27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಎಪ್ರಿಲ್ 28 ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಕೊಡಗು ಹಾಗೂ ಚಿಕ್ಕಮಗಳೂರಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇ 1ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ – ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ)
ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.
23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೆ ರಾಜ್ಯದಲ್ಲಿ ಅಧಿಕ ಉಷ್ಣತೆಯಿಂದಾಗಿ ಒಂದೆರಡು ಕಡೆ, ಸೀಮಿತ ಪರಿಧಿಯಲ್ಲಿ ಅನಿರೀಕ್ಷಿತ ಮಳೆ ಹೊರತುಪಡಿಸಿ ತೀವ್ರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.
ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
21.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಈಗಾಗಲೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು ಭಾಗಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ದಾವಣಗೆರೆಯ ಹಲವು ಭಾಗಗಳಲ್ಲಿ, ಚಿತ್ರದುರ್ಗ ಒಂದೆರಡು ಕಡೆ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮತ್ತೆ ಮುಂದಿನ 2 ಅಥವಾ 3 ದಿನಗಳಲ್ಲಿ ಅದೂ ಕಡಿಮೆಯಾಗವ ಲಕ್ಷಣಗಳಿವೆ.
20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಗುಡುಗು ಸಹಿತ ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
19.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನಂತೆ ಎಪ್ರಿಲ್ 20ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಮುಂದಿನ ದಿನಗಳಲ್ಲಿ ಬದಲಾಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 18, 19ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಆಮೇಲೆ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.* ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆದರೆ ಇವತ್ತು ಈಗಾಗಲೇ ಮುಂಜಾನೆಯಿಂದ ರಾಜ್ಯದ ಅಲ್ಲಲ್ಲಿ ಬಿಳಿ ಮೋಡದ ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.