ಕೋವಿಡ್-19, ಕೇರಳ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ JN-1 COVID-19. ಪ್ರಸ್ತುತ ದೇಶದ ಕೋವಿಡ್ 19 ಅಂಕಿ-ಅಂಶಗಳು ಕೇರಳ ರಾಜ್ಯಾದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19 ನ ಉಪತಳಿ ವರದಿಯಾಗಿರುವುದು ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಮಾಡಿರುವ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
ಯಾರಿಗೆ ಬಹಳ ಅಪಾಯಕಾರಿ?
ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು) ಇತರ ಆರೋಗ್ಯ ಅಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನ ಹೃದಯ ಲಿವರ್ ಸಮಸ್ಯೆಗಳು? ಅರ್ಭಿಣಿಯರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು ಅಗತ್ಯ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿಂದ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ ಜ್ವರ,ಕೆಮ್ಮು,ನೆಗಡಿ,ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು ಅಗತ್ಯ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಬೇಟಿ ನೀಡದಿರುವುದು ಸೂಕ್ತವಾಗಿದೆ.
ಸಲಹೆ
ಉತ್ತಮ ವೈಯಕ್ತಿಕ ಸ್ವಚ್ಚತೆ ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳದುಕೊಳ್ಳುವುದು ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಮನೆಯಲ್ಲಿರುವುದು ಸೂಕ್ತ ಇತರ ವ್ಯಕ್ತಿಗಳೊಂದಿಗೆ ವಿಶೇಷವಾಗಿ ಹಿರಿಯ ನಾಗರೀಕರು, ದುರ್ಬಲರನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.
ಎಚ್ಚರಿಕೆ
ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು ಹೆಚ್ಚಿನ ಗಾಳಿ ಬೆಳಕು ಇಲ್ಲದ ಮತ್ತು ಜನದಟ್ಟನೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ರಂದೀಪ್ ಡಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನ ವಿದ್ಯಾರ್ಥಿಗಳಿಂದ ಶುಲ್ಕ ಮುರುಪಾವತಿಗಾಗಿ ಅರ್ಜಿ ಆಹ್ವಾನ
2023-24 ಇಲಾಖೆಯಿಂದ ಜಾರಿ ಇರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್. ಎಸ್.ಎಲ್.ಸಿ (ಖ.ಖ.ಐ.ಅ) ನಂತರ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಇಲಾಖೆಯಿಂದ, ಅಥವಾ ಅಯಾ ತಾಲ್ಲೂಕ ವಿವಿದೋದ್ದೇಶ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರ (ಎಂ. ಆರ್.ಡಬ್ಲ್ಯೂ) ರವರಿಂದ ಪಡೆದು ಭರ್ತಿ ಮಾಡಿ.
ಬೇಕಾಗುವ ದಾಖಲೆಗಳು?
ಅರ್ಜಿಗಳೊಂದಿಗೆ ವಿಕಲಚೇತನರ ಗುರುತಿನ ಚೀಟಿ/ ಯು.ಡಿ.ಐ.ಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕಳೇದ ಸಾಲಿನ ಅಂಕ ಪಟ್ಟಿ, ಆಧಾರ ಕಾರ್ಡ್, ಬ್ಯಾಂಕ್ ಖಾತೆ ಝರಾಕ್ಸ್ ಪ್ರತಿ, ಶುಲ್ಕ ಪಾವತಿಸಿದ ರಶೀದಿ, ಇವುಗಳನ್ನು ದೃಢಿಕರಣದೊಂದಿಗೆ ಲಗತ್ತಿಸಿ ದಿ: 16-01-2024 ರೊಳಗಾಗಿ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ පූණති. ಮೈಲೂರ ಬೀದರ ಈ ಇಲಾಖೆಗೆ ಅಥವಾ ಅಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
ಬೀದರ್-9880801991, ಹಮನಾಬಾದ- 9731772898, ಬಸವ ಕಲ್ಯಾಣ-9611221445, ಔರಾದ 9611590832. ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ
ನಮ್ಮ ಜಿಲ್ಲೆಯು ಪ್ರಮುಖವಾಗಿ ಆಧಾರಿತವಾಗಿದೆ. ರೈತರು ಸಮಗ್ರ ಕೃಷಿ ಅಳವಡಿಸಿಕೊಂಡು ತಮ್ಮ ಆದಾಯ ಪದ್ಧತಿ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ ಕರೆ ನೀಡಿದರು,ಕೃಷಿ ಹಾಗೂ ತೋಟಗಾರಿಕೆ ಉತ್ತ ಹಾಗೂ ಮಾರಾಟಗಾರರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. ರೈತರು ಕೃಷಿಯಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿಯೊಂದಿಗೆ ಉಪ ಕಸುಬನ್ನು ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆ ಗಳೊಂದಿಗೆ ಮಿಶ್ರ ಬೇಸಾಯಕ್ಕೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ರೈತರಿಗೂ ಅನೂಕೂಲವಾಗುವ ನಿಟ್ಟಿನಲ್ಲಿ ಇಂದು ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಪ್ರತಿ ಮೂರು ತಿಂಗಳಿಗೊಮ್ಮೆ ಕೃಷಿಗೆ ಸಂಬಂಧಿಸಿದ ಇಂತಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಮಹಿಳಾ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಸುಮಾರು 35 ರೈತ ಸಂಪನ್ಮೂಲ ಸಂಸ್ಥೆಗಳು ಈ ಸಮಾವೇಶದಲ್ಲಿ ಪಾಲ್ಗೊಂಡಿವೆ ಎಂದು ಹೇಳಿದರು. ಈ ಸಮಾವೇಶದಲ್ಲಿ ನುರಿತ ಕೃಷಿ ತಜ್ಞರ ಸಲಹೆಗಳನ್ನು ಪಡೆದುಕೊಂಡು ಕೃಷಿಯಲ್ಲಿ ಹೆಚ್ಚುವರಿ ಇಳುವರಿ ಪಡೆಯುವ ಕ್ರಮಗಳನ್ನು ಅನುಸರಿಸಬೇಕು.
ಬರಗಾಲ ಪರಿಹಾರ ಪಡೆದುಕೊಳ್ಳಲು ರೈತರು ಫೂಟ್ಟ ತಂತ್ರಾಂಶದಲ್ಲಿ ವಿವರ ನೋಂದಾಯಿಸಿಕೊಳ್ಳಬೇಕು.ಇದೇ ಸಂದರ್ಭದಲ್ಲಿ ಮಹಾತೇಂಶ ಬಿರಾದಾರ. ಕೃಷಿ ಕಲ್ಪ ಫೌಂಡೇಶನ್ ಸಿ.ಇ.ಓ ಸಿ.ಎಂ ಪಾಟೀಲ್ ಹಾಗೂ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರಾದ ದಾನಮ್ಮ ಪಾಟೀಲ ಅವರು ಮಾತನಾಡಿದರು.