ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023- 24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಫಲಾಪೇಕ್ಷಿಗಳು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 15 ರೊಳಗೆ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಾಜಿನಗರ, 1 ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-10 ಅಥವಾ ದೂರವಾಣಿ : 080-23421533 ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗಮದ ವಿವಿಧ ಸೌಲಭ್ಯ : ಅರ್ಜಿ ಅವಧಿ ವಿಸ್ತರಣೆ
ಬಾಗಲಕೋಟೆ : ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಹ ಫಲಾಪೇಕ್ಷೀಗಳಿಂದ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಡಿಸೆಂಬರ 15 ವರೆಗೆ ವಿಸ್ತರಿಸಲಾಗಿರುತ್ತದೆ.
ಅರ್ಜಿಗಳನ್ನು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕೊಠಡಿ ನಂ.201, ಜಿಲ್ಲಾ ಆಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸಬಹುದಾಗಿದೆ.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಗದಗ : ರಾಜ್ಯದಲ್ಲಿ ಇತ್ತೀಚೆಗೆ ಕಾನೂನು ಪದವಿಯನ್ನು ಪಡೆದು ಹೊರಬರುವ ವಕೀಲರಿಗೆ ವೃತ್ತಿ ಜೀವನ ಪ್ರಾರಂಭ ಮಾಡುವ ಮೊದಲು ನುರಿತ ವಕೀಲರ ಜೊತೆಗೆ ಅವರ ವೃತ್ತಿ ಜೀವನದಲ್ಲಿ ಪ್ರಾರಂಭಿಕ ಹಂತದಲ್ಲಿ ಸಹಾಯಧನ ನೀಡುವ ಸಲುವಾಗಿ ಪ್ರತಿ ವಕೀಲರಿಗೆ ಪ್ರತಿ ತಿಂಗಳು ರೂ.2,000/- ರಂತೆ 24 ತಿಂಗಳುಗಳ ಪ್ರೋತ್ಸಾಹ ಧನಕ್ಕಾಗಿ 2023-24 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ರಾಜ್ಯದ ಬಾರ್ ಕೌನ್ಸಿಲ್ ನಲ್ಲಿ 1-6-2022 0 31-5-2023 ನೊಂದಾಯಿಸಿರಬೇಕು ಹಾಗೂ ವಾರ್ಷಿಕ ವರಮಾನ 2.40,000/
ತಾಲೂಕಾ ಬಾರ್ ಕೌನ್ಸಿನ್‌ನಲ್ಲಿ ನೊಂದಣಿಯಾದವರು ಆಯಾ ತಾಲೂಕಾ ಹಿರಿಯ ನ್ಯಾಯಾಧೀಶರ ಮುಖಾಂತರ ಮತ್ತು ಜಿಲ್ಲಾ ಬಾರ್ ಕೌನ್ಸಿನ್‌ನಲ್ಲಿ ನೋಂದಣಿಯಾದವರು ನೇರವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಪದವೀಧರರ ಪ್ರೋತ್ಸಾಹ ಧನ ಆಯ್ಕೆ ಸಮಿತಿಗೆ ಜನೆವರಿ 12 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಹುಬ್ಬಳ್ಳಿ ರಸ್ತೆ, ಗದಗ ದೂ.ಸಂ. 08372-222077 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಯಶಸ್ವಿನಿ ಯೋಜನೆಗೆ ನೋಂದಣಿ
ಬಾಗಲಕೋಟೆ : ಸಹಕಾರ ಇಲಾಖೆಯಿಂದ ಸರ್ಕಾರದ ಬಹು ಮುಖ್ಯ ಯೋಜನೆಗಳಲ್ಲಿ ಒಂದಾದ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಸರ್ಕಾರವು 2023-24ನೇ ಸಾಲಿನ ಸಹಕಾರಿ ಸಂಘದ ಸದಸ್ಯರುಗಳನ್ನು ಹೊಸ ಸದಸ್ಯರನ್ನಾಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಿದೆ.
ಪ್ರಸಕ್ತ ಸಾಲಿನ ನೋಂದಣಿ ಕಾರ್ಯ 1, ಜನವರಿ 2024 ರಿಂದ ಪ್ರಾರಂಭವಾಗಿ 28 ಫೆಬ್ರವರಿ 2024ರ ಅವಧಿಯನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಧದ ಸಹಕಾರ ಸಂಘಗಳಲ್ಲಿರುವ ಅರ್ಹ ಸದಸ್ಯರುಗಳು ಈ ಯೋಜನೆಯಡಿಯಲ್ಲಿ ಸದಸ್ಯರು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235056ಗೆ ಸಂಪರ್ಕಿಸಬಹುದಾಗಿದೆ.
ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ಸಂಜೀವಿನಿ ಯೋಜನೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾಯಿಸಿಕೊಳ್ಳಲು ಹೆಚ್. ಆರ್.ಎಂ.ಎಸ್. ತಂತ್ರಾಂಶದಲ್ಲಿ https://hrms.karnataka.gov.in (ವೆಬ್ ಮೂಲಕ ಹಾಗೂ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಹಂತ ಹಂತವಾಗಿ ನೊಂದಾಯಿಸುವ ವಿಧಾನ ಕೈಪಿಡಿಯಲ್ಲಿ ವಿವರಿಸಲಾಗಿದ್ದು, ಕೈಪಿಡಿಯಲ್ಲಿ ತಿಳಿಸಿರುವಂತೆ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಅವಶ್ಯಕ ಮಾಹಿತಿಯನ್ನು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹೆಚ್.ಆರ್.ಎಂ.ಎಸ್.) ತಂತ್ರಾಂಶದಲ್ಲಿ ಇಂಧೀಕರಿಸಬೇಕಾಗಿರುತ್ತದೆ. ನಂತರ ವೈದ್ಯಕೀಯ ಹಾಜರಾತಿ ನಿಯಮಗಳನ್ವಯ ಬಟವಾಡೆ ಅಧಿಕಾರಿಗಳು ಪ್ರತಿ ಫಲಾನುಭವಿಗಳ ದತ್ತಾಂಶವನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಅನುಮೋದಿಸಬೇಕಾಗಿರುತ್ತದೆ.
ತಂತ್ರಾಂಶದಲ್ಲಿ ಫಲಾನುಭವಿಗಳ ಬಟವಾಡೆ ಅಧಿಕಾರಿಗಳಿಂದ ಅನುಮೋದನೆಯ ನಂತರ ಚಿಕಿತ್ಸೆ ಪಡೆಯಲು ಅರ್ಹತೆ ಹೊಂದುತ್ತಾರೆ. ಅದರಂತೆ ಇದುವರೆಗೂ ಒಟ್ಟು 39,264 ಸದಸ್ಯರ ಅರ್ಜಿಗಳನ್ನು ಸಲ್ಲಿಸಲಾಗಿದೆ. 11,194 ಸದಸ್ಯರ ಅರ್ಜಿಗಳು ಬಟವಾಡೆ ಅಧಿಕಾರಿಗಳಿಂದ ಅನುಮೋದನೆಯಾಗಿದೆ.
ಉಳಿದಂತೆ ಯೋಜನೆಗೆ ಒಳಪಡುವ ಎಲ್ಲಾ ಸರಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬ ಸದಸ್ಯರು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹೆಚ್.ಆರ್.ಎಂ.ಎಸ್.) ತಂತ್ರಾಂಶದಲ್ಲಿ ಮಾಹಿತಿಯನ್ನು ಇಂಧೀಕರಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.