ನನ್ನ ಖಾತೆಗೆ 2023 ಹಿಂಗಾರು ಬೆಳೆಯ 20,275 ರೂಪಾಯಿ ಬೆಳೆ ವಿಮೆ ಹಣವು ಜಮಾ ಆಗಿದೆ. ಮುಂಗಾರು ಬೆಳೆಗಳಾದ ಕಡಲೆ, ಕುಸುಬೆ, ಜೋಳ ಮತ್ತು ಇತರ ಬೆಳೆಗಳ ಬೆಳೆಯುವ ಜಮಾ ಆಗಿದೆ.
ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/
ಆಮೇಲೆ ಅಲ್ಲಿ 2023-24 ವರ್ಷವನ್ನು ಆಯ್ಕೆ ಮಾಡಿ.
ಹಿಂಗಾರು ಬೆಳೆ ಅಂದರೆ Rabi ಅನ್ನು ಆಯ್ಕೆ ಮಾಡಿ.
ನಂತರ ನೀವು ಮುಂದೆ ಅಥವಾ go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ನಂತರ ಸೆಕ್ಸ್ ಸ್ಟೇಟಸ್ (check status)ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಮೇಲೆ ನಿಮ್ಮ ಪ್ರೊಪೋಸಲ್ ನಂಬರ್ ಅಥವಾ ಮೊಬೈಲ್ ಸಂಖ್ಯೆಯನ್ನು ನೀವು ಅಲ್ಲಿ ಹಾಕಬೇಕಾಗುತ್ತದೆ. ಆಮೇಲೆ ಕ್ಯಾಪ್ಚಾ ಕೋಟನ್ನು ಹಾಕಿ ಸರ್ಚ್ (search) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಗ ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮಗೆ ಕಾಣುತ್ತದೆ.
ಕಾನೂನು ಪದವೀಧರರಿಗೆ ತರಬೇತಿ ಭತ್ಯೆ ಅರ್ಜಿ ಆಹ್ವಾನ
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿಗೆ ಸೇರಿದವರಾಗಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷವಾಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು. ಅಭ್ಯರ್ಥಿಗಳು ಸಲ್ಲಿಸುವ ಮಾಹೆಯಾನ ಮಾಡಲಾಗುವುದು.
ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ. ಈ ಬಿಡಬಹುದು ಹಾಗೂ ವಿಶೇಷ ಸಂದರ್ಭದಲ್ಲಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಈ ತರಬೇತಿಗೆ ಜಿಲ್ಲೆಯಲ್ಲಿ 03 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 25ರ ಸಂಜೆ 5 ಗಂಟೆಯೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಬೆಳಗಾವಿ ಹುನಗುಂದ- ರಾಯಚೂರು (ಓಊ7480), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು: ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫೈಓವರ್ ನಿರ್ಮಾಣಕ್ಕೆ ಅನುಮೋದನೆ. ಮೈಸೂರು ರಿಂಗ್ ರಸ್ತೆಯಲ್ಲಿ ಓಊ- 275ಏ ನಲ್ಲಿ 9 ಗ್ರೇಡ್ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ಬೆಳಗಾವಿ ನಗರದಲ್ಲಿ ಹಳೆ ಓಊ4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವ ಯೋಜನೆ ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್ ನಿರ್ಮಾಣ ಓಊ-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ. ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ ಓಊ- 1500 ಯ ಒಂದು ಬಾರಿ ಸುಧಾರಣೆ. ರಾಷ್ಟ್ರೀಯ ಹೆದ್ದಾರಿ ಓಊ-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲೆಟ್ಟದಿಂದ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್. ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.