ಇಂದು ವಿಧಾನಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಿದರು. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ.
ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ. ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ ಎಂದ ಮುಖ್ಯಮಂತ್ರಿಗಳು ಆಗದು ಎಂದು, ಕೈಲಾಗದು ಎಂದು.
ಕೈಕಟ್ಟಿ ಕುಳಿತರೆ, ಸಾಗದು ಕೆಲಸವು ಮುಂದೆ, ಮನಸೊಂದಿದ್ದರೆ ಮಾರ್ಗವು ಉಂಟು, ಕೆಚ್ಚೆದೆ ಇರಬೇಕೆಂದು, ಎಂದು ವರನಟ ಡಾ.ರಾಜ್ ಕುಮಾರ್ ಅಭಿನಯದ ಹಾಗೂ ಆರ್.ಎನ್. ಜಯಗೋಪಾಲ್ ರಚಿಸಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡಿನಂತೆ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶ್ರೇಯ ನಮ್ಮದಾಗಿದೆ ಎಂದು ತಿಳಿಸಿದರು.
ನಮ್ಮ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ನಮ್ಮ ಯುಪಿಎ ಸರ್ಕಾರವು ಜನರ ಆಹಾರ, ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ವಾಸದ ಭದ್ರತೆಗಾಗಿ ವಿವಿಧ ಜನಕೇಂದ್ರಿತ ಯೋಜನೆಗಳು ಹಾಗೂ ಕಾನೂನುಗಳನ್ನು ರೂಪಿಸಿ ಬಡಜನರಿಗೆ ನ್ಯಾಯ ಒದಗಿಸುವ ಕಾರ್ಯಗಳನ್ನು ಕೈಗೊಂಡಿತ್ತು. ಆದರೆ, ಹಿಂದಿನ 10 ವರ್ಷಗಳ ಅವಧಿಯಲ್ಲಿನ ಕೇಂದ್ರ ಸರ್ಕಾರದ ಜನವಿರೋಧಿ ನಿಲುವುಗಳಿಂದಾಗಿ ಅಸಮಾನತೆ ಹೆಚ್ಚಳ, ಕೆಲವೇ ಜನರ ಬಳಿ ಸಂಪತ್ತಿನ ಶೇಖರಣೆ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಹೆಚ್ಚುತ್ತಿರುವ ಪ್ರಭಾವ ಮುಂತಾದ ಅನಪೇಕ್ಷಿತ ಬೆಳೆವಣಿಗೆಗಳಿಗೆ ಎಡೆ ಮಾಡಿದೆ ಎಂದರು.
ತನ್ನ ಹೊಣೆಗಾರಿಕೆಯಿಂದ ಮಾಡದ ಕೆಲಸವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ನಾವು ರೂಪಿಸಿದ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಜನಾಭಿಪ್ರಾಯದ ಫಲವಾಗಿದೆ. ಇದು ಉದ್ಯೋಗ ಸೃಜಿಸಿ, ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವ ಪ್ರಯತ್ನವಾಗಿದೆ. ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವ ಕಾರ್ಯಕ್ರಮಗಳು ಇವಾಗಿವೆ.ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಲ್ಲೂ ತಾಂಡವವಾಡಬೇಕು. ಮತ ಮತಗಳಲ್ಲಿ, ಸಾಹಿತ್ಯ ಸಾಹಿತ್ಯಗಳಲ್ಲಿ ಸಮಾಜ ಸಮಾಜಗಳಲ್ಲಿ ಅಷ್ಟೇ ಏಕೆ? ರಾಜಕೀಯ ಕ್ಷೇತ್ರದಲ್ಲಿ ಆರ್ಥಿಕ ಕ್ಷೇತ್ರದಲ್ಲಿ, ಸರ್ವತ್ರ ಅದು ವ್ಯಾಪಿಸಬೇಕು.
ಅತ್ಯಂತ ಕೀಳಾದವನಿಗೂ ಮೇಲಾಗುವ ಆವಕಾಶವಾಗಬೇಕು. ಇವೆರಡನ್ನೂ ಒಳಗೊಂಡ ಆಧ್ಯಾತ್ಮಿಕ ದೃಷ್ಟಿಯೇ ಪೂರ್ಣದೃಷ್ಟಿ ಎಂದು ತಿಳಿಸಿದರು. 2024-25 30,52,000 ಕೋಟಿಗಳನ್ನು ಐದು ಗ್ಯಾರಂಟಿಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಾಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ. ಸಮಯ ಕಳೆದಂತೆ ಇದರ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ.
ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಆಧ್ಯಯನಗಳಷ್ಟೇ ಕಾರಣವಲ್ಲ, ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಸರ್ಕಾರ್.
ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡೋನ್
ಆಸ್ತಿ ತೆರಿಗೆ ಮತ್ತು ಇನ್ನಿತರ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಮತ್ತು ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡೋನ್ ತಂತ್ರಜ್ಞಾನ ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ತೆರಿಗೆ ವಸೂಲಿಗೆ ಸ್ವಸಹಾಯ ಗುಂಪುಗಳ ಸೇವೆ ಪಡೆಯುವುದು, ನೇರಪಾವತಿ ಯೋಜನೆಯಡಿ ಖಾಯಂ ಮಾಡಿರುವ 24 ಸಾವಿರ ಪೌರ ಕಾರ್ಮಿಕರ ಜೊತೆಗೆ ಉಳಿದವರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಯೋಜಿತ ನಗರೀಕರಣದ ಉದ್ದೇಶದಿಂದ ಒಂದು ಲಕ್ಷಕ್ಕೂ ಅಕ ಜನಸಂಖ್ಯೆ ಇರುವ ಸ್ಥಳೀಯ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತಿಕರಿಸಲಾಗುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ಕಾರ್ಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.