆಯನ್ನು ಬೆಳೆಯುತ್ತಾರೆ. ಅದನ್ನು ಮಾರುಕಟ್ಟಿಗೆ ತರಲು ಮಾರುಕಟ್ಟೆಯ ಕೌಶಲ್ಯತೆ ಅರಿವು ಅಗತ್ಯವಾಗಿದೆ.