Breaking
Tue. Dec 17th, 2024

April 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ ಆಗಿದೆ. Ration

Spread the love

April 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ ಆಗಿದೆ. ಕೂಡಲೇ ನಿಮ್ಮ ಗ್ರಾಮ ಒನ್, ಕರ್ಣಾಟಕ ಒನ್, Bangalore ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹೊಸ ಐಟಿಐ ಸಂಸ್ಥೆ ಪ್ರಾರಂಭಿಸಲು ‌ಪೋರ್ಟಲ್ ಮೂಲಕ ಅರ್ಜಿ ಆಹ್ವಾನ

2024 ನೇ ಸಾಲಿನಲ್ಲಿ ಹೊಸ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೆಚ್ಚುವರಿ ವೃತ್ತಿ ಘಟಕಗಳನ್ನು ಪ್ರಾರಂಭಿಸಲು ಎನ್.ಸಿ.ವಿ.ಟಿ ಸಂಯೋಜನೆ ಪಡೆಯಲು ಮತ್ತು ಸ್ಥಳಾಂತರಗೊಂಡ ಸಂಸ್ಥೆಗಳು ಮರು ಸಂಯೋಜನೆ ಪಡೆಯುವ ಸಂಬಂಧ ಸಂಯೋಜನಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಡಿ.ಜಿ.ಟಿ ನವದೆಹಲಿರವರ NIMI portal www.nimionlineadmission.in ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸಬೇಕಾದಲ್ಲಿ ಸಂಸ್ಥೆಯವರು ಡಿ.ಜಿ.ಟಿ ನಿಯಮಾನುಸಾರ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕಾರುತ್ತದೆ ಹಾಗೂ ಸಂಯೋಜನೆಗಾಗಿ ನಿಮಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿರುತ್ತದೆ.

ಹೊಸದಾಗಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪ್ರಾರಂಭಿಸಲು ಕನಿಷ್ಠ ನಾಲ್ಕು ವೃತ್ತಿಗಳಿಗೆ ಎನ್.ಸಿ.ವಿ.ಟಿ ಸಂಯೋಜನೆ ಪಡೆಯಬೇಕಾಗಿರಯತ್ತದೆ ಹಾಗೂ ಡಿಜಿಟಿ ನಿಯಮಾನುಸಾರ ಕಟ್ಟಡ,ವಿದ್ಯುತ್, ಯಂತ್ರೋಪಕರಣ, ಸಿಬ್ಬಂದಿ ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕಾಗಿರುತ್ತದೆ ಮತ್ತು ಪ್ರಸ್ತುತ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು ಹೆಚ್ಚುವರಿ ವೃತ್ತ/ ಘಟಕಗಳನ್ನು ಪ್ರಾರಂಭಿಸಲು ಕನಿಷ್ಠ 4 ಗ್ರೆಡಿಂಗ್ ಹೊಂದಿರಬೇಕು. ಪ್ರಸ್ತುತ ಎನ್‌.ಸಿ.ವಿ.ಟಿ ಸಂಯೋಜನೆ ಹೊಂದಿ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಸಂಸ್ಥೆಯು ಬೇರೊಂದು ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಲ್ಲಿ ಡಿ.ಜಿ.ಟಿ ನಿಯಮಾನುಸಾರ ಸಂಯೋಜನೆ ರದ್ದಾಗುತ್ತದೆ.

ಈಗಾಗಲೇ ಸಂಯೋಜನೆ ಪಡೆದ ಸ್ಥಳದಿಂದ ಬೇರೊಂದು ಸ್ಥಳಕ್ಕೆ ಸ್ಥಳಾಂತರಗೊಳಿಸಿ, ನ್ಯಾಯಾಲಯಗಳಲ್ಲಿ ಪ್ರಕರಣ ಹೂಡಿರುವ ಸಂಸ್ಥೆಗಳು ಸ್ಥಳಾಂತರಗೊಂಡಿರುವ ಸ್ಥಳದಲ್ಲಿ ಮರು ಸಂಯೋಜನೆ ಪಡೆಯಲು ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ ಪಡೆದು ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಸ್ಥಳಾಂತರಗೊಂಡಿರುವ ಸಂಸ್ಥೆಯವರು ನಿಯಮಾನುಸಾರ ಸಂಯೋಜನೆ ಪಡೆದ ನಂತರ 2024 ನೇ ಸಾಲಿನಲ್ಲಿ ಪ್ರವೇಶಾತಿಗಳಿಗೆ ಅನುಮತಿಸಲಾಗುವುದು ಇಲ್ಲವಾದಲ್ಲಿ ಪ್ರವೇಶಾತಿಗಳಿಗೆ ಅವಕಾಶಗಳಿರುವುದಿಲ್ಲ ಹಾಗೂ ಎನ್.ಸಿ.ವಿ.ಟಿ ಸಂಯೋಜನೆಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಸಂಯೋಜನೆ ಹೊಂದಲು ಡಿ.ಜಿ.ಟಿ ನಿಯಮಾನುಸಾರ ಅರ್ಹತೆ ಹೊಂದಿರುವ ಸಂಸ್ಥೆಗಳು ನಿರಾಕ್ಷೇಪಣಾ ಪತ್ರ ಪಡೆಯಲು ಮಾರ್ಚ್ 30 ರೊಳಗಾಗಿ ಆಯುಕ್ತಾಲಕ್ಕೆ ಅರ್ಜಿ ಸಲ್ಲಿಸಬೇಕು.

ಉಚಿತ ಸಿಸಿ ಟಿವಿ ಅಳವಡಿಕೆ & ಸೇವೆ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಸಿಸಿ ಟಿವಿ ಅಳವಡಿಕೆ & ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯು ಏ.5 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ/ ಎಪ್ರಿಲ್ -2023 ರ ಎಸ್ ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರಿಲ್ 6 ರವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 60 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ 25 ರಿಂದ ಎಪ್ರಿಲ್ 6 ರವರೆಗೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನು ನಿಬರ್ಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ವೈಶಾಲಿ ಎಂ.ಎಲ್. ಅವರು ಆದೇಶಿಸಿದ್ದಾರೆ.

ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ 2-10 ನಿಮಿಷದಲ್ಲಿ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮೆಟ್ರೋ ರೈಲಿನ ಅಡಿಯಲ್ಲಿ ಸಿಲುಕಿರುವ ಶವವನ್ನು ಹೊರ ತೆಗೆಯಲು ಅಧಿಕಾರಿಗಳು ಹರಸಾಹಸ ಪಡುವಂತಾಯಿತು.

ಇನ್ನೂ ಘಟನೆಯಿಂದಾಗಿ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಪ್ರಸ್ತುತ ಮಾಗಡಿ ರಸ್ತೆ ಮತ್ತು ವೈಟ್ ಫೀಲ್ಡ್ ನಡುವಣ ಮಾತ್ರ ರೈಲು ಸಂಚಾರವಾಗುತ್ತಿದ್ದು, ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ತಾತ್ಕಾಲಿಕವಾಗಿ ರೈಲು ಸಂಚಾರ ಸ್ಥಗಿತವಾಗಿದೆ. ಸಿಎಲ್ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸುತ್ತಿರುವುದರಿಂದ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ನಡುವಿನ ಮಾರ್ಗದಲ್ಲಿ ತಾತ್ಕಾಲಿಕವಾಗಿ ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Related Post

Leave a Reply

Your email address will not be published. Required fields are marked *