Breaking
Sat. Dec 21st, 2024

ಉದ್ಯೋಗ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ, trainee job

Spread the love

ಎಚ್.ಸಿ.ಎಲ್. ಟೆಕ್ನಾಲಜಿರವರು ಉದ್ಯೋಗ ಆಧಾರಿತ ತರಬೇತಿ ನೀಡಲು ಟೆಕ್‌ಬೀ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು 2022-2023 ರಲ್ಲಿ ಪಿಯುಸಿ ಯಲ್ಲಿ ಉತ್ತಿರ್ಣರಾಗಿರುವ ಮತ್ತು 2024 ರಲ್ಲಿ ಉತ್ತೀರ್ಣರಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ 12 ತಿಂಗಳ ತರಬೇತಿಯನ್ನು (6 ತಿಂಗಳ ಕ್ಲಾಸ್ ರೂಂ ತರಬೇತಿ, 6 ತಿಂಗಳ ಇಂಟರ್ಷಿಪ್ )

6 ತಿಂಗಳ ಇಂಟರ್ಷಿಪ್ ಸಮಯದಲ್ಲಿ ಅಭ್ಯರ್ಥಿಗೆ ಸೈಪಂಡ್ ರೂಪದಲ್ಲಿ ತಿಂಗಳಿಗೆ ರೂ.10,000 ಗಳನ್ನು ನೀಡಲಾಗುವುದು. https://bit.lv/techbeeKSDC ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8722790340 / 9845454471 ಮತ್ತು ಜಿಲ್ಲೆಯ ಸಂಕಲ್ಪ ಸಂಯೋಜಕರಾದ ಶಿವಾನಂದ ಕಂಬಾರ .-9916185682 9 39 ಕೌಶಲ್ಯಾಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ-106, ಜಿಲ್ಲಾಡಳಿತ ಭವನ, 1ನೇ ಮಹಡಿ ಗದಗ ಇಲ್ಲಿ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಗದಗ ಜಿಲ್ಲಾ ಕೌಶಲ್ಯಾಬಿವೃದ್ದಿ ಅಧಿಕಾರಿ ಡಾ. ಮಲ್ಲೂರ ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ಅರ್ಜಿ ಆಹ್ವಾನ

ವಿಜಯಪುರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನೊಳಿಸುತತಿರುವ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ತರಬೇತಿ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಯುವಕ- ಯುವತಿಯರಿಗೆ ಸ್ವಯಂ ಉದ್ಯೋಗ, ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸಲು ಈ ಯೋಜನೆಯಡಿ ಬ್ಯೂಟಿ ಪಾರ್ಲರ್ (ಪುರುಷ ಮತ್ತು ಮಹಿಳೆಯರಿಗೆ) ಪ್ರಮಾಣೀಕರಣ ಕೋರ್ಸ್, ಹೆವಿ ಅರ್ಥ ಮೂವರ್ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ) ತರಬೇತಿ, ಶಾರ್ಟ ಹ್ಯಾಂಡ್ ಟ್ರೈನಿಂಗ್, ಭದ್ರತಾ ಸೇವೆಗಳ ತರಬೇತಿ, ಆಪೀಸ್ ಅಡ್ಮಿನಿಸ್ಟ್ರೇಶನ್ ಮತ್ತು ರಿಟೈಲ್ ಮಾರ್ಕೆಟಿಂಗ್ ತರಬೇತಿ ನೀಡಲಾಗುವುದು.

ಅರ್ಹ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://kmdconline.karnataka.gov.in/portal/home ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 15-12-2023 ಕೊನೆಯ ದಿನಾಂಕವಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಆಹ್ವಾನ

ಗದಗ : 2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗರವರ ವತಿಯಿಂದ ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ, ಔದ್ಯೋಗಿಕ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ, ಸದರಿ ಯೋಜನೆಯಡಿ ಪರೀಕ್ಷಾ ಶುಲ್ಕ, ಭೋದನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಪ್ರವೇಶ ಶುಲ್ಕ. ಗ್ರಂಥಾಲಯ ಶುಲ್ಕಗಳನ್ನು ಸರ್ಕಾರ ನಿಗದಿಪಡಿಸಿದ್ದು, ಆದ್ದರಿಂದ ಗದಗ ಜಿಲ್ಲೆಯ ಅರ್ಹ ವಿಕಲಚೇತನರು ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಡಿಸೆಂಬರ್ 15 ರ ಸಂಜೆ 5:00 ಗಂಟೆಯೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆ‌ರ್.ಡಬ್ಲ್ಯೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕ ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ತಾಲ್ಲೂಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಎಮ್. ಆರ್.ಡಬ್ಲ್ಯೂಗಳಾದ ಖಾಜಾಹುಸೇನ ಕಾತರಕಿ, ತಾಲ್ಲೂಕ ಪಂಚಾಯತ, ಗದಗ – 8867556465, ಬಸವರಾಜ ಓಲಿ, ತಾಲ್ಲೂಕ ಪಂಚಾಯತ, ರೋಣ – 9741615926, ಶಶಿಕಲಾ ವಡ್ಡಟ್ಟಿ, ತಾಲ್ಲೂಕ ಪಂಚಾಯತ, ಮುಂಡರಗಿ 9611922445, ಭಾರತಿ ಮುರಶಿಳ್ಳಿ, ತಾಲ್ಲೂಕ ಪಂಚಾಯತ, ಶಿರಹಟ್ಟಿ 8951128679, ಶಿವಾನಂದ ಹಾದಿಮನಿ, ತಾಲ್ಲೂಕ ಪಂಚಾಯತ, ನರಗುಂದ 9591679022 g ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 029 ರ ದೂರವಾಣಿ ಸಂಖ್ಯೆ: 08372-220419 ಮೂಲಕ ಸಂಪರ್ಕಿಸಬಹುದಾಗಿದೆ.

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್ ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯು ಜನವರಿ 1, 2024 ರಿಂದ 6 ತಿಂಗಳ ಅವಧಿಯ ರೆಗ್ಯೂಲ‌ರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ / ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಯನ್ನು ಡಿಸೆಂಬರ್ 20 ರ ಒಳಗಾಗಿ ಸಲ್ಲಿಸುವುದು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯ ವೇತನ ನೀಡಲಾಗುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಶಿಷ್ಯ ವೇತನ ನೀಡಲಾಗುವುದು.

ಅರ್ಜಿ ದೊರೆಯುವ ಸ್ಥಳ ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲೂ ಸಹ ಮತ್ತು ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಮಕ್ಕಳ ಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು-560018 ಇಲ್ಲಿ ಅರ್ಜಿ ದೊರೆಯುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080- 26692046, 9902189872, 9036256781 ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Related Post

Leave a Reply

Your email address will not be published. Required fields are marked *