ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ 1 ಮತ್ತು ಸಂಘ ಸಂಸ್ಥೆಗಳಿಗೆ 1 ಒಟ್ಟು 2 ಕಂಬೈನ್ಸ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ.
ಈ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಸ್ ಹಾರ್ವೆಸ್ಟರ್ ಮತ್ತು ಟ್ರಾಕ್ಟ್ ಆಪರೇಟೆಡ್ ಬೇರ್ಸ್ ಇರತಕ್ಕದ್ದು. ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ 40 ಲಕ್ಷ (ಶೇ.50 ಸಹಾಯಧನ) ಮತ್ತು ಸಂಘ ಸಂಸ್ಥೆಗಳಿಗೆ ಗರಿಷ್ಠ 50 ಲಕ್ಷ (ಶೇ.70 ಅರ್ಹಗೊಂಡಲ್ಲಿ, ಲಾಟರಿ ಮುಖಾಂತರ ಫಲಾನುಭವಿಯನ್ನು ಆಯ್ಕೆ ಮಾಡುವುದು. ಈ ಕಛೇರಿಯಿಂದ ಆಯ್ಕೆಯಾದ ಫಲಾನುಭವಿಗೆ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನಿಕರಿಸಲು ಕಾರ್ಯಾದೇಶ ನೀಡಲಾಗುವುದು. ಹಬ್‌ಾರು ಸ್ವೀಕೃತವಾದ ಯಂತ್ರೋಪಕರಣಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪರಿಶೀಲಿಸಿ, ಸಹಾಯಧನವನ್ನು ನಿಯಾಮನುಸಾರ ಸಂಬಂಧಿಸಿದವರ ಸಾಲದ ಬ್ಯಾಂಕ್ ಖಾತೆಗೆ ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಜಮಾ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೇಗಳು?
ಫಲಾನುಭವಿ/ಸಂಘ ಸಂಸ್ಥೆಗಳು ಅರ್ಜಿಯೊಂದಿಗೆ ಸಂಸ್ಥೆಯಾದಲ್ಲಿ ಸಹಕಾರ ಸಂಘಗಳ ನಿಬಂಧನೆಯಂತೆ ಸಂಸ್ಥೆ ನೋಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಮತ್ತು ಎಫ್‌ಐಡಿ ಸಂಖ್ಯೆ, ರೂ.100 ಚಾಪಾ ಕಾಗದದ ಮೇಲೆ ಹಬ್ ಅನ್ನು ಪರಭಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ), ಇತ್ತೀಚಿನ 3 ವರ್ಷಗಳ (2021-22, 2022-23 & 2023-24 ) ಲೆಕ್ಕ ಪರಿಶೋಧನಾ ಪತ್ರ, ಸಹಾಯ ಧನವು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬಂಧಿಸಿರುವ ಬ್ಯಾಂಕ್‌ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರವನ್ನು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್/ಶೆಡ್ಯೂಲ್ಡ್ ಬ್ಯಾಂಕ್‌ಗಳಿಂದ ಪಡೆದು ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಮಧ್ಯ ಬಿಡುವಿನ ಹೊತ್ತು ಹೆಚ್ಚಿರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಮಳೆ ಜಾಸ್ತಿ ಇರಬಹುದು. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಹಾಸನ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಮನಗರ, ಬೆಂಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ದಾವಣಗೆರೆ, ಹಾವೇರಿ, ವಿಜಾಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಿಹಾರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದರ ಪರಿಣಾಮವಾಗಿ ಆಗಸ್ಟ್ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈಗಿನಂತೆ ಆಗಸ್ಟ್ 6ರಿಂದ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆಗಷ್ಟ್ 6ರಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ, ಆಗಸ್ಟ್ 8ರಿಂದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 4ರಿಂದ ಅಲ್ಲಲ್ಲಿ ಉತ್ತಮ ಮತ್ತು ಜುಲೈ 6ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಲಕ್ಷಣಗಳಿವೆ.
ತೊಗರಿ ಬೆಳೆಯಲು ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳಿ : ನಯೀಂ ಹುಸೇನ್
ರೈತರು ತೊಗರಿ ಬಿತ್ತನೆ ಹಾಗೂ ಬೆಳೆಸುವಲ್ಲಿ ಸಂಪ್ರದಾಯಿಕ ಪದ್ಧತಿ ಜತೆಗೆ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡಾಗ ಹೆಚ್ಚಿನ ಇಳುವರಿ ಪಡೆಯಬಹುದು’ಎಂದು ಲಿಂಗಸುಗೂರಿನ ಕೃಷಿ ಇಲಾಖೆಯ ಉಪ ನಿರ್ದೇಶಕ ನಯೀಂ ಹುಸೇನ್ ಹೇಳಿದರು. ಪಟ್ಟಣದ ರೈತ ರಾಜಶೇಖರ ಗಡೇದ ಅವರ ಹೊಲದಲ್ಲಿ ಲಿಂಗಸೂರು ಹಾಗೂ ಸಿಂಧನೂರು ಕೃಷಿ ಇಲಾಖೆಯ ಆತ್ಮಯೋಜನೆಯಡಿ ತೊಗರಿ ಬೆಳೆ ಉತ್ಪಾದನೆ ಹೆಚ್ಚಿಸುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶದ ರೈತರು ತೊಗರಿ ಬೆಳೆಯನ್ನು ಪ್ರಮುಖ ಬೆಳೆಯಾಗಿ ಬೆಳೆಯುತ್ತಿದ್ದು, ಕಳೆದ ಮೂರು ವರ್ಷಗಳಿಂದ ತೊಗರಿ ಬೆಳೆಯ ಉತ್ಪಾದನೆ ಹಾಗೂ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಇದರಿಂದ ರೈತರ ಆದಾಯವು ಕುಂಠಿತಗೊಂಡಿದೆ ಎಂದು ತಿಳಿಸಿದರು.
ರೈತರು ತೊಗರಿ ಬೆಳೆಯನ್ನು ಬೆಳೆಯುವಾಗ ಪ್ರಮುಖವಾಗಿ ಬೀಜೋಪಚಾರ, ಗಿಡಗಳ ಕುಡಿ ಚಿವುಟುವುದು ಹಾಗೂ ಸಾವಯವ ಗೊಬ್ಬರವನ್ನು ಬಳಸುವ ಪದ್ಧತಿಯನ್ನು ಅಳವಡಿಸಿಕೊಂಡಾಗ ಉತ್ಪಾದನೆ ಹಾಗೂ ಆದಾಯ ಹೆಚ್ಚಾಗುತ್ತದೆ ಎಂದರು. ಸಿಂಧನೂರಿನ ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹ್ಮದ್ ಮಾತನಾಡಿ, ತೊಗಿರಿ ಬಿತ್ತನೆ ಮಾಡಿದ 45 ದಿನಗಳ ನಂತರ ಗಿಡಗಳಿಗೆ ಕುಡಿ ಚಿವುಟುವುದರಿಂದ ಅನೇಕ ಇಳುವರಿ ಹೆಚ್ಚಾಗುತ್ತದೆ ಎಂದರು. ನಂತರ ತೊಗರಿ ಗಿಡಗಳಿಗೆ ಕುಡಿ ಚಿವುಟುವುದನ್ನು ತಾಂತ್ರಿಕ ವಿಧಾನದಿಂದ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಈ ವೇಳೆ ತುರ್ವಿಹಾಳ ಕೃಷಿ ಅಧಿಕಾರಿ ಧರ್ಮಣ್ಣ, ಆತ್ಮ ಯೋಜನೆ ಅಧಿಕಾರಿ ರಾಜಶೇಖರ ಕುಷ್ಟಗಿ, ತಾಂತ್ರಿಕ ಅಧಿಕಾರಿ ಗುರುಸಿದ್ದಯ್ಯ, ರೈತರಾದ ನಿಂಗಪ್ಪ ಸಜ್ಜನ, ಪಂಪಾಪತಿ ದೇಸಾಯಿ, ಮಾಳಪ್ಪ ಸಜ್ಜನ, ಶಿವುಮಣಿ, ಪ್ರಭಾಕಾರ ಕಂಚಗಾರ, ತಿರುಪತೆಪ್ಪ ನಾಯಕ ಮತ್ತು ಕಲಮಂಗಿ, ಹತ್ತಿಗುಡ್ಡ ಗ್ರಾಮಗಳ ರೈತರು ಭಾಗವಹಿಸಿದ್ದರು.
ಫಲಾನುಭವಿ ಆಧಾರಿತ ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2024-25ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮ್‌ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾಂಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ https:sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ 13 ಫಲಾನುಭವಿ ಆಧಾರಿತ ಆನ್‌ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ವಿಕಲಚೇತನರಿಗೆ ಬೈಲ್ ಕಿಟ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: 31-08-2024 ಕೊನೆಯ ದಿನಾಂಕವಾಗಿದೆ. ಬಸವನಬಾಗೇವಾಡಿ ತಾಲೂಕಿನ ಎಸ್.ಸಿ.ಬಿರಾದಾರ ಮೊ: 8722135660, ಇಂಡಿ ತಾಲೂಕಿನ ಪರಶುರಾಮ ಬೋಸ ಮೊ: 9972441464 ಹಾಗೂ ಮುದ್ದೇಬಿಹಾಳ ತಾಲೂಕಿನ ಎಸ್. ಕೆ.ಘಾಟಿ ಮೊ: 9740682979 ಸಂಖ್ಯೆಗೆ ಸಂಪರ್ಕಿಸುವಂತೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಪಂಪ್‌ಸೆಟ್‌ಗೆ ನಿತ್ಯ 10 ತಾಸು ವಿದ್ಯುತ್ ಪೂರೈಸಿ : ಶಾಸಕ ಒತ್ತಾಯ
ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ನದಿಗೆ ನೀರು ಸಿರುಗುಪ್ಪ ಹರಿಬಿಟ್ಟಿದರಿಂದ ಭತ್ತ ನಾಟಿ ಮಾಡುವ ರೈತರ ಪಂಪಸೆಟ್‌ಗಳಿಗೆ ನಿತ್ಯ ಹತ್ತು ತಾಸು ವಿದ್ಯುತ್ ಸರಬರಾಜು ಮಾಡಬೇಕು’ ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದಾಗಿ ಜಮೀನುಗಳಿಗೆ ನೀರು ನುಗ್ಗಿ ಭತ್ತ, ಇತರ ಬೆಳೆಗಳು ಹಾಳಾಗಿವೆ. ಸರ್ಕಾರವು ಕೂಡಲೇ ರೈತರಿಗೆ ಪರಿಹಾರ ಒದಗಿಸಬೇಕು. ಇನ್ನು ತಾಲೂಕಿನಲ್ಲಿ ನಿರೀಕ್ಷಿತ ಮಳೆಯಾಗದೆ ಮುಂಗಾರಿನಲ್ಲಿ ಬಿತ್ತಿದ ಬೆಳೆಯು ನೀರಿಲ್ಲದೆ ಒಣಗುತ್ತಿದೆ. ವೇದಾವತಿ ನದಿಗೆ ಕಾಲುವೆ ಮೂಲಕ ನೀರು ಹರಿಸಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿದರು. ತೆಕ್ಕಲಕೋಟೆ ಪಟ್ಟಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಶುದ್ದೀಕರಣ ಮಾಡದೆ ಕುಡಿಯಲು ಪೂರೈಸಲಾಗುತ್ತಿದೆ. ಇದಕ್ಕೆ ಅಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ಟೀಕಿಸಿದರು.