ಮೊದಲು ನಾವು ಕೆಳಗಿನ ಮೇಲೆ ಕ್ಲಿಕ್ ಮಾಡಿ.
https://www.samrakshane.karnataka.gov.in/
ಆಮೇಲೆ ಅಲ್ಲಿ ನಿಮಗೆ ಬೇಕಾದ ವರ್ಷವನ್ನು ಮತ್ತು ಬೆಳೆಯ ಋತುವನ್ನು ಆಯ್ಕೆ ಮಾಡಿಕೊಳ್ಳಿ.
ಚಿತ್ರದಲ್ಲಿ ಕಾಣುವ ಹಾಗೆ ಚೆಕ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆಮೇಲೆ ನಿಮ್ಮ ಪ್ರೊಪೋಸಲ್ ನಂಬರ್ ಅಥವಾ ಮೊಬೈಲ್ ಸಂಖ್ಯೆಯನ್ನು ಅಥವಾ ಆಧಾರ್ ಸಂಖ್ಯೆಯನ್ನು ಅಲ್ಲಿ ಹಾಕಿ ಸರ್ಚ್ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಮುಂದೆ ನಿಮ್ಮ ಸರ್ವೇ ನಂಬರ್ ಗಳು ಕಾಣುತ್ತವೆ ನಿಮಗೆ ಬೇಕಾದ ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಿ.
ಹೆಸರುಕಾಳು ದರ 4,000ಕ್ಕೆ ಕುಸಿತ, ಚಿಂತೆಗೀಡಾದ ಜಿಲ್ಲೆಯ ಅನ್ನದಾತ
ಜಿಲ್ಲೆಯಲ್ಲಿ ಈ ಬಾರಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ಶೇ 80ರಷ್ಟು ರೈತರು ಈಗಾಗಲೇ ರಾಶಿ ಮಾಡಿದ್ದಾರೆ. ಲಕ್ಷಾಂತರ ಕ್ವಿಂಟಲ್ ಹೆಸರುಕಾಳು ಸಿದ್ದಗೊಂಡಿದೆ. ಆದರೆ. ದರ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಜಿಲ್ಲಾಡಳಿತ ಯಾವಾಗ ಖರೀದಿ ಕೇಂದ್ರ ತೆರೆಯುವುದೋ ಎಂದು ರೈತರು ಕಾದು ಕುಳಿತಿದ್ದಾರೆ. ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ತುಂಬ ಹದವಾಗಿ ಬಿದ್ದಿದೆ. ಪರಿಣಾಮ ಪ್ರತಿ ವರ್ಷಕ್ಕಿಂತ ಈಗ ಹೆಸರು ಬೆಳೆ ಅತ್ಯಂತ ಫಲಪ್ರದವಾಗಿದೆ. ಕಳೆದ ವರ್ಷ ಭೀಕರ ಬರಗಾಲ ಎದುರಿಸಬೇಕಾಯಿತು. ಹೆಸರು ಬೆಳೆದ ಸಾವಿರಾರು ರೈತರು ಈಗಲಾದರೂ ಕಷ್ಟ ದೂರವಾಯಿತು ಎಂಬ ಖುಷಿಯಲ್ಲಿದ್ದಾರೆ. ಆದರೆ, ನಿರಂತರ ಕುಸಿತ ಕಂಡ ದರ ಅವರನ್ನು ಕಂಗಾಲು ಮಾಡಿದೆ. ಮಾರುಕಟ್ಟೆಯಲ್ಲಿ ಹೆಸರು ಪ್ರತಿ ಕ್ವಿಂಟಲ್‌ಗೆ ಕನಿಷ್ಠ 4,000ರಿಂದ ಗರಿಷ್ಠ 6,500 ದರವಿದೆ. ಚಿಲ್ಲರೆ ಮಾರಾಟದಲ್ಲಿ ಈ ದರ ಇನ್ನೂ ಕಡಿಮೆಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 8,580 ರಿಂದ 10 ಸಾವಿರ ಇತ್ತು. ಈಗ ಅರ್ಧದಷ್ಟು ಕುಸಿದಿದೆ’ ಎಂಬ ಕೂಗು ರೈತರದ್ದು.
ಈ ಬಾರಿ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ 8,682 ದರ ನಿಗದಿಪಡಿಸಿದೆ. ಆದರೆ, ಖರೀದಿ ಕೇಂದ್ರ ಇನ್ನೂ ತೆರೆದಿಲ್ಲ. ರಾಜ್ಯ ಸರ್ಕಾರದಿಂದ ಸೂಚನೆ ಬಂದಿಲ್ಲ, ಬೆಳಗಾವಿ ಜಿಲ್ಲೆಯಲ್ಲಿ ಕಬ್ಬಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಆದರೆ, ಇಲ್ಲಿಯೂ ಹೆಚ್ಚಿನ ಪ್ರಮಾಣದ ರೈತರು ಆರಂಭಿಕ ಬೆಳೆಯಾಗಿ ಹೆಸರು ಬಿತ್ತುತ್ತಾರೆ. ಜಿಲ್ಲಾಡಳಿತ ಇದನ್ನೂ ಗಮನಿಸಬೇಕು’ ಎಂಬುದು ಅವರು ಆಗ್ರಹ, ಪ್ರತಿ ಎಕರೆಗೆ 4ರಿಂದ 5 ಕ್ವಿಂಟಲ್ ಹೆಸರು ಇಳುವರಿ ಬರುತ್ತದೆ. ಎಕರೆ ಬಿತ್ತನೆಗೆ ಒಟ್ಟಾರೆ 20 ಸಾವಿರ ಖರ್ಚಾಗುತ್ತದೆ. ಸದ್ಯ ದಲ್ಲಾಳಿಗಳ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 4,000 ಮಾರಾಟವಾಗುತ್ತಿದೆ. ರೈತರು ಬಿತ್ತಲು- ಬೆಳೆಯಲು ಹಾಕಿದ ಹಣ ಕೂಡ ಮರಳಿ ಬರುತ್ತಿಲ್ಲ ಎನ್ನುತ್ತಾರೆ ಅವರು.
28.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಪೂರ್ವದ ಮೋಡದಿಂದ, ಗುಡುಗು ಸಾಧ್ಯತೆಯೂ ಇದೆ) ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಚಲನೆಯು ನಿಧಾನವಾಗುತ್ತಿದ್ದು, ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುತ್ತಿದ್ದಂತೆಯೇ ದುರ್ಬಲಗೊಳ್ಳವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿಭಾಗದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಲಕ್ಷಣಗಳಿವೆ.ಸೆಪ್ಟೆಂಬರ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ,ಉತ್ತರ ಭಾರತದ ಪರಿಸ್ಥಿತಿಯ ಮೇಲೆ ಅವಲಂಬಿಸಿದೆ.
27.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ಆಗಸ್ಟ್ ಕೊನೆಯ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಲೆನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆ ಮುಂದುವರಿಯಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಗುಜರಾತ್ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸುತ್ತಿದ್ದು ಆಗಸ್ಟ್ 29 ಅಥವಾ 30ರಂದು ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಗುಜರಾತ್ ನಾದ್ಯಂತ ಭಾರಿ ಮಳೆ ಮುಂದುವರಿಯಲಿದೆ.
ರಾಶಿಗೆ ಬಿಡುವು ಕೊಟ್ಟ ಮಳೆ ಕಳೆದೆರಡು ವಾರಗಳ ಹಿಂದೆ ನಿರಂತರವಾಗಿ ಸುರಿದ ಮಳೆಯಿಂದ
ಹೆಸರು ಬೆಳೆ ಕೂಡ ಸಂಕಷ್ಟಕ್ಕೆ ಸಿಲುಕಿತು. ಅಪಾರ ಪ್ರಮಾಣದ ಸಸಿಗಳು ಕೊಳೆತವು. ಆದರೆ 15 ದಿನಗಳಿಂದ ಮಳೆರಾಯ ಬಿಡುವು ನೀಡಿದ್ದಾನೆ. ಇದೇ ಸಮಯ ಬಳಸಿಕೊಂಡು ರೈತರು ರಾಶಿ ಶುರು ಮಾಡಿದ್ದಾರೆ. ಜಿಲ್ಲೆಯ ಸವದತ್ತಿ ಬೈಲಹೊಂಗಲ ಗೋಕಾಕ ಚನ್ನಮ್ಮನ ಕಿತ್ತೂರು ಯರಗಟ್ಟಿ ರಾಮದುರ್ಗ ತಾಲ್ಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬಿತ್ತಲಾಗಿದೆ. ಈ ತಾಲ್ಲೂಕಿನ ಡಾಂಬರು ರಸ್ತೆಗಳಲ್ಲಿ ರೈತರು ರಾಶಿ ಮಾಡುವುದು ಸಾಮಾನ್ಯವಾಗಿದೆ. ಚೀಲಗಳಲ್ಲಿ ತುಂಬಿ ಸಾಲಾಗಿ ಇಟ್ಟ ಫಸಲನ್ನು ಮಾರುಕಟ್ಟೆಗೆ ಕಳುಹಿಸುವ ಧೈರ್ಯ ಮಾತ್ರ ಬಂದಿಲ್ಲ.
ಗೃಹಲಕ್ಷ್ಮಿ ಯೋಜನೆ : ಮೊದಲು ಹಣ ಮನೆಗೆ ಬಳಕೆಯಾಗಲಿ
ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣದಲ್ಲಿ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿ ಉಡಿ ತುಂಬಿದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿಯ ವೃದ್ಧೆಯ ಕಾರ್ಯಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಯೋಜನೆಯು ಹಲವು ಕುಟುಂಬಗಳಿಗೆ ವರದಾನವಾಗಿದೆ’ ಎಂದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ವೃದ್ಧೆಯ ಫೋಟೊ ಹಂಚಿಕೊಂಡಿರುವ ಸಿಎಂ, ‘ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ’ ಎಂದಿದ್ದಾರೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ. ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು.
ಆದರೆ ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ. ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು. ಇದು ಇನ್ನಷ್ಟು ಬಡವರ ಹೊಟ್ಟೆ ತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವುದಿಲ್ಲ. ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ.
ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ’ ಎಂದಿದ್ದಾರೆ. ಹೀಗಿದ್ದರೂ ಅಕ್ಯಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ’ ಎಂದು ಸಿಎಂ ಮನವಿ ಮಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ : ಸಿ.ಎಂ.ಸಿದ್ದರಾಮಯ್ಯ
ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ. ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.
ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು. ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು. ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಇದು ಸಾಧ್ಯವಿದೆ ಎಂದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
2
6.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಾವಣಗೆರೆ ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದಿಂದ ಪಶ್ಚಿಮಕ್ಕೆ ಚಲಿಸುತ್ತಿದ್ದು, ಆಗಸ್ಟ್ 28ರಂದು ಉತ್ತರ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ ಕೊನೆಯ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತುಪಡಿಸಿ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.