Breaking
Tue. Dec 17th, 2024
Spread the love

06.04.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ  ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. 8 ರಿಂದ ಸ್ವಲ್ಪ ಜಾಸ್ತಿಯಾದರೂ, ಎಪ್ರಿಲ್ 9ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 12ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ‘ಶಾಖದ ಅಲೆ’ (Heatwave) ಎಚ್ಚರಿಕೆ!!!

ಮುಂದಿನ 3-4 ದಿನಗಳಲ್ಲಿ ಧಾರವಾಡ, ಹಾವೇರಿ, ಪಶ್ಚಿಮ ಬೆಳಗಾವಿ & ಉತ್ತರ ಕನ್ನಡ ಜಿಲ್ಲೆಗಳಲ್ಲಿ ದಿನದ ಗರಿಷ್ಠ ತಾಪಮಾನವು ಸುಮಾರು 39 ತಲುಪುತ್ತದೆ. ಉಳಿದ ಸ್ಥಳಗಳಲ್ಲಿ 41 ಡಿಗ್ರಿ ಇರುತ್ತದೆ. ಬೀದ‌ರ್ ಹೊರತುಪಡಿಸಿ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪಾದರಸವು 42 ಡಿಗ್ರಿ ತಲುಪಬಹುದು, ಆದರೆ ರಾಯಚೂರು, ಯಾದಗಿರಿ, ಬಾಗಲಕೋಟೆ, ಗದಗ, ಬಳ್ಳಾರಿ & ಕೊಪ್ಪಳ ಜಿಲ್ಲೆಗಳ ಹಲವೆಡೆ ಗರಿಷ್ಠ ತಾಪಮಾನ 43 ಡಿಗ್ರಿ ತಲುಪುವ ಸಾಧ್ಯತೆಯಿದೆ. ಮುಂದಿನ 3-4 ದಿನಗಳಲ್ಲಿ ಯಾವುದೇ ಮಳೆಯ ಚಟುವಟಿಕೆಯಿಲ್ಲದೆ ಈ ಅತಿಯಾದ ಬಿಸಿ & ಒಣ ಹವಾಮಾನವು “ಶಾಖದ ಅಲೆ”ಗೆ ಕಾರಣವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಾಮಾನ್ಯ ಸಲಹೆಗಳು:

ಮಧ್ಯಾಹ್ನದ (12 ರಿಂದ 4 ಗಂಟೆ) ಬಿಸಿಲಿನಿಂದ ದೂರವಿರಿ. ಸಾಕಷ್ಟು ನೀರು ಕುಡಿಯಿರಿ. ತೆಂಗಿನ ನೀರು, ಹಣ್ಣು / ನಿಂಬೆ ರಸ, ಮಜ್ಜಿಗೆ ಮುಂತಾದ ಇತರ ಪಾನೀಯಗಳನ್ನು ಹೆಚ್ಚಿಗೆ ಸೇವಿಸಿ. ಘನ ಮತ್ತು ಒಣ ಆಹಾರ ಪದಾರ್ಥಗಳ ಸೇವನೆ ಕಡಿಮೆ ಮಾಡಿ. ಮಧ್ಯಾಹ್ನದ ಸಮಯದಲ್ಲಿ ಛತ್ರಿ / ಟೋಪಿ ಮತ್ತು ನೀರಿನ ಬಾಟಲಿ ಇಲ್ಲದೆ ಹೊರಗೆ ಹೋಗಬೇಡಿ. ಬಿಸಿಲಿನ ಸಮಯದಲ್ಲಿ ಮಕ್ಕಳು ಹೊರಗೆ ಆಟವಾಡಲು ಮತ್ತು ವಯಸ್ಸಾದವರನ್ನು ಹೊರಗೆ ಹೋಗಲು ಬಿಡಬೇಡಿ.

ಕೃಷಿ ಸಲಹೆಗಳು:

ಹಣ್ಣಿನ ಮರಗಳನ್ನು ರಕ್ಷಿಸಲು ನಿಯಮಿತವಾಗಿ ನೀರು ಕೊಡುವದು ಅವಶ್ಯಕ. ನೀರು ಲಭ್ಯವಿಲ್ಲದಿದ್ದರೆ, ಕನಿಷ್ಠ ನೀರಿನ ಟ್ಯಾಂಕರ್‌ಗಳ ಮೂಲಕ ವ್ಯವಸ್ಥೆ ಮಾಡಿ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಪ್ರಾಣಿಗಳನ್ನು ಹೊರಗೆ ಬಿಡಬೇಡಿ. ದಿನಕ್ಕೆ ಕನಿಷ್ಠ ಮೂರು ಬಾರಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಹಾಲುಕರೆಯುವ ಪ್ರಾಣಿಗಳಿಗೆ, ಅವುಗಳನ್ನು ತಂಪಾಗಿರಿಸಲು ಮಧ್ಯಾಹ್ನದ ಸಮಯದಲ್ಲಿ ಮೈ ತೊಳೆಯಿರಿ.

05.04.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಎಪ್ರಿಲ್ 6 ರಿಂದ ಕೊಡಗಿನಲ್ಲಿ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ 7, 8ರಿಂದ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ ಎಪ್ರಿಲ್ 8, 9ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾದರೆ, ಎಪ್ರಿಲ್ 12,13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಲಕ್ಷಣಗಳಿವೆ.

04.04.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಾಮಾನ್ಯ ಮೋಡ ಇರಬಹುದು. ಈಗಿನಂತೆ ಎಪ್ರಿಲ್ 6ರಿಂದ ಕೊಡಗು ಹಾಗೂ ಎಪ್ರಿಲ್ 7ರಿಂದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

03.04.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 7ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.* ಆರಂಭದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

02.04.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 6ರಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಅಲ್ಲಲ್ಲಿ ಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

31.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಮಂಗಳೂರು ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 6ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ಉತ್ತರ ಹಾಗೂ ದಕ್ಷಿಣ ನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

Related Post

Leave a Reply

Your email address will not be published. Required fields are marked *