2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳ ಅರ್ಜಿ ಆಹ್ವಾನ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು 2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಕೋರ್ಸುಗಳು ಕನ್ನಡ ಮಾಧ್ಯಮದಲ್ಲಿರುತ್ತವೆ.
ಅರ್ಜಿ ಶುಲ್ಕ ರೂ.100/- ಅರ್ಜಿಯನ್ನು ಜಿಕೆವಿಕೆ ದೂರ ಶಿಕ್ಷಣ ಘಟಕ, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳಿಂದ ಅಥವಾ uasbangalore ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ನಿಗದಿತ ಅರ್ಜಿ ಶುಲ್ಕ ಮತ್ತು ಕೋರ್ಸ್ ಶುಲ್ಕದೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು 19.04.2024 ರೊಳಗೆ ಸಂಯೋಜಕರು ಮತ್ತು ಮುಖ್ಯಸ್ಥರು, ದೂರ ಶಿಕ್ಷಣ ಘಟಕ, ರೈತ ತರಬೇತಿ ಸಂಸ್ಥೆ, ಜಿಕೆವಿಕೆ, ಬೆಂಗಳೂರು-560065 ಇವರಿಗೆ ಸಲ್ಲಿಸುವುದು. ಕೋರ್ಸ್, ಅರ್ಹತೆ, ಅವಧಿ ಮತ್ತು ಶುಲ್ಕಗಳ ವಿವರ ಈ ಕೆಳಕಂಡಂತಿದೆ.
ಯಾವ ಯಾವ ಶಿಕ್ಷಣ ಕೋರ್ಸ್ ಇವೆ?
ಕೃಷಿ ವಿಜ್ಞಾನ ಕೇಂದ್ರ, ಚಿಂತಾಮಣಿ, ಚಿಕ್ಕಬಳ್ಳಾಪುರ ಜಿಲ್ಲೆ ಇವರಿಂದ ಅರ್ಜಿಯನ್ನು ಪಡೆಯಲು ಈ ಕೆಳಗಿನವರನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. ಡಾ. ತನ್ನೀರ್ ಅಹ್ಮದ್ 9538221427, 9483537174, 9449866930
ರೈತಪರ ಸಂಘಟನೆಗಳಿಂದ ಪ್ರತಿಭಟನೆ ತಹಶೀಲ್ದಾರಗೆ ಮನವಿ
ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಬೆಳೆಗಾರ ಸಂಘದಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶಿಲ್ದಾರ ಸದಾಶಿವ ಮಕ್ಕೋಜಿ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ತಾಲೂಕ ಅಧ್ಯಕ್ಷ ಹನುಮಂತ ಮಗದುಮ ಮಾತನಾಡಿ, ಕೃಷ್ಣಾ ನದಿ ಬತ್ತುತ್ತಿದ್ದು, ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ.
ಕೂಡಲೆ ಕೃಷ್ಣಾ ನದಿಗೆ 2ಟಿಎಂಸಿ ನೀರು ಹರಿಸುವ ಮೂಲಕ ನೀರಿನ ದಾಹ ತಡೆಯಬೇಕು. ಬರಗಾಲ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಗೋಶಾಲೆಗಳನ್ನು ಆರಂಭಿಸುವ ಮೂಲಕ ಮೇವು ಬ್ಯಾಂಕ ಪ್ರಾರಂಭ ಮಾಡಬೇಕು. ಮೊದಲ ಕಂತಿನ ರೈತರ ಕಬ್ಬಿನ ಬಿಲ್ ಪಾವತಿಸಲು ಕಾರಖಾನೆಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಬರಗಾಲ ಪರಿಹಾರ ಕನಿಷ್ಠ 3 ಸಾವಿರ ಹಣ ನೀಡಬೇಕೆಂದು ಒತ್ತಾಯಿಸಿದರು. ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ವಿವಿಧ ಸಂಘಗಳ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಕಲ್ಲಪ್ಪ ಬಿರಾದಾರ, ರಂಜಾನ ನದಾಫ, ಶ್ರೀಶೈಲ ಬಿರಾದಾರ, ಕರಿಗೌಡರ ಜಗದಾಳ, ಮಲ್ಲಪ್ಪ ತಳವಾರ, ಮಾದೇವ ತೇರದಾಳ, ಪರಪ್ಪ ಗುಡಿ, ನಾಗಪ್ಪ ಗುಡಿ, ಭೀಮಪ್ಪ ಕರಿಗೌಡರ, ಹನುಮಂತ ನಂದಪ್ನವರ, ಪೈಗಂಬರ ಮೋಮಿನ, ನಾಗಪ್ಪ ಕುಂಬಾರ, ಮುರೆಪ್ಪ ಬೆಳಗಲಿ, ರಂಜಾನ ಮೋಮಿನ ಸಹಿತ ಹಲವರು ಇದ್ದರು.
ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ
ಈ ಕುರಿತು ಪ್ರಕಟಣೆ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು, ಜಿಲ್ಲೆಯಲ್ಲಿ ಎಸ್‌ಎಸ್‌ಎಲ್ಸಿಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷೆ ಕೇಂದ್ರಗಳ ವಿವರ: ಧಾರವಾಡ ಶಹರದ 34, ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿಯೊಂದು ತಾಲೂಕಿನ ಪರೀಕ್ಷಾ ಕೇಂದ್ರಗಳ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಉಪನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗ್ರೂಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷಾ ದಿನದಂದು ಜಿಲ್ಲಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಯುಕ್ತರು ಸಿಆರ್.ಪಿಸಿ. ಸೆಕ್ಷನ್ 144 ಕಲಂ ನ್ನು ಜಾರಿಗೊಳಿಸಿ ಧಾರವಾಡ ಗ್ರಾಮೀಣ ಜಿಲ್ಲೆ ಹಾಗೂ ಮಹಾನಗರದ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷಾ ದಿನದಂದು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ದಾದಿಯರನ್ನು ನೇಮಕಾತಿ ಮಾಡಿದೆ. ಜಿಲ್ಲೆಯ ಹೆಸ್ಕಾಂಗೆ ಪ್ರದೇಶಗಳಲ್ಲಿ ಕ್ರಮವಹಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಹುಬ್ಬಳ್ಳಿಯ ವಾ.ಕ.ರಾ.ರ. ಸಂಸ್ಥೆ ಅವಕಾಶ ನೀಡಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.