Breaking
Tue. Dec 17th, 2024

ಹಿಂದುಳಿದ ವರ್ಗಗಳ ಕುಟುಂಬದವರಿಗೆ ಹೊಲಿಗೆ ಯಂತ್ರ ವಿತರಣೆ ಅರ್ಜಿ ಸಲ್ಲಿಸಿ

Spread the love

ಅರ್ಹತೆ?

ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಕುಟುಂಬ

ವಾರ್ಷಿಕ ವರಮಾನ

ಗ್ರಾಮಾಂತರ ಪ್ರದೇಶ :- ರೂ. 98,000
ಪಟ್ಟಣ ಪ್ರದೇಶ :- ರೂ.1,20,000

ಅರ್ಜಿದಾರರ ವಯಸ್ಸು

18 + 55 ವರ್ಷ

ಯಾರಿಗೆ ಬರಲ್ಲ ಈ ಯೋಜನೆ?

ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ.

ಕೊನೆಯ ದಿನಾಂಕ?

ಆಗಸ್ಟ್ 31

ಅರ್ಜಿ ಎಲ್ಲಿ ಸಲ್ಲಿಸಬೇಕು?

ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. http://sevasindhu.karnataka.gov.in ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಹೋಗಿ ಅರ್ಜಿ ಸಲ್ಲಿಸಿ.

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಅರ್ಜಿ ಆಹ್ವಾನ

ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ 2024- 25ನೇ ಸಾಲಿನ ಹೈಟೆಕ್‌ ಹಾರ್ವೆಸ್ಟರ್ ಹಬ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ತಲಾ ಒಂದು ಸೇರಿ ಒಟ್ಟು 2 ಸಂಯೋಜಿತ ಹಾರ್ವೆಸ್ಟ‌ರ್ ಕೇಂದ್ರ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಹಬ್‌ಗೆ ಆಸಕ್ತ ರೈತರು, ಸಂಘ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಓ), ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (ಎಫ್.ಎಂ.ಬಿ), ಕೃಷಿ ಯಂತ್ರಧಾರೆ ಕೇಂದ್ರಗಳು (ಸಿ.ಹೆಚ್.ಎಸ್.ಸಿ)ಗಳ ಅರ್ಜಿಯ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 17ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಫಲಾನುಭವಿ ಅಥವಾ ಸಂಘ ಸಂಸ್ಥೆಯವರು ಅರ್ಜಿಯೊಂದಿಗೆ ಸಂಸ್ಥೆಯಾದಲ್ಲಿ ಸಹಕಾರ ಸಂಘಗಳ ನಿಬಂಧನೆಯಂತೆ ಸಂಸ್ಥೆ ನೋಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ, ಪಹಣಿ ಪ್ರತಿ ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಎಫ್.ಐ.ಡಿ ಸಂಖ್ಯೆ, ರೂ 100 ಚಾಫಾ ಕಾಗದದ ಮೇಲೆ ಹಬ್ ಅನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ), ಇತ್ತೀಚಿನ 3 (2021-22, 2022-23 2023-24) ಲೆಕ್ಕ ಪರಿಶೋಧನಾ ಪತ್ರ, ಸಹಾಯ ಧನವು ಕ್ರೆಡಿಟ್ ಲಿಂಕ್ಟ್ ಬ್ಯಾಕ್ ಎಂಡೆಟ್ ಸಬ್ಸಿಡಿ ಆಗಿರುವುದ- ರಿಂದ ಸಂಬಂಧಿಸಿರುವ ಬ್ಯಾಂಕ್ ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರವನ್ನು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಶೆಡ್ಯುಲ್ಡ್ ಬ್ಯಾಂಕ್ (Nationalized bank/Scheduled bank) ಪಡೆದು (ಇನ್ ಪ್ರಿನ್ಸಿಪಲ್ ಲೋನ್ ಸೆಂಕ್ಷನ್ ಲೆಟರ್) ಅರ್ಜಿ ಸಲ್ಲಿಸಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರು ಕಾಳು ಖರೀದಿ ಕೇಂದ್ರ ತರೆಯಲು ಆಗ್ರಹಿಸಿ ಫತಿಭಟನೆ

ಮುಂಗಾರು ಹಂಗಾಮಿನ ಪ್ರಮುಖ ಬೆಳೆ ಹೆಸರು ಕಟಾವು ಪ್ರಾರಂಭವಾಗಿ ಸುಮಾರು ದಿನಗಳಾಗಿವೆ. ತಕ್ಷಣವೇ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಸೋಮವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸರಕಾರ ಈಗಾಗಲೇ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದ್ದು ಒಳ್ಳೆಯ ಬೆಳವಣಿಗೆಯಾದರೂ ಹೆಸರು ಬೆಳೆ ಖರೀದಿ ಕೇಂದ್ರವನ್ನು ಆರಂಭಿಸಿದಾಗ ಮಾತ್ರ ರೈತರಿಗೆ ಲಾಭ ಸಿಗಲಿದೆ. ಇಲ್ಲದಿದ್ದರೆ ರೈತರು ತಮ್ಮ ಹಣದ ಅಡಚಣೆಗಾಗಿ ಕಡಿಮೆ ಬೆಲೆಯಲ್ಲಿ ಬೇರೆ ಕಡೆಗಳಲ್ಲಿ ಮಾರಾಟ ಮಾಡುತ್ತಾರೆ.

ಆದ್ದರಿಂದ ಅಧಿಕಾರಿಗಳು ಶೀಘ್ರವೇ ಜಿಲ್ಲೆಯಲ್ಲಿ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ಆಗ್ರಹಿಸಿದರು. ಸರಕಾರ ಈಗಾಗಲೇ ಪ್ರತಿ ಕ್ವಿಂಟಾಲ್‌ಗೆ 8682 ರೂ. ಬೆಂಬಲ ಬೆಲೆ ಘೋಷಿಸಿದೆ. ಅದರಂತೆ ಕೇಂದ್ರ ತೆರೆದು ಹೆಸರು ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಕಳೆದ ವರ್ಷ ಬರದಿಂದಾಗಿ ರೈತರು ಸಾಕಷ್ಟು ಹಾನಿ ಅನುಭವಿಸಿದ್ದಾರೆ. ಪ್ರಸಕ್ತ ವರ್ಷ ಉತ್ತಮ ಫಸಲನ್ನು ನಿರೀಕ್ಷಿಸಲಾಗಿದ್ದು, ರೈತರ ಹಿತರಕ್ಷಣೆಗಾಗಿ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದರು. ಒಂದು ವಾರದಲ್ಲಿ ಖರೀದಿ ಕೇಂದ್ರ ತೆರೆಯದಿದ್ದಲ್ಲಿ ಜಿಲ್ಲೆಯಾದ್ಯಂತ ಎಲ್ಲ ತಾಲೂಕ ಹಾಗೂ ಜಿಲ್ಲಾ ಎಪಿಎಂಸಿ ಗೇಟುಗಳಿಗೆ ಕೀಲಿ ಹಾಕಿ ವಹಿವಾಟು ಬಂದು ಮಾಡಿ ಖರೀದಿ ಕೇಂದ್ರ ತೆರೆಯುವರೆಗೆ ಚಳುವಳಿ ಮಾಡಲಾಗುವದು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನೆಡೆದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಹೊಣೆಯನ್ನು ಹೊರಬೇಕಾಗುತ್ತದೆ ಎಂದು ಈ ಮನವಿಯ ಮುಖಾಂತರ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೌಡರಡ್ಡಿ, ಜಿಲ್ಲಾ ಗೌರವಧ್ಯಕ್ಷ ಮಹಾದೇವಗೌಡ ಪಾಟೀಲ, ರೋಣ ತಾಲೂಕು ಅಧ್ಯಕ್ಷ ಸಂಗಣ್ಣ ದಂಡಿನ, ವಿಜಯಕುಮಾರ ಸುಂಕದ, ಪಾಂಡು ಸೋಮರಡ್ಡಿ, ರವಿ, ಮಂಜುನಾಥ ಭಜಂತ್ರಿ, ಸೇರಿದಂತೆ ರೈತ ನಾಯಕರು ಭಾಗವಹಿಸಿದ್ದರು. ಗದಗ ನಗರದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಾಲ ಸೌಲಭ್ಯಕ್ಕಾಗಿ ಅರ್ಜಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಮಹಿಳಾ ಫಲಾನುಭವಿಗಳಿಗೆ ಸ್ವ- ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಲ್ಲಿ ತೊಡಗಿಸಿ ಆರ್ಥಿಕವಾಗಿ ಸ್ವಾವಲಂಭಿಗಳನ್ನಾಗಿ ಮಾಡಲು ಪಡೆಯುವ ಸಾಲದ ಘಟಕವೆಚ್ಚಕ್ಕೆ ಶೇ.50 ಅಥವಾ 2 ಲಕ್ಷದವರೆಗೆ ಸಹಾಯಧನ ಒದಗಿಸಲು ಅರ್ಹ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಈಗಾಗಲೇ ನಿಗದಿಂದ ಕುಟುಂಬದ ಸದಸ್ಯರು ಸಾಲ ಸೌಲಭ್ಯ ಪಡೆದಿರಬಾರದು. ಅರ್ಜಿಯನ್ನು ಆನ್‌ಲೈನ್ ಮೂಲಕ ಆಗಸ್ಟ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಜಿಲ್ಲಾಡಳಿತ ಭವನದ ಆವರಣ, ನವನಗರ, ಬಾಗಲಕೋಟೆ .08354-236255 ಇವರನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮೆಟ್ರಿಕ್ ನಂತರದ ವಸತಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿಧ್ಯಾರ್ಥಿಗಳಿಗೆ) 2024-25ನೇ ಸಾಲಿನ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ಹಿಂದುಳಿದ ವರ್ಗಗಳಾದ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ 2.50 ಲಕ್ಷಗಳಿಗೆ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ 1 ಲಕ್ಷಗಳಿಗೆ ಮೀರಿರಬಾರದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 04 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ https://shp.karnataka.gov.in/cwd ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳು ಹಾಗೂ ಸರ್ಕಾರದ ಆದೇಶಕ್ಕಾಗಿ ಇಲಾಖಾ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದಾಗಿದೆ.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@kar-nataka.gov.in ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಹಾಗೂ ಸಹಾಯವಾಣಿ ಸಂಖ್ಯೆ : 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತತ ಮಳೆಗೆ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಹಾನಿ

ಈರುಳ್ಳಿ ಬಿತ್ತಿದ ರೈತರ ಮೊಗದಲ್ಲಿ ಈ ವರ್ಷ ಮಂದಹಾಸ ಮೂಡಿತ್ತು. ಬೆಳೆ ಚನ್ನಾಗಿ ಬರುತ್ತಿದೆ ಎಂದು ಯೋಜಿಸುತ್ತಿದ್ದರು. ಆ ವೇಳೆಗೆ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ. ಕಳೆದ ಗುರುವಾರ ಸುರಿದ ಮಳೆಗೆ ತಾಲ್ಲೂಕಿನ ಯಮನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಗೊಪ್ಪ ಹದ್ದಿನಲ್ಲಿರುವ ರೈತನ ಹೊಲದ ಈರುಳ್ಳಿ ಬೆಳೆ ಹೊಲದಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆಹಾನಿಗಿದೆ ಬಿತ್ತಿದ ದುಬಾರಿ ಬೀಜ, ಬಿತ್ತನೆ ಖರ್ಚು, ಕಳೆ ಎಕರೆಗೆ ಕನಿಷ್ಟ % 25-30 ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಪ್ರತಿ ಕೆ.ಜಿ.ಗೆ %45 ರಿಂದ % 55ನಂತೆ ಮಾರಾಟ ಮಾಡಲಾಗುತ್ತಿದೆ ಆದರೆ ಬಿತ್ತಿದ ಈರುಳ್ಳಿ ಬೆಳೆ ನೀರು ನಿಂತು ಕೊಳೆ ರೋಗ ಬಂದು ಬೆಳೆ ಕೈಗೆ ಬಾರದ ಪರಿಸ್ಥಿತಿ ಬಂದೊಗಿದೆ ಎಂದು ರೈತರು ಅಳಲು ತೋಡಿಕೊಂಡರು. ಸಾಲ ಸೋಲ ಮಾಡಿ ಈರುಳ್ಳಿ ಬಿತ್ತಿದ ಬೆಳಗಾರರಿಗೆ ಮಳೆಯಿಂದ ನಷ್ಟ ಉಂಟಾಗಿದೆ. ಕಳೆದ ಕೆಲದಿನಗಳಿಂದ ಮಳೆ ಅಬ್ಬರಿಸಿದ್ದರಿಂದಾಗಿ ಈರುಳ್ಳಿ ಬೆಳೆ ಹಾಳಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ’ ಎಂದರು.

ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೊಗಳು ಹೆಚ್ಚು ಆಕರ್ಷಕ, ಆರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು. ಆಗಸ್ಟ್ 21 ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್ ಮಿತ್ರ ಮತ್ತು ಹೋಂ ಗಾರ್ಡ್ಗಳನ್ನು ಹೆಚ್ಚಿನ ಪಾಕಿರ್ಂಗ್, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ. ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು.

Related Post

Leave a Reply

Your email address will not be published. Required fields are marked *