ನೇಮಕಾತಿ pdf ಕೆಳಗೆ ಇದೆ
ಅರ್ಜಿ ಸಲ್ಲಿಸುವ ವಿಧಾನ
ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಯು ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ / ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ತಾಪಮಾನ ಹೆಚ್ಚಳದ ಮುನ್ಸೂಚನೆ : ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ವಿಶೇಷ ಸಲಹೆ, ಸೂಚನೆಗಳು
ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮ ತಡೆಗಟ್ಟಲು ಕೆಲವು ಪ್ರಮುಖ ಸಲಹೆ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ವಿಜಯನಗರ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಭಾರತ ಹವಾಮಾನ ಇಲಾಖೆಯು ಪ್ರಸ್ತಕ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಇದೆ ಎಂಬುದನ್ನು ಸೂಚಿಸುತ್ತದೆ. ಭಾರತೀಯ ಹವಾಮಾನ ಇಲಾಖೆಯು 2024ರ ಏಪ್ರೀಲ್ 01 ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟ ಆಧರಿಸಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ 2024ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ.
ಆದ್ದರಿಂದ ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ನೀಡಿರುವ ಸಲಹೆ ಸೂಚನೆಗಳನ್ನು ಪಾಲನೆ ಮಾಡಬೇಕಿದೆ. ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಕೆಲವು ಸೂಚನೆಗಳನ್ನು ನೀಡಲಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನ ಮಧ್ಯಾಹ್ನ 12 ರಿಂದ 3ರವರೆಗಿನ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು.
ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಪ್ರಯಾಣ ಮಾಡುವಾಗ ನೀರನ್ನು ತಂಪು ಪಾನೀಯಗಳನ್ನು ತಪ್ಪಿಸಬೇಕು. ಸಾಧ್ಯವಾದಷ್ಟು ಬಿಸಿ ಆಹಾರ ಸೇವಿಸಬೇಕು.
ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಬಳಸಬೇಕು ಹಾಗೂ ಆಗಿಂದಾಗ್ಗೆ ತಣ್ಣೀರು ಸ್ನಾನ ಮಾಡಬೇಕು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ ಟೋಪಿ ಅಥವಾ ಕ್ಯಾಪ್ ಶಾಖದ ಬಳಲಿಕೆ ಮತ್ತು ಅಥವಾ ಶಾಖದ ಆಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಶಾಖ ಸೆಳೆತಗಳು ಅಂದರೆ ಎಡೆರ್ನಾ (ಊತ) ಮತ್ತು ಮೂರ್ಛ ಸಾಮಾನ್ಯವಾಗಿ 39 ಡಿಗ್ರಿ ಸೆಲ್ಸಿಯಸ್ ಅಂದರೆ 102 ಡಿಗ್ರಿ ಎಫ್ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.
ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಓಆರ್.ಎಸ್ ಪಾಕೀಟ ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಸಲಹೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶದ ಪ್ರಮಾಣ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಉಷ್ಣತೆಯ ಒತ್ತಡದಿಂದ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ತೀವ್ರ ಜ್ವರ, ಕೈ-ಕಾಲುಗಳು ಹಾಗೂ ಮೊಣಕಾಲುಗಳ ಸೆಳೆತ, ಪ್ರಜ್ಞೆ ತಪ್ಪುವುದು, ಸುಸ್ತು ಉಂಟಾಗುತ್ತದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಶಾಖದ ಬಳಲಿಕೆಯು ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವ ಲಕ್ಷಣಗಳಿಂದ ಕೂಡಿರುತ್ತದೆ. ಶಾಖಾಘಾತ (ಸನ್ ಸ್ಟೋಕ್) ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಂದರೆ 104 ಡಿಗ್ರಿ ಎಫ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವ ಲಕ್ಷಣಗಳಿಂದ ಕೂಡಿರುತ್ತದೆ.
ಹಾಗೂ ಸಿಬ್ಬಂದಿಗಳ ಮೂಲಕ ಜನರಲ್ಲಿ ವಿವಿಡೆದೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನರೇಗಾದಡಿ ವಿವಿದೆಡೆ ಕೆಲಸ ಮಾಡುವ ಕೂಲಿ ಕಾರ್ಮಿಕರ ಸ್ಥಳಗಳಿಗೆ ಭೇಟಿ ನೀಡಿ ಆರೋಗ್ಯದ ಸಲಹೆಗಳನ್ನು ತಿಳಿಸುವದಲ್ಲದೇ ಓಆರ್‌ಎಸ್ ಪಾಕೀಟಗಳನ್ನು ಸಹ ವಿತರಿಸುತ್ತಿದ್ದಾರೆ. ವಿವಿಧ ಗ್ರಾಮಗಳಿಗೆ ಸಹ ತೆರಳಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಸ್ಥಾಪಿಸಲಾದ ವಿವಿಧ ಚೆಕ್‌ಪೋಸ್ಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಆಶಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮುಂಜಾಗ್ರತಾ ಕ್ರಮವಾಗಿ ಓಆರ್‌ಎಸ್ ಪಾಕೀಟಗಳನ್ನು ವಿತರಿಸುವ ಕೆಲಸ ಮಾಡುತ್ತಿದ್ದಾರೆ.