Breaking
Thu. Dec 19th, 2024

ವಿವಿಧ ಯೋಜನೆಯಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

Spread the love

ಅರ್ಜಿ ಆಹ್ವಾನ :- ಗದಗ

ನರಗುಂದ ಪಟ್ಟಣದ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಪ್ರಸಕ್ತ ಸಾಲಿನ ಎಸ್.ಎಫ್.ಸಿ. ಹಾಗೂ ಪುರಸಭೆ ಅನುದಾನದ ಶೇ 5 % ರಡಿ ವಿಶೇಷ ವರ್ಗದ ಕಲ್ಯಾಣ ಕಾರ್ಯಕ್ರಮದಡಿ ವ್ಯಕ್ತಿಗತ ಚಟುವಟಿಕೆಯಲ್ಲಿ ಅನುದಾನ ಮೀಸಲಿರಿಸಿ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿಗಳ ಅನುಮೋದನೆಯನ್ವಯ ವಿಕಲಚೇತನರಿಗೆ ನಿಯಮಾನುಸಾರ ಸ್ವಯಂ ಉದ್ಯೋಗಕ್ಕೆ ಸಹಾಯಧನ ನೀಡುವುದು ಮತ್ತು ವಿಕಲಚೇತನರಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡುವ ಕುರಿತು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ದಾಖಲೆಗಳೊಂದಿಗೆ ನರಗುಂದ ಪುರಸಭೆಯ ಡೇ ನಲ್ಮ ವಿಭಾಗದಲ್ಲಿ ಡಿಸೆಂಬರ್ 15 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನರಗುಂದ ಪುರಸಭೆಯ ಡೇ ನ ವಿಭಾಗದಲಿ ಸಂಪರ್ಕಿಸಬಹುದಾಗಿದೆ.

ಅರ್ಜಿ ಆಹ್ವಾನ :- ಕೊಪ್ಪಳ

2023-24ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ನವೆಂಬರ್ 22 ರಿಂದ ಡಿಸೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ

ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ ಕೊಪ್ಪಳ ಮೊ: 99720-33371 ಇವರನ್ನು ಸಂಪರ್ಕಿಸುಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ಅರ್ಜಿ ಆಹ್ವಾನ:- ಧಾರವಾಡ

2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟನಲ್ಲಿ ಆನಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಓನ್, ಬೆಂಗಳೂರು ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಡಿಸೆಂಬರ್ 22 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಹಾಗೂ ಜಿಲ್ಲಾ ಅಭಿವೃದ್ಧಿ ನೀರಿಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಕಚೇರಿಯನ್ನು ಸಂಪರ್ಕಿಸಬಹುದು. ದೂ.ಸಂ:0836-247850 ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ-ನಲ್ಮ ಯೋಜನೆಯಡಿ ಅರ್ಜಿ:- ಬಾಗಲಕೋಟೆ

ಹುನಗುಂದ ಪರುಸಭೆಯು ಪ್ರಸಕ್ತ ಸಾಲಿನ ಡೇ-ನ ಅಭಿಯಾನದಡಿ 6 ಮಹಿಳಾ ಸಂಘಗಳನ್ನು ರಚಿಸಲು, ಒಂದು ಎಎಲೆಪಿ ಸಂಘ ರಚಿಸಲು, 3 ವ್ಯಯಕ್ತಿಕ ಸಾಲ, 3 ಇಂಟರಸೆಪ್ ಕಾರ್ಯಕ್ರಮ ಹಾಗೂ 1 ಮೂರನೆ ವ್ಯಕ್ತಿಯ ತಪಾಸಣೆ ಮಾಡುವ ಸಲುವಾಗಿ ಗುರಿ ಹೊಂದಲಾಗಿದೆ. ಅರ್ಹ ಫಲಾನುಭವಿಗಳಿಗೆ ಡಿಸೆಂಬರ 3 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಹುದಾದ ದಾಖಲಾತಿಗಳಿಗಾಗಿ ಹುನಗುಂದ ಪುರಸಭೆ ಕಚೇರಿ ಡೇ-ನಲ್ಮ ವಿಷಯ ನಿರ್ವಾಹಕರನ್ನು ಸಂಪಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ :- ಬೆಂಗಳೂರು

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್‌ನಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in e ಸಫಾಯಿ ಕರ್ಮಚಾರಿ / ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಮತ್ತು ಅವರ ಅವಲಂಬಿತರಿಂದ ಅರ್ಜಿ ಸಲ್ಲಿಸಲು ಅವಧಿಯನ್ನು ಡಿಸೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ :- ಯಾದಗಿರಿ

ಯಾದಗಿರಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) (ಕರ್ನಾಟಕ ಸರ್ಕಾರದ ಸಂಸ್ಥೆ) ಜಿಲ್ಲೆಯ ಎಸ್.ಸಿ ಹಾಗೂ ಎಸ್.ಟಿ ಅಭ್ಯರ್ಥಿಗಳು ಸ್ವಯಂ ಉದ್ಯಮ ಪ್ರಾರಂಭಿಸುವ ಆಸಕ್ತರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸುವವರು 2023ರ ನವೆಂಬರ್ 27ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನೀಡಲಾಗುವ ಮಾಹಿತಿ :

ಸ್ವಯಂ ಉದ್ಯಮ ಪ್ರಾರಂಭಿಸಲು ಬೇಕಾದ ಪ್ರೇರಣೆ, ಉದ್ಯಮಗಳನ್ನು ಆಯ್ಕೆ ಮಾಡುವ ವಿಧಾನ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಸ್ವಯಂ ಉದ್ಯಮ ಸ್ಥಾಪನೆಗೆ ಸಾಲ ಸೌಲಭ್ಯಗಳು, ಸರ್ಕಾರದ ಯೋಜನೆಗಳು, ಸಹಾಯಧನಗಳ ಮಾಹಿತಿ, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ ಮತ್ತು ಲೆಕ್ಕ ಪತ್ರ ನಿರ್ವಹಣೆದಾಗೂ ಜಿಎಸ್‌ಟಿ ಮಾಹಿತಿ, ಸಿಡಾಕ್ ಮುಖಂಡರ ತರಬೇತಿ ಪಡೆದ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಇತ್ಯಾದಿ ವಿಷಯಗಳು.

ಯಾರು ಭಾಗವಹಿಸಬಹುದು :

ಸ್ವಯಂ ಉದ್ಯಮ ಸ್ಥಾಪಿಸಲು ಇಚ್ಚಿಸಿದ 21 ರಿಂದ 50 ವರ್ಷದವರು ಪಿಯುಸಿ ಅಥವಾ ಹೆಚ್ಚುವರಿ ವಿದ್ಯಾಭ್ಯಸದವರು, ಸ್ವಯಂ ಉದ್ಯಮ ಸ್ಥಾಪನೆಗೆ ಆಸಕ್ತಿ ಇರಬೇಕು. ತರಬೇತಿ ಸ್ಥಳ ಜಂಟಿ ನಿರ್ದೇಶಕರು, ಸಿಡಾಕ್ ನೆಲಮಹಡಿ, ಎ ಬ್ಲಾಕ್ ರೂ.ನಂ.ಎ10, ಜಿಲ್ಲಾಡಳಿತ ಭವನ, 9972783978, 9108972833, 9986332736 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *