ಜಿಲ್ಲೆಯ ಅರ್ಹ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸರ್ಕಾರವು ಜುಲೈ-2023 ಮಾಹೆಯಿಂದ ಪಡಿತರ ಜೊತೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ ಅಕ್ಕಿ ನೀಡುವ ಪ್ರಮುಖ ಯೋಜನೆಯಾಗಿದ್ದು, ಬ್ಯಾಂಕ್ ಖಾತೆಗೆ ಆಧಾರ, ಮೊಬೈಲ್ ಸಂಖ್ಯೆ ಜೋಡಣೆ (e-KYC) ಮಾಡಿಸಬೇಕು. ಹಾಗೂ ಆ ಬ್ಯಾಂಕ್ ಖಾತೆ ಸಕ್ರೀಯ ಚಾಲನೆಯಲ್ಲಿರಬೇಕು 03 ತಿಂಗಳಲ್ಲಿ ಒಂದು ಸಲ ಆದರೂ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿ ಪಡಿತರ ಪಡೆದಿರತಕ್ಕದ್ದು, ಆಃಖಿ ಮೂಲಕ ಹಣ ವರ್ಗಾವಣೆಯಾದ ಬಗ್ಗೆ ಅವರ ಮೊಬೈಲ್‌ಗೆ ಸಂದೇಶರವಾನೆ ಆಗಲಿದೆ. ಹಾಗೂ ಇತರೆ ವಿವರಗಳಿಗೆ ಆಹಾರ ಇಲಾಖೆಯ ಯು.ಆರ್.ಎಲ್ ಗೆ https://ahara.kar.nic.in/status2/status_of_dbt.aspx ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯಲ್ಲಿನ ಎಲ್ಲ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈಗ ಬಿಹಾರದಲ್ಲಿರುವ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸಿ, ಉತ್ತರ ಪ್ರದೇಶ, ಉತ್ತರಾಖಂಡನಲ್ಲಿ ಶಿಥಿಲಗೊಳ್ಳುವ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಬಿಸಿಲು ಮತ್ತು ಆಗಾಗ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಭಾರತದ ವಾಯುಭಾರ ಕುಸಿತವು ಶಿಥಿಲಗೊಳ್ಳುವ ತನಕ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ತುಮಕೂರು, ಬೆಂಗಳೂರು,
ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
ಈಗಿನಂತೆ ಉತ್ತರ ಭಾರತದ ವಾಯುಭಾರ ಕುಸಿತವು ಶಿಥಿಲಗೊಳ್ಳುವ ತನಕ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
5 ರೂ. ಹಾಲಿನ ದರ ಏರಿಕೆಗೆ ಸಿಎಂಗೆ ಮನವಿ
ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ತಿಳಿಸಿದರು.
ರಾಜ್ಯದಲ್ಲಿ 5 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದರೆ ಅದರ ಲಾಭ ನೇರವಾಗಿ ರೈತರಿಗೆ ಸಿಗುತ್ತದೆ. ಯಾವುದೇ ಕಾರಣ- ಕ್ಕೂ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ 1 ರೂಪಾಯಿ ಕೂಡಾ ಲಾಭ ಆಗುವುದಿಲ್ಲ. ಏಕೆಂದರೆ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಿದರೆ ಅಷ್ಟು ಮೊತ್ತವನ್ನು ರೈತರಿಂದ ಸಂಗ್ರಹಿಸುವ ಹಾಲಿಗೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸುಮಾರು 10 ರೂಪಾಯಿ ಹಾಲಿನ ದರ ಕಡಿಮೆ ಇದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಇದನ್ನು ಮನಗಂಡು ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸದ್ಯ ನಮ್ಮ ರಾಜ್ಯದಲ್ಲಿ 31 ರೂಪಾಯಿಗೆ ರೈತರಿಂದ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ. ಗ್ರಾಹಕರಿಗೆ 42 ರೂಪಾಯಿಗೆ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. ಆದರೆ ಬೇರೆ ರಾಜ್ಯಗಳಲ್ಲಿ ಲೀಟರ್ ಹಾಲಿನ ಬೆಲೆ 56-58 ರೂಪಾಯಿ ಇದೆ. ಈ ಬಗ್ಗೆಯೂ ಗಮನ ಹರಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಲಾಗಿದೆ ಎಂದರು. ನಮ್ಮ ರಾಜ್ಯದಲ್ಲಿ ಕಡಿಮೆ ಬೆಲೆಗೆ ರೈತ- ರಿಂದ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಹಾಗೆಯೇ ಗ್ರಾಹಕರಿಗೆ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡುತ್ತಿರುವ ರಾಜ್ಯ ನಮ್ಮದಾಗಿದೆ. ಇಷ್ಟೊಂದು ಕಡಿಮೆ ಬೆಲೆಗೆ ಹಾಲು ಸಂಗ್ರಹಣೆ ಮತ್ತು ಮಾರಾಟ ಮಾಡುತ್ತಿರುವ ರಾಜ್ಯ ಇನ್ನೊಂದಿಲ್ಲ ಎಂಬ ಬಗ್ಗೆಯೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದರು.
ಹಾಲಿನ ದರ ಏರಿಕೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳು ಮೊದಲು ನಿರಾಕ- ರಿಸಿದರೂ ನಂತರ ಇದರಿಂದ ರೈತ- ರಿಗೆ ಲಾಭವಾಗುತ್ತದೆ ಎಂಬ ಅಂಶವನ್ನು ಗಮನಕ್ಕೆ ತಂದಾಗ ಪರಿಶೀಲಿಸುವುದಾಗಿ ತಿಳಿಸಿದರು ಎಂದರು. ಹಾಲಿನ ದರ ಹೆಚ್ಚಳದಿಂದ ಗ್ರಾಹಕರಿಗೆ ಹೊಡೆತ ಬೀಳುತ್ತದೆ ನಿಜ. ಆದರೆ ಇದ- ರಿಂದ ರೈತರಿಗೆ ಅನುಕೂಲವಾಗುತ್ತದೆ. ಹಾಗಾಗಿ ಬೇರೆ ರಾಜ್ಯಗಳಂತೆ ನಮ್ಮ ರಾಜ್ಯದಲ್ಲೂ ಹಾಲಿನ ದರ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದರಿಂದ ದ ರಾಜ್ಯ ಸರ್ಕಾರಕ್ಕೆ ಯಾವುದೇ ಲಾಭ ಆಗುವುದಿಲ್ಲ. ಬದಲಾಗಿ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂಬುದಷ್ಟೇ ನಮ್ಮ ಉದ್ದೇಶ ಎಂದು ಅವರು ಹೇಳಿದರು.
ಹಾಲಿನ ದರ ಹೆಚ್ಚಳ ಮಾಡಿದರೆ ಕೇಂದ್ರ ಸರ್ಕಾರಕ್ಕೆ ಲಾಭವಾಗುತ್ತದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ. ಹಾಲು ಉತ್ಪಾದಕರ ಸಂಘಗಳು ತೆರಿಗೆ ಕಟ್ಟುವುದರಿಂದ ಇದರ ಲಾಭ ಕೇಂದ್ರಕ್ಕಲ್ಲದೆ ಇನ್ಯಾರಿಗೆ ಎಂದು ಅವರು ಪ್ರಶ್ನಿಸಿದರು.
ಹಳ್ಳಿಗಳಲ್ಲಿ ಹಣ ವಹಿವಾಟು ಹೆಚ್ಚಳವಾದರೆ ಮಾತ್ರ ದೇಶದ ಜಿಡಿಪಿ ಹೆಚ್ಚಳವಾಗಲು ಸಾಧ್ಯ. ಹಾಗಾಗಿ ರೈತರ ಆರ್ಥಿಕ ಮಟ್ಟ ಸುಧಾರಣೆ, ಹಣ ವಹಿವಾಟು ಹೆಚ್ಚಳಕ್ಕೆ ಒತ್ತು ನೀಡಬೇಕಾಗಿದೆ ಎಂದರು. ಹಾಲಿನ ದರ ಏರಿಕೆ ಸಂಬಂಧ ಬೆಂಗಳೂ ರಿನಲ್ಲಿ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸದಸ್ಯ ಕಾಂತರಾಜು, ವೀರೇಶಗೌಡ ಮತ್ತಿತರರು ಉಪಸ್ಥಿತರಿದ್ದರು.
ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಕೆ- ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಹಾಗಂತ ರಾಜ- ಕೀಯ ನಿವೃತ್ತಿಯನ್ನು ಪಡೆಯುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟವಾಗಿ ಹೇಳಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲದಿದ್ದರೂ ಗೆಲ್ಲುವವರನ್ನು ಗೆಲ್ಲಿಸುತ್ತೇನೆ. ಸೋಲುವವರನ್ನು ಸೋಲಿಸುತ್ತೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಟಾಂಗ್ ನೀಡಿದರು. ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರ್ಥವಲ್ಲ.
ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ಅವರು ಹೇಳಿದರು. ಮಧುಗಿರಿ ಜಿಲ್ಲಾ ಕೇಂದ್ರ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸೂಕ್ತ ಸಮಯದಲ್ಲಿ ಜಿಲ್ಲಾ ಕೇಂದ್ರವಾಗಲಿದೆ ಎಂದು ಅವರು ತಿಳಿಸಿದರು. ಮಧುಗಿರಿ ಜಿಲ್ಲಾ ಕೇಂದ್ರವಾಗಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಹಾಗೆಯೇ ಜಿಲ್ಲಾ ಮಟ್ಟದ ಕಚೇರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲವೂ ಲಭ್ಯ ಇರಬೇಕಾಗಿದೆ ಹಾಗಾಗಿ ಸರಿಯಾದ ಸಮಯದಲ್ಲಿ
ಮಧುಗಿರಿ ಜಿಲ್ಲಾಕೇಂದ್ರವಾಗಲಿದೆ ಎಂದರು. ಐತಿಹಾಸಿಕ ಪ್ರಸಿದ್ದ ಏಕಶಿಲಾಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಕೆಯಾಗಲಿದೆ ಎಂದರು. ರಾಯದುರ್ಗ-ದಾವಣಗೆರೆ ರೈಲು ಮಾರ್ಗ ಹಾಗೂ ಎತ್ತಿನ ಹೊಳೆ ಯೋಜನೆ ಇನ್ನೊಂದು ವರ್ಷದಲ್ಲಿ ಸಂಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದರು.
ಹೈಕಮಾಂಡ್ ನಿರ್ಧಾರ ಅಂತಿಮ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಹೈಕಮಾಂಡ್ ಶಕ್ತಿಯುತವಾಗಿದೆ. ಹಾಗಾಗಿ ನಮ್ಮ ಪಕ್ಷದಲ್ಲಿ ಯಾವುದೇ ವಿಚಾರ ಬಂದರೂ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಂ ಹುದ್ದೆ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು.