‘ಗೃಹಲಕ್ಷ್ಮಿ’ಯ ಹೊರೆ ಹೆಚ್ಚಾಗದಿರಲಿ ಎಂಬ ಉದ್ದೇಶದಿಂದ ಬಡವರಿಗೆ ‘ಅನ್ನಭಾಗ್ಯ’ದಡಿ ಬಿಪಿಎಲ್ ಪಡಿತರ ಮಗಳನ್ನು ವಿತರಿಸುವಲ್ಲಿ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಗಾಗಿ ಆದ್ಯತೆ ಮೇರೆಗೆ ಪಡಿತರ ಕಾರ್ಡ್ಗಳನ್ನು ವಿತರಿಸಬೇಕಾದದ್ದು ಸರಕಾರದ ಆದ್ಯ ಕರ್ತವ್ಯ. ಆದರೆ, ಸುಮಾರು ಎರಡು ವರ್ಷಗಳಿಂದ ಅರ್ಜಿಗಳನ್ನು ಆಹ್ವಾನಿ ಸದೆ ಬಡವರ ‘ಅನ್ನಭಾಗ್ಯ’ದ ಆಶಯಕ್ಕೆ ಧಕ್ಕೆ ತರಲಾಗಿದೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಎರಡೂವರೆ ಲಕ್ಷ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ಸುಮಾರು 4-5 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಂದ ಹೊಸದಾಗಿ ಬೇಡಿಕೆಯೂ ಬಂದಿದೆ. ಆದರೆ, ಸರಕಾರ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.
ಹೊಸದಾಗಿ ಕಾರ್ಡ್‌ಗಳನ್ನು ವಿತರಿಸಿದರೆ ಪಡಿತರ ವಿತರಿಸುವುದು ಸಮಸ್ಯೆಯಲ್ಲ. ಆದರೆ, ಹಾಗೆ ಕಾರ್ಡ್ ಪಡೆದವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಹಣವನ್ನೂ ನೀಡಬೇಕಾಗುತ್ತದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ఎంబ ಉದ್ದೇಶದಿಂದ ವಿನಾಕಾರಣ ಅರ್ಜಿಗಳನ್ನು ಕರೆಯದೆ ಸರಕಾರ ಕುಂಟು ನೆಪಗಳನ್ನು ಹುಡುಕುತ್ತಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರು ವವರು ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯ. ಆದರೆ, ಸರಕಾರ ಈಗಾಗಲೇ ಗುರಿ ಮೀರಿ ಕಾರ್ಡ್ಗಗಳನ್ನು ವಿತರಿಸಿದೆ.
ಈಗ ವಿತರಿಸಲು ಮುಂದಾದರೆ ಮತ್ತೆ ಲಕ್ಷಾಂತರ ಕಾರ್ಡ್‌ಗಳು ಹೆಚ್ಚಾಗುತ್ತವೆ ಎಂಬುದು ಸರಕಾರದ ಲೆಕ್ಕಾಚಾರವಾಗಿದೆ. 2013ರ ಜನಸಂಖ್ಯೆ ಆಧಾರದ ಮೇಲೆ ರಾಜ್ಯದಲ್ಲಿ 1.15 ಕೋಟಿ ಪಡಿತರ ಚೀಟಿಗಳ ವಿತರಣೆಗೆ ಕೇಂದ್ರ ಗುರಿ ನಿಗದಿಪಡಿಸಿತ್ತು. ಆದರೆ, ಇದೀಗ ರಾಜ್ಯದಲ್ಲಿ 1.48 ಕೋಟಿಕಾರ್ಡ್‌ಗಳನ್ನು ವಿತರಿಸಲಾಗಿದೆ ಎನ್ನುತ್ತಿದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
https://chat.whatsapp.com/Gm6a0DqjrOGLAWzSIe62LU
ಆರೋಗ್ಯ ಸೇವೆಗೆ ಏನ್ಮಾಡೋದು ?
ಗಂಭೀರ ಕಾಯಿಲೆಗಳಿಂದ ಬಳಲುತ್ತಿರು ವವರು ಆಧಾರ್ ಕಾರ್ಡ್, ಆದಾಯ ದೃಢೀಕರಣ ಪತ್ರ, ಮನೆ ಬಾಡಿಗೆ ದಾಖಲೆ ಜತೆಗೆ ಕಡ್ಡಾಯವಾಗಿ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿಸಿದ ಪ್ರಮಾಣಪತ್ರ ತರಬೇಕು. ಹೊಸ ಕಾರ್ಡ್ ಅಗತ್ಯ ಇರುವ ಬಗ್ಗೆ ಸ್ಥಳೀಯ ಫುಡ್ ಇನ್ ಸೆಕ್ಟರ್ ಅವರನ್ನು ಭೇಟಿ ಮಾಡಿ ಗಮನಕ್ಕೆ ತರಬೇಕು. ಅವರು ಎಲ್ಲಾ ದಾಖಲೆ ಗಳನ್ನು ಪರಿಶೀಲಿಸಿ ಆಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸುತ್ತಾರೆ. ನಂತರ, ಆರೋಗ್ಯ ಉದ್ದೇಶಕ್ಕೋ ಅಥವಾ ಇನ್ಯಾವು ದಕ್ಕೂ ಎಂಬುದರ ಬಗ್ಗೆ ಪರಿಶೀಲಿಸಲು ರೋಗಿ ಮನೆಗೆ ಭೇಟಿ ನೀಡುತ್ತಾರೆ. ಆರೋಗ್ಯ ಸಮಸ್ಯೆಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಖಾತ್ರಿ ಮಾಡಿಕೊಂಡ ಬಳಿಕ ಫುಡ್ ಇನ್‌ಸ್ಪೆಕ್ಟರ್, ಅರ್ಜಿ ಅನುಮೋದನೆಗೆ ಉಪನಿರ್ದೇಶಕರಿಗೆ ಕಳುಹಿಸುತ್ತಾರೆ. ಅಂತಿಮವಾಗಿ ಉಪನಿರ್ದೇ ಶಕರು ಆಯುಕ್ತಾಲಯಕ್ಕೆ ಕಳುಹಿಸಿ ಅನುಮತಿ ಪಡೆಯುತ್ತಾರೆ. ಅಷ್ಟರಲ್ಲಿ ರೋಗಿಗಳ ಕುಟುಂಬದವರ ಸ್ಥಿತಿ ಬಲ್ಲವರೇ ಬಲ್ಲ.
ಮೂರು ವರ್ಷಗಳ ಹಿಂದೆ ಬರೋಬ್ಬರಿ 2,95,986 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಕೇವಲ 58,561 ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದ್ದು, ಲಕ್ಷಾಂತರ ಅರ್ಜಿಗಳು ಬಾಕಿ ಉಳಿದಿವೆ. ಈಗಾಗಲೇ ಅರ್ಜಿ ಸಲ್ಲಿಸುವವರು ತಮಗೆ ಕಾರ್ಡ್ ಸಿಗಬಹುದಾ ಎಂಬ ನಿರೀಕ್ಷೆಯಲ್ಲಿದ್ದರೆ, ಹೊಸದಾಗಿ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಸಾಕಷ್ಟು ಮಂದಿ ಕಾಯುತ್ತಿದ್ದಾರೆ. 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಇದರಿಂದಾಗಿ ಹೊಸ ಪಡಿತರ ಚೀಟಿ ನೀಡುವುದು, ಕಾರ್ಡ್‌ಗಳನ್ನು ವಿಭಾಗ ಮಾಡಿ ನೋಂದಾಯಿಸಿಕೊಳ್ಳುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ನಂತರ ಅದನ್ನು ಮುಂದುವರಿಸಲಿಲ್ಲ.
ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸ ಗೊಬ್ಬರ ವಿತರಿಸಿ
ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಬೇಕು. ಸರಕಾರದಿಂದ ಕೃಷಿ ಸಂಬಂಧಿತ ಎಲ್ಲ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪೂಟ್ ಐಡಿ ಹೊಂದುವುದು ಕಡ್ಡಾಯವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ಮತ್ತು ಪೂಟ್ ಐಡಿ ಹೊಂದಲು ಜಿಲ್ಲೆಯಾದ್ಯಂತ ಅಭಿಯಾನ ಹಮ್ಮಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವರು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು. ಮುಂಗಾರು ಪೂರ್ವಕಾಲದಲ್ಲಿ ಮಳೆ ಚೆನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು ಮುಂಗಾರು ಆರಂಭಕ್ಕೂ ಮೊದಲೇ ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಆಗತ್ಯ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯ 14 ರೈತ ಸಂಪರ್ಕ ಕೇಂದ್ರಗಳ ಜೊತೆಗೆ ಹೆಚ್ಚುವರಿ ಕೇಂದ್ರಗಳನ್ನು ತೆರೆದು ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಪ್ರತಿ ರೈತರ ಆರ್.ಟಿ.ಸಿ ಗೆ ಆಧಾರ್ ಜೋಡಣೆ ಕಾರ್ಯ ನಡೆದಿದೆ. ಇದರೊಂದಿಗೆ ರೈತರು ಪೂಟ್ ಐಡಿ ಹೊಂದುವಂತೆ ತಿಳುವಳಿಕೆ ನೀಡಿ. ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಬರ ಪರಿಹಾರ ಬಿಡುಗಡೆ ಪ್ರಗತಿಯಲ್ಲಿದ್ದು, ಪಾಳು ಭೂಮಿ ಅಥವಾ ಇತರ ಕಾರಣಗಳಿಂದ ಬರ ಪರಿಹಾರ ಬಿಡುಗಡೆ ಆಗದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಮಾಹಿತಿಯೊಂದಿಗೆ ಪ್ರಸ್ತಾವನೆ ಪಡೆದು, ಸರಕಾರಕ್ಕೆ ವಿವರವಾದ ವರದಿ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಬೀಜ, ಗೊಬ್ಬರದ ಕೊರತೆ ಇಲ್ಲ. ನಮ್ಮಲ್ಲಿ ಅಗತ್ಯಕ್ಕಿಂತ ಹೆಚ್ಚು ದಾಸ್ತಾನು ಇದೆ. ಕೃಷಿ ಉತ್ಪಾದನೆಗಳ ಖಾಸಗಿ ಮಾರಾಟಗಾರರಿಗೆ ಸಭೆ ಜರುಗಿಸಿ. ರೈತರಿಗೆ ತೊಂದರೆ ಆಗದಂತೆ ಬೀಜ, ಗೊಬ್ಬರ ವಿತರಿಸಲು ಸೂಚಿಸಲಾಗಿದೆ. ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿಯಾಗದಂತೆ, ರೈತರಿಗೆ ಎಂ.ಆರ್.ಪಿ ದರ ಬಿಟ್ಟು ಹೆಚ್ಚಿನ ದರಕ್ಕೆ ರಸಗೊಬ್ಬರ, ಬೀಜ ಮಾರಾಟ.
ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ವೇದಿಕೆಯಲ್ಲಿದ್ದರು. ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ಉಪನಿರ್ದೇಶಕರಾದ ಜಯಶ್ರೀ ಹಿರೇಮಠ, ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ. ಭದ್ರಣ್ಣವರ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್.. ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶೀಲ್ದಾರರಾದ ಡಾ.ಡಿ.ಎಚ್.ಹೂಗಾರ, ಪ್ರಕಾಶ ನಾಶಿ, ಮಲ್ಲಿಕಾರ್ಜುನ ಹೆಗ್ಗನ್ನವರ ಸೇರಿದಂತೆ ಭೂದಾಖಲೆಗಳ ಇಲಾಖೆ, ನಗರ ಯೋಜನಾ ಇಲಾಖೆ, ಪುರಸಭೆಗಳ ಮುಖ್ಯಾಧಿಕಾರಿಗಳು, ಇತರರು ಭಾಗವಹಿಸಿದ್ದರು.
ಮಹಿಳೆಯರಿಗೆ ಚಾಲನಾ ಪರವಾನಿಗೆ ವಿತರಣೆ ಕಾರ್ಯಕ್ರಮ, ಸ್ವಾವಲಂಭಿ ಬದುಕು ಸಾಗಿಸಲು ಮಹಿಳೆಯರಿಗೆ ಚಾಲನಾ ತರಬೇತಿ
ಸಮಾಜದಲ್ಲಿ ಮಹಿಳೆ ಸ್ವಾವಲಂಭಿ ಬದುಕು ಸಾಗಿಸಲು ವಾಹನ ಚಾಲನಾ ತರಬೇತಿ ನೀಡಿ ಲೈಸನ್ಸ್ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು. ವಿದ್ಯಾಗಿರಿಯ ಬಿವಿವ ಸಂಘದ ಕೋಟೆಕ್ ಮಹಿಂದ್ರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯ ಸಭಾಭವನದಲ್ಲಿ ಹಮ್ಮಿಕೊಂಡ 24 ಮಹಿಳಾ ವಾಹನ ಚಾಲಕರಿಗೆ ತರಬೇತಿ ಪ್ರಮಾಣ ಪತ್ರ ಹಾಗೂ ಡ್ರೈವಿಂಗ್ ಲೈಸನ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ಅದರಂತೆ ಮಹಿಳೆಯರು ವಾಹನ ಚಾಲನೆ ಮಾಡಲು ಮುಂದೆ ಬಂದು ಸ್ವಾವಲಂಭಿಗಳಾಗುತ್ತಿದ್ದಾರೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ಮನೆ ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಸಂಗ್ರಹಣೆ ಹೊತೆಗೆ ಸ್ವಚ್ಛ ವಾಹಿನಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವುದು ತುಂಬಾ ಮಹತ್ವದ್ದಾಗಿದೆ. ಎನ್. ಆರ್.ಎಲ್.ಎಂ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯ 195 ಗ್ರಾಮ ಪಂಚಾಯತಿಗಳ ಪೈಕಿ 177 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರಿಗೆ ವಾಹನಾ ಚಾಲನಾ ತರಬೇತಿ ಹಾಗೂ ಡ್ರೈವಿಂಗ್ ಲೈಸನ್ಸ್ ನೀಡಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ಕೋಟೆಕ್ ಮಹಿಂದ್ರಾ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಿ.ಎಸ್.ಅಂಗಡಿ ಮಾತನಾಡಿ ನಮ್ಮ ಕೇಂದ್ರದಲ್ಲಿ ಉತ್ತಮ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆದುಕೊಂಡ ಮಹಿಳೆಯರು ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಕಾರ್ಯಕ್ರಮದಲ್ಲಿ ಆರ್‌ಸೆಟ್ ಸಂಸ್ಥೆಯ ನಿರ್ದೇಶಕ ಶರಣಬಸವ ಹೊನ್ನೂರ, ಎನ್. ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಗೋಪಾಲ ಸೇರಿದಂತೆ ಇತರರು ಉಪಸ್ಥಿತರಿದ್ದರು.