Breaking
Wed. Dec 18th, 2024

ಜಿಮ್ /ಫಿಟೈಸ್ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ, gym

Spread the love

ಜಿಮ್ /ಫಿಟೈಸ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ರವರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಯುವಜನರಿಗೆ ಜಿಮ್ /ಫಿಟೈಸ್ ತರಬೇತಿ ಶಿಬಿರವನ್ನು ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ ವಿದ್ಯಾನಗರ/ಕಂಠೀರವ ಕ್ರೀಡಾಂಗಣ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದ್ದು ಅರ್ಹ ಪರಿಶಿಷ್ಟ ಯುವಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯ ಅವಧಿ ಜನೆವರಿ 24 ರಿಂದ ಫೆಬ್ರುವರಿ 7 ರವರೆಗೆ ಇದ್ದು 16 ರಿಂದ 30 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಯುವಜನರು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಕ್ರೀಡಾಂಗಣ, ಗದಗ ಇವರ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದುಕೊಂಡು, ಆ‌ರ್.ಡಿ. ಸಂಖ್ಯೆಯುಳ್ಳ ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಂಕಪಟ್ಟಿ ಯೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜನೆವರಿ 18 ರೊಳಗಾಗಿ ಸಹಾಯಕ ನಿರ್ದೇಶಕರು, ಯು.ಸ.& ಕ್ರೀಡಾ ಇಲಾಖೆ, ಗದಗ ಇವರಿಗೆ ಸಲ್ಲಿಸಬೇಕು. ಸ್ವೀಕೃತವಾಗುವ ಅರ್ಜಿಗಳನ್ನು ಕೇಂದ್ರ ಕಚೇರಿಗೆ ಮುಂದಿನ ಆಯ್ಕೆ ಪ್ರಕ್ರಿಯೆಗಾಗಿ ಕಳುಹಿಸಲಾಗುವುದು.

ಆಯ್ಕೆಯಾದ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08372- 238345 ಗೆ ಸಂಪರ್ಕಿಸಬಹುದಾಗಿದ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ರವರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಯುವಜನರಿಗೆ ವೀಡಿಯೋಗ್ರಾಫಿ ತರಬೇತಿ ಶಿಬಿರವನ್ನು ಕುಂಬಳಗೋಡು ತರಬೇತಿ ಕೇಂದ್ರ ಬೆಂಗಳೂರು ಇಲ್ಲಿ ಹಮ್ಮಿಕೊಂಡಿದ್ದು, ಅರ್ಹ ಪರಿಶಿಷ್ಟ ಯುವಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿ ಅವಧಿಯು ಜನೆವರಿ 24 ರಿಂದ ಫೆಬ್ರುವರಿ 7 ರವರೆಗೆ ಇದ್ದು 15 ರಿಂದ 29 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಯುವಜನರು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಕ್ರೀಡಾಂಗಣ, ಗದಗ ಇವರ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದುಕೊಂಡು, ಆರ್.ಡಿ. ಸಂಖ್ಯೆಯುಳ್ಳ ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಂಕಪಟ್ಟಿ ಯೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜನೆವರಿ 18 ರೊಳಗಾಗಿ ಸಹಾಯಕ ನಿರ್ದೇಶಕರು, ಯು.ಸ.& ಕ್ರೀಡಾ ಇಲಾಖೆ, ಗದಗ ಇವರಿಗೆ ಸಲ್ಲಿಸಬೇಕು.

ಸ್ವೀಕೃತವಾಗುವ ಅರ್ಜಿಗಳನ್ನು ಕೇಂದ್ರ ಕಚೇರಿಗೆ ಮುಂದಿನ ಆಯ್ಕೆ ಪ್ರಕ್ರಿಯೆಗಾಗಿ ಕಳುಹಿಸಲಾಗುವುದು. ಆಯ್ಕೆಯಾದ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08372-238345 ಗೆ ಸಂಪರ್ಕಿಸಬಹುದಾಗಿದೆ.

ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 26, 2023ರಿಂದ ಆರಂಭಗೊಂಡಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ಪದವಿಧರ ಹಾಗೂ ಡಿಪ್ಲೋಮಾ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಈ ಯೋಜನೆಯಡಿ ಅರ್ಹ ಪದವಿಧರರಿಗೆ ಮಾಸಿಕ 3,000ರೂ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ 1,500 ಮಾಸಿಕ ಭತ್ಯೆ ಸಿಗಲಿದೆ. ಹಾಗಾಗಿ 2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗ ಯುವಕ/ಯುವತಿಯರು ನೋಂದಾಯಿಸಿಕೊಳ್ಳಬಹುದಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ, ಸ್ವಯಂ ಉದ್ಯೋಗ ಮಾಡುತ್ತಿರುವ ಹಾಗೂ ಪದವಿ/ ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ರೈತ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ ವಿ.ಎಸ.ಕೆ

ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಸ್ಥರಿಗೆ ಕೃಷಿ ಇಲಾಖೆಯಿಂದ ಬಿಡುಗಡೆಯಾದ ಐದು ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ನ್ನು ಹುನಗುಂದದ ಬಸಮ್ಮ ಈರಪ್ಪ ಹೊಸೂರ* ಅವರಿಗೆ ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಆಕಸ್ಮಿಕವಾಗಿ ಹಾವು ಕಡಿದು ಸಾವನ್ನಪ್ಪಿದ ಇಲಕಲ್ ತಾಲೂಕಿನ ಗೋನಾಳ ಎಸ್ ಟಿ ಗ್ರಾಮದ ರೈತ ಮಹಿಳೆಯ ಗಂಡನಾದ ಪರಶುರಾಮ ಗೋವಿಂದಪ್ಪ ಬಂಡಿವಡ್ಡರ* ರವರಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರ ಚೆಕ್ ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಹುನಗುಂದ ಮತ್ತು ಇಲಕಲ್ ಉಭಯ ತಾಲೂಕಿನ ತಹಶೀಲ್ದಾರ ನಿಂಗಣ್ಣ ಬಿರಾದಾರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಮುರುಳಿಧರ ದೇಶಪಾಂಡೆ, ಸಹಾಯಕ ಕೃಷಿ ನಿರ್ದೇಶಕರಾದ ಬಸವರಾಜ ಟಕ್ಕಳಕಿ, ಕೃಷಿ ಅಧಿಕಾರಿಯಾದ ರಾಘವೇಂದ್ರ ಕೊಂಡಗುರಿ,ವಿಜಯಮಹಾಂತೇಶ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಶ್ರೀ ಸಿದ್ದಣ್ಣ ಹೊಸೂರ, ಹುನಗುಂದ ಹಾಗೂ ಗೋನಾಳ ಎಸ್ ಟಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *