ಆತ್ಮೀಯ ರೈತ ಬಾಂಧವರೇ,ಈಗಾಗಲೇ ಕರ್ನಾಟಕದಲ್ಲಿ ಮಾನ್ಸೂನ್ ಸೆಶನ್ ಎಂದರೆ ಮಳೆಗಾಲದ ಅಧಿವೇಶನ ಈಗಾಗಲೇ ಶುರುವಾಗಿದ್ದು ಹಲವಾರು ವಿಷಯಗಳು ಪ್ರಮುಖ ಚರ್ಚೆಯಲ್ಲಿದ್ದು ಒಂದಿಷ್ಟು ಬಿಲ್ ಗಳು ಪಾಸ್ ಆಗಿವೆ ಅಂತೆಯೇ ಸದನದಲ್ಲಿ ನಡೆದಿರುವ ಚರ್ಚೆಗಳಲ್ಲಿ ರೈತರ ಪರವಾಗಿ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಎಸ್. ರವಿ, ಬಿಜೆಪಿಯ ಸುನಿಲ್ ವಲ್ಯಾಪುರೆ ತಾಂತ್ರಿಕ ಕಾರಣಗಳಿಂದ 31,000 ರೈತರಿಗೆ ಸಾಲ ಮನ್ನಾ ಸೌಲಭ್ಯ ದೊರೆತಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ 167.51 ಕೋಟಿ ರೂಪಾಯಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರಿಗೆ 64.69 ಕೋಟಿ ರೂಪಾಯಿ ಸೇರಿ ಒಟ್ಟು 232 ಕೋಟಿ ರೂ. ಅನುದಾನ ಬಿಡುಗಡೆಗೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಲ್ಲರಿಗೂ ಪ್ರಯೋಜನ ಸಿಗಲಿದೆ ಎಂದು ಹೇಳಿದ್ದಾರೆ. ಅಂತೆ 31,000 ರೈತರಿಗೆ ಇನ್ನೂ ಹಣ ಜಮಾ ಆಗಿರಲಾರದ ಕಾರಣ ಈ ಕೆಳಗಡೆ ಪ್ರಕಟಗೊಂಡಿರುವ ಲಿಸ್ಟ್ ನಲ್ಲಿರುವ ಹೆಸರಿನ ರೈತರಿಗೆ ಮಾತ್ರ ಸಾಲ ಮನ್ನಾ ಆಗುವುದು ಎಂದು ತಿಳಿಸಿದ್ದಾರೆ.
ಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ನೀವು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಸಾಲ ಮನ್ನಾಗೆ ಅಗತ್ಯವಿರುವ ಅರ್ಹತೆ ಮತ್ತು ದಾಖಲೆಗಳನ್ನು ನೀವು ನೋಡಬಹುದು.
https://mahitikanaja.karnataka.gov.in/department
ನಂತರ ಅಲ್ಲಿ ಕಾಣಿಸುವ “ಕಂದಾಯ ಇಲಾಖೆ” ಮೇಲೆ ಕ್ಲಿಕ್ ಮಾಡಿ..
ನಂತರ ಕಂದಾಯ ಇಲಾಖೆ ಸೇವೆಗಳ ಮೇಲೆ ಕ್ಲಿಕ್ ಮಾಡಿ.
ನಂತರ clws ರೈತ ಅರ್ಹತೆಯ ಮೇಲೆ ಕ್ಲಿಕಕ್ ಮಾಡಿ.
ನಂತರ ಮುಂದಿನ ಪುಟದಲ್ಲಿ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ ಅನ್ನು ಆಯ್ಕೆ ಮಾಡಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
ನಂತರ ನೀವು ಕೆಳಗೆ ತಿಳಿಸಲಾದ ಸಾಲ ಮನ್ನಾ ಅರ್ಹತೆ ಮತ್ತು ದಾಖಲೆಗಳನ್ನು ನೋಡಬಹುದು. ಮತ್ತು ಅಲ್ಲಿ ಸಾಲ ಮನ್ನಾ ಸ್ಥಿತಿಯನ್ನು ಪರಿಶೀಲಿಸಿ.
ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪರಿಶೀಲಿಸಿ.
ಯಾರು ಸಾಲ ಮನ್ನಾ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿಕೊಳ್ಳಿ.
23.07.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ದಿನದಲ್ಲಿ ಅಲ್ಲಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು). ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ಹ
ಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಜುಲೈ 26ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇಲ್ಲ. ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗತ್ತಲಿದ್ದು, ಆ ಭಾಗದಿಂದ ಹರಿದು ಬರುತ್ತಿರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.
22.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಆದರೆ ಘಟ್ಟದ ಕೆಳಗಿನ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. ಮಧ್ಯಾಹ್ನ ನಂತರ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮತ್ತು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಜಾಸ್ತಿ ಇರಬಹುದು.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 23ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.