2023-24 ನೇ ಸಾಲಿನ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳ ವತಿಯಿಂದ ವಿವಿಧ ತಾಂತ್ರಿಕ ಕೌಶಲ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೊಸಪೇಟೆಯ ಹರಿಹರ ರಸ್ತೆ ಮರಿಯಮ್ಮನಹಳ್ಳಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿ.ಟಿ.ಮತ್ತು ಟಿ.ಸಿ.) ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳ ವತಿಯಿಂದ ನೀಡಲಾಗುತ್ತಿರುವ ವಿವಿಧ ಅಲ್ಪಾವದಿ ತರಬೇತಿಗಳಾದ ಸಿಎನ್ಎ ಪ್ರೋಗ್ರಾಮರ್, ಸಿ. ಎನ್.ಸಿ. ಆಪರೇಟರ್, ಸಿ.ಎನ್.ಸಿ. ಅಪರೇಟರ್ ಮಷಿನ್, ಕನ್ವೇಷನಲ್ ಟರ್ನರ್- ಮಿಲ್ಲರ್, ಫಿಟ್ಟರ್ ಮೆಕಾನಿಕಲ್ ಅಸೆಂಬ್ಲಿ, ಡಿಸೈನರ್ ಮೆಕಾನಿಕಲ್, ರೋಬೊಟಿಕ್ ಟೆಕ್ನಿಷಿಯನ್, ವೆಲ್ಡರ್, ಎಲೆಕ್ನಿಕಲ್ ಟೆಕ್ನಿಷಿಯನ್, ಎಲೆಕ್ಟ್ರಾನಿಕ್ಸ್ ಟೆಕ್ನಿಷಿಯನ್, ನೀಡ್ ಬೇಸಿಕ್ ಟ್ರೈನಿಂಗ್ ಪ್ರೋಗ್ರಾಮರ್ ಕೋರ್ಸಗಳಿಗೆ ತರಬೇತಿ ನೀಡಲಾಗುತ್ತಿದ್ದು. ಎಸ್.ಎಸ್.ಎಲ್.ಸಿ. ಪಾಸಾದ ಐಟಿಐ ಪಾಸ್ ಫೇಲ್, ಡಿಪ್ಲೋಮ ಪಾಸ್/ಫೇಲ್ ಮತ್ತು ಬಿ.ಇ. ಓದುತ್ತಿರುವ ಪಾಸಾದ ವಿದ್ಯಾರ್ಥಿಗಳು.
ರಾತಎಟಿ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ 1 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, (ಜಿ.ಟಿ.ಮತ್ತು ಟಿ.ಸಿ.) ಹೊಸಪೇಟೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 8722999929, 7795969915ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024 ಮೇ 2ರಿಂದ 2025 ಫೆ. 28 ರವರೆಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ವಿಜಯನಗರ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾಗಿಬೇಕು. ಪ್ರವೇಶ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು.
ಅರ್ಜಿಗಳನ್ನು ಮಾ.1. ರಿಂದ ಮಾ.30.ರವರೆಗೆ ತೋಟಗಾರಿಕೆ ಇಲಾಖೆಯ ಕಚೇರಿಗಳಲ್ಲಿ ಅಥವಾ ಇಲಾಖಾ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದ್ದು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಸಪೇಟೆ ಕಚೇರಿಗೆ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ, ವರಿಶಿಷ್ಟ ಪಂಗಡ ಹಾಗೂ ವಿಕಲಚೇತನರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಟ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.
ಏ.6ರಂದು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನವನ್ನು ಆಯೋಜಿಸಲಾಗಿರುತ್ತದೆ ಏ.16ರಂದು ಮೇರಿಟ್ ಮತ್ತು ಮೀಸಲಾತಿ ನಿಯಮಾನುಸಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು.
ಉಚಿತ ಬ್ಯುಟಿಷಿಯನ್ ತರಬೇತಿ
ಸಾರ್ವಜನಿಕರಿಗೆ ವಿವಿದ ಕ್ಷೇತ್ರದಲ್ಲಿ ಸಹಾಯ ಹಸ್ತ ನೀಡುತ್ತಿರುವ ತಾಯಮ್ಮ ಶಕ್ತಿ ಸಂಸ್ಥೆ ಇನ್ನೊಂದು ಹೆಜ್ಜೆ ಮುಂದೆ ನಡೆದು ಮಹಿಳೆಯರಿಗೆ ಉಚಿತ ಟೈಲರಿಂಗ್ ಹಾಗೂ ಐದು ದಿನಗಳ ಬ್ಯೂಟಿಷಿಯನ್ ತರಬೇತಿ ನೀಡಲು ಮುಂದಾಗಿದೆ. ಶುಕ್ರವಾರ ದಿನಾಂಕ ಮಾ.9 1 ರಂದು ಕೃಷ್ಣ ಪ್ಯಾಲೇಸ್ ಎದುರುಗಡೆ ಸುರೇಶ್ ಪ್ರೇಮ್ ಅಂಗಡಿ ಮೇಲೆ ಸ್ಟೇಷನ್ ರಸ್ತೆ, ಅಸಕ್ತರು ತರಗತಿಗಳಿಗೆ ಬೆಳಿಗ್ಗೆ 10 ಗಂ ಕಚೇರಿಗೆ ಆಗಮಿಸಿ ತಮ್ಮ ಹೆಸರು ನೋಂದಾಯಿಸಿಲು ಸಂಸ್ಥೆಯ ಉಪಾಧ್ಯಕ್ಷೆ ಲಲಿತಾ ನಾಯಕ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2023- 24 ನೇ ಸಾಲಿನ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ವಿತರಿಸಲು ರೋಣ ತಾಲೂಕಿನ ರೈತರಿಗೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ನೀರಾವರಿ ಸೌಲಭ್ಯವಿರುವ ಸಣ್ಣ,ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ,ಮಹಿಳಾ, ವಿಕಲಚೇತನ, ಸಾಮಾನ್ಯ ಪ್ರಸ್ತಕ ಸಾಲಿನ ಉತಾರ, ನೀರಾವರಿ ದೃಢೀಕರಣ, ಆಧಾರ ಕಾರ್ಡ್, ಮತದಾರರ ಚೀಟಿ, ಬ್ಯಾಂಕ್ ಪಾಸ್ ಬುಕ್ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ರೋಣ ಇವರಿಗೆ ಸಂರ್ಪಕಿಸಬಹುದಾಗಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ
ಬಾಗಲಕೋಟೆ : ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಮಾರ್ಚ್ 3, 2024 ರಿಂದ ಎಪ್ರಿಲ್ 3, 2024 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಅರ್ಹತೆ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿಯ ವಿವರ ಹಾಗೂ ಪ್ರವರ್ಗವಾರು ಮತ್ತು ಜಿಲ್ಲಾವಾರು ಹುದ್ದೆಗಳ ವಿವರವನ್ನು ಹಾಗೂ ಇನ್ನಿತರ ಮಾಹಿತಿಗಾಗಿ ಕೆಇಎ ವೆಬ್ ಸೈಟ್ http://kea.kar.nic.in ಸಂಪರ್ಕಿಸಬಹುದು. ಬಾಗಲಕೋಟೆ ಜಿಲ್ಲೆಯ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.