ತೋಟಗಾರಿಕೆ ಇಲಾಖೆಯಲ್ಲಿ ತಾಳೆ ಬೆಳೆ ಯೋಜನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26 ನೇ ಸಾಲಿನ ತೋಟಗಾರಿಕೆ ಇಲಾಖೆ ತಾಳೆ ಬೆಳೆ ಯೋಜನೆ ಯಲ್ಲಿ ಹೊಸದಾಗಿ ತಾಳೆ ಹಚ್ಚಲು ಇಚ್ಚಿಸುವ ರೈತರು ಈ ಕೆಳಕಂಡ ಅಧಿಕಾರಿ ಗಳನ್ನು ಸಂಪರ್ಕಿಸಲು ಕೊರಿದಿ.

2025-26 ಬೆಳೆಯಾದಂತ ತಾಳೆ ಬೆಳೆ ಯೋಜನೆ ಅಡಿ ತಾಳೆ ಸಸಿಗಳನ್ನು ನೆಡುವ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಅತೀ ಹೆಚ್ಚು ನೀರಾವರಿ ಹೊಂದಿರುವ ಬೋರವೆಲ್, ಬಾವಿ, ಕ್ಯಾನಲ್, ಹೊಳೆದಂಡೆ ಪ್ರದೇಶದಲ್ಲಿ ತಾಳೆ ಬೆಳೆ ಹಚ್ಚಲು ಇಚ್ಚಿಸುವ ರೈತರು ಈ ಕೆಳಕಂಡ ದಾಖಲಾತಿಗಳೊಂದಿಗೆ 1) ಕಂಪ್ಯೂಟರ್ ಉತಾರ 2) ಆಧಾರ ಕಾರ್ಡ ಮತದಾರರ ಚೀಟಿ (ಓಟ‌ರ್ ಆಯ್.ಡಿ). 3) ಬಿಟ್ಟಿ ನೀಡಿಯಂದು ತೋಟಗಾರಿಕೆ ಇಲಾಖೆ ತಿಳಿಸಿದೆ. 4) ಬ್ಯಾಂಕ ಫಾಸ್ ಬುಕ್ಕ ಝರಾಕ್ಸ್‌ 5) 3 ಪೋಟೋ ಈ ತೆಗೆದುಕೊಂಡು  ತಾಲೂಕು ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ದಾಖಲಾತಿಗಳನ್ನು ಅಧಿಕಾರಿಗಳಿಗೆ ಕೊಡಿ.

ಮೊಬೈಲ್ ಸಂಖ್ಯೆಗಳು

ಇಂಡಿ 9980944571
ವಿಜಯಪುರ 96868 92584
ಬಬಲೇಶ್ವರ 9449915123
ಚಡಚಣ 7019417256
ಚಡಚಣ ಬಳ್ಳೂಳಿ 8208637722
ಮುದ್ದೇಬಿಹಾಳ 9741461036
ಬಾಗೇವಾಡಿ 9686892584
ಸಿಂದಗಿ 8904873738

ಇವರಿಗೆ ಸಂಪರ್ಕಿಸಿಲು ಕೊರಿದಿ ಮತ್ತು ಈಗಾಗಲೇ ತಾಳೆ ಬೆಳೆದುರೈತರು ತಮ್ಮ ಹೊಲದಲ್ಲಿ ಆಜು ಬಾಜು ತೋಟದಲ್ಲಿ ಹಾಗೂ ಗ್ರಾಮದಲ್ಲಿ ಕನಿಷ್ಠ ಪಕ್ಷ ಹೊಸದಾಗಿ ಹಚ್ಚಲು ತಿಳಿಸಬೇಕಾಗಿ ತಮ್ಮಲ್ಲಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ತಾಲೂಕಿನ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕಗಳಿಗೆ ಬೆಟ್ಟಿ ನೀಡಿ. ಈ ಸಂದೇಶವನ್ನು ಎಲ್ಲ ರೈತರಿಗೆ ಶೇರ್ ಮಾಡಬೇಕಾಗಿ ವಿನಂತಿ.


27.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಹ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಾಳಿಯೊಂದಿಗೆ ಉತ್ತಮ ಹಾಗೂ ಉಳಿದ ಭಾಗಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗಾಳಿ ಮಳೆಯ ವಾತಾವರಣವು ಜುಲೈ 28ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. *ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ ತನಕವೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಅಲ್ಪ ಪ್ರಮಾಣದ ಬಿಸಿಲು ಸಾಧ್ಯತೆಯೂ ಇದೆ. ಉಡುಪಿ ಜಿಲ್ಲೆಯ ಉತ್ತರ ಭಾಗದ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕರಾವಳಿಯಾದ್ಯಂತ ಮಳೆಯ ಜೊತೆಗೆ ಗಾಳಿಯೂ ಇರಬಹುದು. ಇದರಿಂದ ಮಳೆ ಒಮ್ಮೆಗೇ ಜೋರು ಬಂದು 5 – 10 ನಿಮಿಷಗಳಲ್ಲಿ ಕಡಿಮೆಯಾಗಬಹುದು.
ಈಗಿನಂತೆ ಜುಲೈ 28ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆ(ಗಾಳಿಯೊಂದಿಗೆ) ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು :    ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. (ಮಧ್ಯಾಹ್ನ ನಂತರ ಕಡಿಮೆ ಆಗಬಹುದು) ಉಳಿದ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 27ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29 ಅಥವಾ 30ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಕೊಡಗಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ,  ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 29 ಅಥವಾ 30ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸೂಚನೆಗಳಿವೆ

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

25.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ನಿರಂತರ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜುಲೈ 29ರ ತನಕ ಈ ವಾತಾವರಣವು ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ನಿರಂತರ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 29ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 27ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.

ಬಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದ್ದಂತೆಯೇ ಮುಂಗಾರು ಸಹ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

24.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 29ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಿಡುವಿನ ಅವಧಿ ಕಡಿಮೆ ಇದ್ದು, ನಿರಂತರ ಹನಿ ಮಳೆಯ ಸಾಧ್ಯತೆ ಇದೆ.

ಮಲೆನಾಡು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದೀರ್ಘ ಅವಧಿಯ ಹನಿ ಮಳೆ ಜುಲೈ 28ರ ತನಕ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳ ತಾಲೂಕುಗಳಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಬಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ ಹೆಚ್ಚಾಗುವ ಆತಂಕವಿದೆ.

Leave a Comment