ಆತ್ಮೀಯ ರೈತ ಬಾಂಧವರೇ,
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ ಎಂದು ಧಾರವಾಡ ಕೃಷಿ ಇಲಾಖೆ ಅಧಿಕಾರಿಗಳು ಪ್ರಕಟಿಸಿದ್ದಾರೆ.
2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಜಮೀನಿಗೆ ಶೇಕಡಾ 45 ರಷ್ಟು ಸಹಾಯಧನ ನೀಡಲಾಗುವದು. ಎಲ್ಲ ವರ್ಗದ ರೈತರಿಗೆ 12 ಎಕರೆ 20 ಗುಂಟೆ ವರೆಗೆ ಸಹಾಯಧನ ನೀಡಲಾಗುವುದು ಆದರೆ ತರಕಾರಿ ಮತ್ತು ಹೂ ಬೆಳೆಗಳಿಗೆ 5 ಎಕರೆ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವದು.
ಹೆಚ್ಚಿನ ಮಾಹಿತಿಗಾಗಿ ಅಮ್ಮಿನಭಾವಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಮಹೇಶ ಪಟ್ಟಣಶೆಟ್ಟಿ (9916114535), ಗರಗ ಸಹಾಯಕ ತೋಟಗಾರಿಕೆ ಅಧಿಕಾರಿ ಲಕ್ಷ್ಮೀ ಕುರಬೇಟ್ಟ (7353674533), ಧಾರವಾಡದ ಸಹಾಯಕ ತೋಟಗಾರಿಕೆ ಅಧಿಕಾರಿ ಮಹಾಂತೇಶ ಯಮಕನಮರಡಿ (8310143782) ಹಾಗೂ ಅಳ್ಳಾವರದ ಸಹಾಯಕ ತೋಟಗಾರಿಕೆ ಅಧಿಕಾರಿ ದೀಪ್ತಿ ವಾಲಿ (8310143782) ಅವರನ್ನು ಸಂಪರ್ಕಿಸಬಹುದು ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಬೇಟಿ ನೀಡಬಹುದು ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಲ ಸಂರಕ್ಷಣೆ ಮತ್ತು ಅದರ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಲು ಭಾರತ ಸರ್ಕಾರ ಬದ್ಧವಾಗಿದೆ. ಈ ಪರಿಣಾಮಕ್ಕಾಗಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ನೀರಾವರಿ ವ್ಯಾಪ್ತಿಯನ್ನು ವಿಸ್ತರಿಸುವ ದೃಷ್ಟಿಯೊಂದಿಗೆ ರೂಪಿಸಲಾಗಿದೆ ‘ಹರ್ ಖೇತ್ ಕೋ ಪಾನಿ’ ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸುವ ‘ಒಂದು ಹನಿಗೆ ಹೆಚ್ಚು ಬೆಳೆ’ ಅನ್ನು ಕೇಂದ್ರೀಕೃತ ರೀತಿಯಲ್ಲಿ ಕೊನೆಯಿಂದ ಅಂತ್ಯದ ಪರಿಹಾರದೊಂದಿಗೆ. ಮೂಲ ನಿರ್ವಹಣೆ, ರಚನೆ, ಕ್ಷೇತ್ರ ವಿತರಣೆ, ಅಪ್ಲಿಕೇಶನ್ ಮತ್ತು ವಿಸ್ತರಣೆ ಚಟುವಟಿಕೆಗಳು. ಗೌರವಾನ್ವಿತ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಜುಲೈ 1, 2015 ರಂದು ನಡೆದ ತನ್ನ ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ (PMKSY) ಅನುಮೋದನೆ ನೀಡಿದೆ.
ಸುಸ್ಥಿರ ಅಭಿವೃದ್ಧಿ ಗುರಿಗಳು (SDG) 2030, ರಾಷ್ಟ್ರೀಯವಾಗಿ ನಿರ್ಧರಿಸಿದ ಬದ್ಧತೆಗಳು (NDCs) ಮತ್ತು ಭೂಮಿ ಅವನತಿ ತಟಸ್ಥತೆ (LDN) ಅನುಸಾರ 260 ಲಕ್ಷ ಹೆಕ್ಟೇರ್ ಪ್ರದೇಶವನ್ನು ಉಪಚರಿಸುವುದು ದೇಶದ ಪ್ರಮುಖ ಬದ್ದತೆಯಾಗಿರುತ್ತದೆ. ಈ ಎಲ್ಲಾ ಅಂತಾರಾಷ್ಟ್ರೀಯ ಬದ್ಧತೆಗಳಿಗೆ ದೇಶದ ಮಳೆಯಾಶ್ರಿತ ಪ್ರದೇಶಗಳು ಗಣನೀಯ ಕೊಡುಗೆ ನೀಡಬಲ್ಲವು. ಮಳೆಯಾಶ್ರಿತ ಪ್ರದೇಶದ ರೈತರು ಈ ಉದ್ದೇಶಗಳನ್ನು ಸಾಧಿಸಲು ಕೆಲಸ ಮಾಡಿದರೆ ಅದು ಮಳೆಯಾಶ್ರಿತ ಪ್ರದೇಶಗಳು ಮತ್ತು ಅಲ್ಲಿನ ರೈತರಿಗೆ ಗೆಲುವು-ಗೆಲುವಿನ ಪರಿಸ್ಥಿತಿಯಾಗಿ ಹೊರಹೊಮ್ಮಲಿದೆ. ಮಳೆಯಾಶ್ರಿತ ಪ್ರದೇಶಗಳಲ್ಲಿ ಹೆಚ್ಚಿನ ಮತ್ತು ಉದ್ದೇಶಿತ ಹೂಡಿಕೆಯ ಅಗತ್ಯವನ್ನು ಇದು ಸೂಚಿಸುತ್ತದೆ. ಆದ್ದರಿಂದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಭೂಸಂಪನ್ಮೂಲ ಇಲಾಖೆಯು 2021-22 ರಿಂದ ಇಡೀ ದೇಶದಲ್ಲಿ “ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0” (PMKSY-WDC 2.0)” ಅನುಷ್ಠಾನಗೊಳಿಸಲು ತಿರ್ಮಾನಿಸಿ, ಕರ್ನಾಟಕ ರಾಜ್ಯಕ್ಕೆ 2.75006 ಲಕ್ಷ ಹೆಕ್ಟೇರ್ ಪ್ರದೇಶದ ಗುರಿಯನ್ನು ನಿಗಧಿಪಡಿಸಲಾಗಿದೆ. ಈ ಹೊಸ ಪೀಳಿಗೆಯ ಜಲಾನಯನ ಅಭಿವೃದ್ದಿಯ ಮೂಲಕ ರಾಜ್ಯದ 30 ಜಿಲ್ಲೆಗಳ 57 ಮಳೆಯಾಶ್ರಿತ ತಾಲೂಕುಗಳ ಆಯ್ದ 57 ಉಪ ಜಲಾನಯನಗಳನ್ನು ಉಪಚರಿಸಲು ಕಾರ್ಯಕ್ರಮ ರೂಪಿಸಿದೆ.
14.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಒಂದೊಂದು ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ತೀರಾ ಕಡಿಮೆ.
ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ : ರೈತರಿಗೆ ಸಿಗದ ಸಿಹಿ
ಧಾರವಾಡ ಜಿಲ್ಲೆಯಾದ್ಯಂತ ಬೆಂಬಲ ಬೆಲೆಯಡಿ 20 ಕಡೆ ಹೆಸರು ಕಾಳು ಖರೀದಿ ಕೇಂದ್ರ ಆರಂಭಿಸಲಾಗಿದೆ. ನೋಂದಣಿ ಆರಂಭವಾದ ದಿನದಿಂದ ಸೆಪ್ಟೆಂಬರ್ 10ರ ವರೆಗೆ 2,625 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಧಾರವಾಡ 152, ಹುಬ್ಬಳ್ಳಿ 608, ಅಣ್ಣಿಗೇರಿ 485, ಕುಂದಗೋಳ 190, 1190 ರೈತರು ಹೆಸರು ನೋಂದಣಿ ಮಾಡಿಕೊಂಡಿದ್ದು, ನವಲಗುಂದ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕುಂದಗೋಳದಲ್ಲಿ ಕಡಿಮೆ ನೋಂದಣಿ ಆಗಿವೆ.
ಅಣ್ಣಿಗೇರಿಯಲ್ಲಿ 2. ಧಾರವಾಡದಲ್ಲಿ 3, ಹುಬ್ಬಳ್ಳಿಯಲ್ಲಿ 5, ಕುಂದಗೋಳದಲ್ಲಿ 2. ನವಲಗುಂದದಲ್ಲಿ 8 ಕಡೆ ಖರೀದಿ ಕೇಂದ್ರ ಆರಂಭಿಸಲಾಗಿದೆ. ಅಣ್ಣಿಗೇರಿಯ ಪಿಕೆಪಿಎಸ್‌ನಲ್ಲಿ 385 ರೈತರು ಹೆಸರು ನೋಂದಾಯಿಸಿಕೊಂಡಿದ್ದರೆ, ನವಲಗುಂದ ಎಪಿಎಂಸಿಯಲ್ಲಿ (ಟಿಎಪಿಸಿಎಂಎಸ್ ಅಣ್ಣಿಗೇರಿ) 316 ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಅತಿ ಹೆಚ್ಚು ಅಣ್ಣಿಗೇರಿ ಖರೀದಿ ಕೇಂದ್ರದಲ್ಲಿ ನೋಂದಣಿ ಆಗಿವೆ.
ಎಫ್‌ಎಕ್ಯೂ ಗುಣ್ಣಮಟ್ಟದ ಹೆಸರುಕಾಳುಗಳನ್ನು ರೈತರಿಂದ ಖರೀದಿಸಲಾಗುತ್ತಿದ್ದು, ನೋಂದಣಿ ಕಾಲಾವಧಿಯನ್ನು 45 ದಿನ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ಕ್ವಿಂಟಲೊಗೆ 8,682 ದರದಲ್ಲಿ ಒಬ್ಬ ರೈತರಿಂದ ಎಕರೆಗೆ 2 ಕ್ವಿಂಟಲ್‌ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸಲಾಗುವುದು.
ನೋಂದಣಿ ಕಾರ್ಯ ಮಾತ್ರ ನಡೆದಿದ್ದು. ಖರೀದಿಯನ್ನು ಇನ್ನೆರಡು ದಿನಗಳಲ್ಲಿ ಆರಂಭಿಸಲಾಗುವುದು’ ಎಂದು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಹುಬ್ಬಳ್ಳಿ ಶಾಖಾ ವ್ಯವಸ್ಥಾಪಕ ವಿನಯ ಪಾಟೀಲ ತಿಳಿಸಿದರು. ಎಂಎಸ್‌ಪಿ ಯೋಜನೆಯಡಿ ಹೆಸರುಕಾಳು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಸಂಸ್ಥೆಗಳನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳಾಗಿ ಗುರುತಿಸಲಾಗಿದೆ.
ಹೆಸರು ಕಾಳು ಖರೀದಿಗೆ ಸರ್ಕಾರ ಸಾಕಷ್ಟು ನಿಯಮಗಳನ್ನು ವಿಧಿಸಿದ್ದು, ಇದನ್ನು ಸರಳಗೊಳಿಸಿ ರೈತರಿಂದ ಹೆಸರು ಕಾಳು ಖರೀದಿಸಬೇಕು. ಹೆಸರು ಕಾಳು ಬೆಳೆ ಪ್ರಮಾಣವು ಕಡಿಮೆ ಆಗಿದ್ದು, ಮಳೆ ನಿರಂತರವಾಗಿ ಸುರಿಯುತ್ತಿದೆ. ಬೆಳೆ ಒಣಗಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬೆಳೆ ಬೆಳದ ರೈತರು ಕಂಗಾಲಾಗಿದ್ದಾರೆ. ಹೆಸರು ಖರೀದಿಗೆ ಯಾವುದೇ ನಿಯಮಗಳನ್ನು ವಿಧಿಸದೇ ಖರೀದಿಗೆ ಮುಂದಾಗಬೇಕು. ಹೆಸರು ಬೆಳೆ ಬೆಳೆದ ರೈತರಿಗೂ ಅನುಕೂಲವಾಗುತ್ತದೆ’ ಎಂದು ರೈತ ಮುಖಂಡ ಸುಭಾಷ ಅವ್ವಣ್ಣವರ ತಿಳಿಸಿದರು.
ಎಫ್‌ಎಕ್ಯೂ ಗುಣ್ಣಮಟ್ಟದ ಹೆಸರುಕಾಳುಗಳನ್ನು ರೈತರಿಂದ ಖರೀದಿಸುತ್ತಿರುವುದರಿಂದ, ಖರೀದಿ ಕಾರ್ಯ ಇನ್ನು ಆರಂಭಿಸಿಲ್ಲ. ನೋಂದಣಿ ಕಾರ್ಯ ಮಾತ್ರ ನಡೆದಿದೆ ವಿನಯ ಪಾಟೀಲ ಶಾಖಾ ವ್ಯವಸ್ಥಾಪಕ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚಾರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 1.08.2006 ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 5.25,000/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೆ.27 ರೊಳಗಾಗಿ ಸೂಕ್ಷ್ಮ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಳಿಸಿದ್ದಾರೆ.