ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2024 ನೇ ಸಾಲಿನ “ಸಾವಯವ ಕೃಷಿಗಾಗಿ ತೋಟಗಾರಿಕೆ” ಎಂಬ ಧೈಯದೊಂದಿಗೆ ತೋಟಗಾರಿಕೆ ಮೇಳವನ್ನು ಫೆಬ್ರವರಿ 10 ರಿಂದ 12 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತರಿಗೆ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಂದ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಬಹುಮಾನದೊಂದಿಗೆ ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕಳೆದ ಮೂರು
ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಐಸಿಎಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು.ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಧಾರವಾಡ ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಅಥವಾ ಮುಖ್ಯಸ್ಥರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಕುಂಬಾಪುರ ಫಾರ್ಮ, ಧಾರವಾಡದಲ್ಲಿ ಪಡೆಯಬಹುದು ಅಥವಾ ತೋಟಗಾರಿಕೆ ವಿವಿಯ ವೆಬ್‌ಸೈಟ್ ಮೂಲಕ ಕೂಡ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2024 ರ ಒಳಗಾಗಿ ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಪಿ. ಬಿ. ರಸ್ತೆ, ಕುಂಬಾಪುರ ಫಾರ್ಮ, ಧಾರವಾಡ 580005 ಗೆ ಸಲ್ಲಿಸಬೇಕು. , 9448637946 ಗೆ ಸಂಪರ್ಕಿಸಬಹುದು ಎಂದು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆಗಳ ಸಮೀಕ್ಷೆಗಾಗಿ ರೈತರ ಮೊಬೈಲ್ ಆಪ್ ಬಿಡುಗಡೆ
ಬಾಗಲಕೋಟೆ : ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾದ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾವು ಬೆಳೆದ ಬೆಳೆಯನ್ನು ದಾಖಲಿಸಲು ರೈತರಿಗಾಗಿಯೇ ಮೊಬೈಲ್ ಆಪ್ ಬಿಡುಗಡೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಪ್ರಾರಂಭವಾಗಿದ್ದು, ಈ ಯೋಜನೆ ಅನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್‌ವಾರು ತಾವು ಬೆಳೆದ ಕೃಷಿ ಬೆಳೆ, ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಹಾಗೂ ಇತರೆ ಬೆಳೆ ಮಾಹಿತಿ ಛಾಯಾ ಚಿತ್ರ ಸಹಿತ ರೈತರು ಅಂಡ್ರಾಯಿಡ್ ಮೊಬೈಲ್ ಮೂಲಕ ದಾಖಲಿಸಬಹುದಗಿದೆ. ಗೂಗಲ್ ಪ್ಲೇಸ್ಟೋರ್ ನಲ್ಲಿ https://play.google.com/store/apps/details?id=com.csk.farmer23_24.cropsurvey ಬೆಳೆ ಸಮೀಕ್ಷೆ 2023 ಆಪ್ ನ್ನು ಡೌನ್‌ಲೋಡ್ ಮಾಡಿಕೊಂಡು ಸ್ವತಃ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ.
ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಹಾಗು ಇನ್ನಿತರೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ ಹಾಗೂ ಆರ್‌ಟಿಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ.
ಜಿಲ್ಲೆಯ ರೈತ ಬಾಂಧವರು ಹಾಗೂ ವಿದ್ಯಾವಂತ ಯುವಕರು ತಪ್ಪದೇ ತಮ್ಮ ಜಮೀನಿನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಕೃಷಿ ಸಖಿಯರು, ಬೆಳೆ ಸಮಿಕ್ಷೆಯ ಖಾಸಗಿ ನಿವಾಸಿಗಳು, ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 52 ಗೊಗರಿ ಮಾರಾಟ ಕೇಂದ್ರ ಸ್ಥಾಪನೆ
ವಿಜಯಪುರ : ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಸ್ಥಿರೀಕರಣ ಯೋಜನೆಯಡಿ ನ್ಯಾಫೆಡ್ ಸಂಸ್ಥೆಯವರು ತೊಗರಿ ಖರೀದಿಸುವ ಸಲುವಾಗಿ ವಿಜಯಪುರ ವ್ಯಾಪ್ತಿಯಲ್ಲಿ 52 ತೊಗರಿ ಕೇಂದ್ರಗಳನ್ನು ತೆರೆಯಲಾಗಿದ್ದು 2023- 24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರಿಂದ ಮಾರುಕಟ್ಟೆ ದರದಲ್ಲಿ ಮತ್ತು ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಖರಿದಿಸಲಾಗುತ್ತಿದೆ ರೈತರಿಂದ ಖರೀದಿಸಿದ ತೊಗರಿಗೆ, ರೈತರ ಖಾತೆಗೆ ಡಿ.ಬಿ.ಟಿ ಮೂಲಕ ಹಣ ಜಮೆ ಮಾಡಲಾಗುವುದು.
ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತೊಗರಿ ಮಾರಾಟ ಮಾಡಲು ನಾಫೇಡ್ ಸಂಸ್ಥೆಯವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ವತಿಯಿಂದ ನೋಂದಣಿ ಪ್ರಕೃಯೆ ಪ್ರಾರಂಬಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿಶಾಖಾ ವ್ಯವಸ್ಥಾಪಕರಾದ ಲಿಂಗರಾಜು .ಡಿ.ಎಮ್ ಮೋ.ಸಂಖ್ಯೆ 9449864452 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್‌ಗೆ ಇಬ್ಬರು ಬಲಿ
ರಾಜ್ಯದಲ್ಲಿ ಮಂಗಳವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ 51 ವರ್ಷದ ವ್ಯಕ್ತಿ ಡಿ.22ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಡಿ.23ರಂದು ಮೃತಪಟ್ಟಿದ್ದಾರೆ. ಕೆಮ್ಮು ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಮೈಸೂರಿನ 51 ವರ್ಷದ ವ್ಯಕ್ತಿ ಡಿ.20ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಡಿ. 25ರಂದು ಮೃತಪಟ್ಟಿದ್ದಾರೆ. ಇವರಲ್ಲಿ ಒಬ್ಬರು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದರು. ಕಳೆದ 24 ತಾಸಿನಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ.1.15 ವರದಿಯಾಗಿದೆ. ಬೆಂಗಳೂರಿನಲ್ಲಿ 2,104 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, 57 ಮಂದಿಗೆ ಸೋಂಕು ದೃಢಪಟ್ಟಿದೆ.