ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ ಆಕ್ಷೇಪಣೆ ಕುರಿತು ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಯ ಆದೇಶದ ಸಂಕ್ಷಿಪ್ತ ವರದಿ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24ನೇ ಸಾಲಿನಲ್ಲಿ ಖಾಸಗಿ ವಿಮಾ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಹಲವು ಬೆಳೆ ಕಟಾವು ಪ್ರಯೋಗಗಳ ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಬಗ್ಗೆ ಮಾನ್ಯ ಕೃಷಿ ಸಚಿವರ ಮಾರ್ಗದರ್ಶನದಲ್ಲಿ ರಾಜ್ಯದಿಂದ ಉನ್ನತಾಧಿಕಾರಿಗಳು ಪ್ರಬಲವಾದ ವಾದವನ್ನು ಮಂಡಿಸಿದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು.
02.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದ ಮೇಲೆ ಮಳೆಯ ಪ್ರಮಾಣದಲ್ಲಿ ಹೆಚ್ಚು ಕಡಿಮೆ ಇರಬಹುದು.
ಈಗಿನಂತೆ ನವೆಂಬರ್ 2ರಿಂದ ಮಳೆಯ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ನವೆಂಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 2ರಿಂದ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 4ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ) ಗುಡುಗು ಸಹಿತ ಸಂಜೆ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.
ಈಗಿನಂತೆ ಈ ಮಳೆಯ ನವೆಂಬರ್ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ನವೆಂಬರ್ 5 ರ ಸುಮಾರಿಗೆ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮಳೆ ಕಡಿಮೆಯಾದರೂ ನವೆಂಬರ್ 9 ಅಥವಾ 10ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ.
01.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಈ ಮಳೆಯು ಮುಂದಿನ 3 ಅಥವಾ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಅಲ್ಲಲ್ಲಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 2ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 4 ಅಥವಾ 5ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
31.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 31ರಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, ನವೆಂಬರ್ 2ರಿಂದ ಕರಾವಳಿಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ನವೆಂಬರ್ 4ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ, ಹಾವೇರಿ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ನವೆಂಬರ್ 2 ರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದು, ನವೆಂಬರ್ 4ರ ತನಕ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗು ಮುನ್ಸೂಚನೆ ಇದ್ದರೂ ಕಾದು ನೋಡಬೇಕಾಗಿದೆ.
30.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಒಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಈಗಿನ ಮಳೆಯು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಉಂಟಾಗಿದ್ದರೆ, ಒಳನಾಡಿನಲ್ಲಿ ಹಿಂಗಾರು ಮಳೆ ಇರಬಹುದು.
29.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅರಬ್ಬಿ ಸಮುದ್ರ ಕಡೆಯಿಂದ ಗಾಳಿ ಬೀಸುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಹೀಗೆ ಮುಂದುವರಿಯುವ ಲಕ್ಷಣಗಳಿದ್ದು, ಒಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಮೋಡದ ವಾತಾವರಣದ ಸಾಧ್ಯತೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ನವೆಂಬರ್ 1ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅರಬ್ಬಿ ಸಮುದ್ರದ ಮೂಲಕ ಗಾಳಿ ಬೀಸುತ್ತಿದ್ದು, ಉತ್ತರ ಒಳನಾಡಿನಲ್ಲಿ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ.
28.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ, ಮಂಗಳೂರು ಹಾಗೂ ಕಾಸರಗೋಡು ತೀರ ಭಾಗಗಳ ಸುತ್ತಮುತ್ತ ತಡ ರಾತ್ರಿ ಅಥವಾ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಈ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಿನಕಳೆದಂತೆ ಮಳೆಯ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಉತ್ತರ ಭಾರತ ಕಡೆಯಿಂದ ಈಗ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಮಾಣವು ಕಡಿಮೆಯಾಗುತ್ತಿದ್ದಂತೆಯೆ, ಪೂರ್ವದ ಮಾರುತಗಳು ಚುರುಕಾಗುವ ಸಾಧ್ಯತೆಗಳಿದ್ದು, ನವೆಂಬರ್ 2ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
27.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ರೀತಿಯ ವಾತಾವರಣವು ಒಕ್ಟೊಬರ್ ಕೊನೆಯ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 30ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ನವೆಂಬರ್ ಮೊದಲ ವಾರದಲ್ಲಿಯೂ ಮಳೆ ಮುಂದುವರಿಯುವ ಸಂಭವವಿದೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ನವೆಂಬರ್ 1ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ
ಡಾನಾ ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಈಗ ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ನವೆಂಬರ್ 1ರಿಂದ ರಾಜ್ಯದಾದ್ಯಂತ ಹಿಂಗಾರು ರೂಪದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
26.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ, ಒಕ್ಟೊಬರ್ 30ರ ತನಕ ಮಳೆ ಕಡಿಮೆಯಾದರೂ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸೀಮಿತ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ನಂತರ ಮತ್ತೆ ಗುಡುಗು ಮಳೆ ಪ್ರಾರಂಭವಾಗುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 28ರಿಂದ ಮೋಡ ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಪ್ರಾರಂಭವಾಗಿ ಒಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ದಕ್ಷಿಣ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಡಾನಾ ಚಂಡಮಾರುತದ ಪ್ರಭಾವದಿಂದ ಈಗ ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಉಂಟಾಗಿದ್ದು, ಇದು ತಾತ್ಕಾಲಿಕವಾಗಿರಬಹುದು.
ಈ ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ, ಅಂದರೆ ಸುಮಾರು ಒಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.
ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಂದು ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.
ಒಳನಾಡು : ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 25ರಿಂದ ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಲಿದೆ.
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಇಂದು ರಾತ್ರಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ತಿರುವಿಕೆಯ ಇನ್ನಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.
ಈಗಿನಂತೆ ಚಂಡಮಾರುತದ ಪ್ರಭಾವದಿಂದ ಹಿಂಗಾರು ಅತಿ ದುರ್ಬಲಗೊಂಡಿದ್ದು, ಈಗಿನ ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಒಕ್ಟೊಬರ್ 29ರಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತು 30ರಿಂದ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ತೀರ ಭಾಗಗಳ ಸುತ್ತಮುತ್ತ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಾಲೂಕು ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ, ಪುತ್ತೂರು, ಬಂಟ್ವಾಳ ತನಕವೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 25ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.
ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಮಳೆ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಸಣ್ಣ ಪ್ರಮಾಣದ ತಿರುಗಿ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಆದರೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಕಾಣಿಸುತ್ತಿಲ್ಲ.
ಈಗಿನಂತೆ ಒಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.
ಒಳನಾಡು : ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.
ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
22.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸುಳ್ಯ, ಸುಬ್ರಮಣ್ಯ, ಪುತ್ತೂರು ಬಂಟ್ವಾಳ, ಕಾಸರಗೋಡು ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 25ರ ತನಕ ಕರಾವಳಿಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 24ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ).
ಈಗಿನಂತೆ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದಿಂದ ಶ್ರೀಲಂಕಾ ಕರಾವಳಿ ಮೂಲಕ ಬಂಗಾಳಕೊಲ್ಲಿ ಕಡೆ ಬೀಸುವ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ( ಆಗ್ನೇಯದಿಂದ ವಾಯವ್ಯ ಕಡೆಗೆ) ದಕ್ಷಿಣ ಒಳನಾಡು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮಾರುತಗಳಿಗೆ ಭಾರಿ ಹಿನ್ನಡೆ ಉಂಟಾಗುವ ಲಕ್ಷಣಗಳಿವೆ.
ಈಗಿನಂತೆ ಒಕ್ಟೊಬರ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು “ಡಾನಾ” ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.