ನನ್ನ ಖಾತೆಗೆ ನಿನ್ನೆ 4800 ರೂಪಾಯಿ ಬೆಳೆ ಪರಿಹಾರ ಹಣ ಜಮಾ ಆಗಿದೆ. 06/05/2024 ರಂದು ಜಮಾ ಆಗಿದೆ.
ಮೋದಿಯವರು ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಳರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು.
ಬೆಲೆಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019 ರಲ್ಲಿ ಭಾರತೀಯರಲ್ಲಿ ಭ್ರಮೆಯನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಮೋದಿ ಒಂದೇ ಒಂದು ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿ ಬಾರಿ ಕೇವಲ ಭಾವನಾತ್ಮಕವಾಗಿ ಜನರನ್ನು ಪ್ರಚೋದಿಸುವಂತೆ ಸುಳ್ಳುಗಳನ್ನು ಹೇಳುತ್ತಿಲೇ ಇದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಸಂಪೂರ್ಣ ಹತಾಶರಾಗಿ ಹೆಚ್ಚೆಚ್ಚು ಸುಳ್ಳುಗಳನ್ನು ಹೇಳಿ ಹೇಳಿ ಎಷ್ಟು ಸಾಧ್ಯವೋ ಅಷ್ಟು ಭಾರತೀಯರ ದಾರಿತಪ್ಪಿಸಿ ಲಾಭ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಹೇಳಿರುವುದು ಅಪ್ಪಟ ಸುಳ್ಳು.
ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ 52009 . 120000 ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಹಿಂದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 72 ಸಾವಿರ ಕೋಟಿ ರೈತ ಸಾಲ ಮನ್ನಾ ಮಾಡಿದ್ದಾರೆ. ರಾಜ್ಯದಲ್ಲಿ ನಾನು ಸಿಎಂ ಆಗಿದ್ದಾಗ, 27.20 ಲಕ್ಷ ರೈತರಿಗೆ 8165 ಕೋಟಿ ರೂ. ಮೊತ್ತ ಸಾಲವನ್ನು ಮನ್ನಾ ಮಾಡಿದ್ದೇನೆ.
ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ನಾವು ಹೋರಾಟ ನಡೆಸಿದ್ದೆವು. ಆಗ ಯಡಿಯೂರಪ್ಪನವರು ನಮ್ಮ ಬಳಿ ನೋಟ್ ಪ್ರಿಂಟ್ ಮಾಡುವ ಮಷೀನ್ ಇಲ್ಲ’ ಎಂದು ರೈತರನ್ನು ಅವಮಾನಿಸಿದ್ದರು. ದೇಶದ ಜನರಿಗೆ ಸುಳ್ಳು ಹೇಳಿದ್ದಾರೆಯೇ ಎಂದು ಜನರು ವಿಚಾರ ಮಾಡಬೇಕು ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ, ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ತೀರ್ಮಾನ ಮಾಡಬೇಕಾಗುತ್ತದೆ.
ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ದೇಶದ ಭವಿಷ್ಯವನ್ನು ಬದಲಾವಣೆ ಮಾಡಲು ಪ್ರಯತ್ನ ಮಾಡಿದ್ದಾರೆಯೇ? ನುಡಿದಂತೆ ನಡೆದಿದ್ದಾರೆಯೇ? 2014 ರಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿದ್ದಾರೆಯೇ ಅಥವಾ ದೇಶದ ಜನರಿಗೆ ಸುಳ್ಳುಗಳನ್ನು ಹೇಳಿದ್ದಾರೆಯೇ ಎನ್ನುವುದನ್ನು ವಿಚಾರ ಮಾಡಬೇಕು ಎಂದರು.
ಲೋಕಸಭಾ ಚುನಾವಣೆ : ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ್ಯಾಲಿ ವಿಶೇಷ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಹೊಸಪೇಟೆ ನಗರದಲ್ಲಿ ಏಪ್ರೀಲ್ 30ರಂದು ಬೈಕ್ ರಾಲಿ ನಡೆಯಿತು. ಬೈಕ್ ರ್ಯಾಲಿ ಹಿನ್ನೆಲೆಯಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ತಮ್ಮ ತಮ್ಮ ಬೈಕ್‌ಗಳು ಮತ್ತು ಸ್ಕೂಟಿಗಳೊಂದಿಗೆ ಸಂಜೆ ವೇಳೆಗೆ ಜಿಲ್ಲಾಡಳಿತ ಭವನದ ಆವರಣಕ್ಕೆ ಆಗಮಿಸಿದ್ದರು. ಮಹಿಳಾ ನೌಕರರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು.
ಹೊಸಪೇಟೆಯ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿಗಳಾದ ಮತದಾನ ಜಾಗೃತಿಯ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮತದಾನವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಮಾತನಾಡಿ, ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾದ್ಯಂತ ಸಾಕಷ್ಟು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ವಿವಿಧೆಡೆ ಸಂಚಾರ:
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಃ ತಾವೆ ಬೈಕ್ ಚಲಾಯಿಸಿ ಇತರರಿಗೆ ಸ್ಫೂರ್ತಿ ತುಂಬಿದರು. ಬೈಕ್ ರಾಲಿಯು ಜಿಲ್ಲಾಡಳಿತ ಭವನದಿಂದ ಆರಂಭಗೊಂಡು ಸಾಯಿಬಾಬಾ ಸರ್ಕಲ್, ಬಟ್ಟೋಟಾ ಕಾಲೊನಿ, ನೆಹರೂ ಕಾಲೊನಿ, ವಾಲ್ಮೀಕಿ ಸರ್ಕಲ್, ಮಿಲನ್ ಪೆಟ್ರೋಲ್ ಬಂಕ್, ಚಪ್ಪರದಹಳ್ಳಿ, ಹಿರೋಹೊಂಡಾ ಶೋರೂಮ್. ಬಸವೇಶ್ವರ ಬಡಾವಣೆ.
ಸ್ವಾಗಿ ಮಾರ್ಕೇಟ್ ಮೂಲಕ ಸಂಚರಿಸಿ ಸಿಟಿ ಮುನ್ಸಿಪಲ್ ಆಫೀಸ್ ಆವರಣಕ್ಕೆ ಬಂದು ಮುಕ್ತಾಯವಾಯಿತು. ಬೈಕ್ ರ್ಯಾಲಿ ವೇಳೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶರಾದ ರಾಮಚಂದ್ರಪ್ಪ, ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಸುಧೀರ್.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಯುವರಾಜ ನಾಯಕ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಾದ ರವಿಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದು ಯಲಿಗಾರ ಸೇರಿದಂತೆ ಇತರರು ಇದ್ದರು.
ಪ್ರತಿಜ್ಞಾವಿಧಿ ಬೋಧನೆ: ಬೈಕ್ ರ್ಯಾಲಿಯ ಆರಂಭಕ್ಕು ಮೊದಲು ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ.ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಗಮನ ಸೆಳೆದ ಫಲಕಗಳು. ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ.’, ‘ನಿಮ್ಮ ಮತ ನಿಮ್ಮ ಹಕ್ಕು’, ‘ಕಡ್ಡಾಯವಾಗಿ ಮಾತದಾನ ಮಾಡಿ’ ಎನ್ನುವ ನಾನಾ ಘೋಷಣೆಗಳು ಇರುವ ಫಲಕಗಳನ್ನು ಬೈಕ್‌ಗೆ ಕಟ್ಟಿ ಸಾಲಾಗಿ ಸಾಗಿದ್ದು ವಿಶೇಷವಾಗಿತ್ತು.