ಬೆಂಗಳೂರು : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್‌ಪಿ) ರವರಿಗೆ ಫೆಬ್ರವರಿ 29 ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿ ವೇತನ : ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
2023-24 ನೇ ಸಾಲಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ಪೋರ್ಟಲ್(ಎಸ್ ಎಸ್ ಪಿ) ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಅನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.29 ರ ತನಕ ವಿಸ್ತರಿಸಲಾಗಿದೆ. 2023-24 ನೇ ಸಾಲಿನಲ್ಲಿ ಪಿಯುಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ.
ಬಜೆಟ್‌ನಲ್ಲಿ ಅಲ್ಪ ಸಂಖ್ಯಾತರಿಗೆ ಅನ್ಯಾಯ : ವೆಲೇರ್ ಪಾರ್ಟಿ
ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ. ನುಡಿದಂತೆ ನಡೆದ ಸರಕಾರ ಎಂದು ಬಿಂಬಿಸುತ್ತಿರುವ ಸರಕಾರ ಈ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ.ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ರವರು ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರು ಮಾತನಾಡುತ್ತಾ “ಇತ್ತೀಚೆಗೆ ಅಲ್ಪಸಂಖ್ಯಾತ ಮುಖಂಡರು. ಕಳೆದ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಗಳನ್ನು ಬೇಟಿಯಾಗಿ 5000 ಕೋಟಿ ರೂಪಾಯಿಗಳ ಮಂಜೂರಿಗಾಗಿ ಬೇಡಿಕೆ ನೀಡಿತ್ತು. ಕಳೆದ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ರ ಸಮ್ ಕಾಲೊನಿಯ ಅಭಿವೃದ್ಧಿ ಯೋಜನೆಗೆ ಇನ್ನೂರು ಕೋಟಿ ಘೋಶಿಸಿತ್ತು.
ಆದರೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಅಲ್ಪಸಂಖ್ಯಾತ ರ ಅಭಿವೃದ್ಧಿ ಗೆ 2101.20ಕೋಟಿ ಘೋಷಿಸಿತ್ತು. ಕಳೆದ ಜನವರಿ 24 ರಂದು 1008ಕೋಟಿ ಬಿಡುಗಡೆ ಮಾಡಿತು. ಆದರೆ ವ್ಯಯವಾದದ್ದು ಕೇವಲ438.86 ಕೋಟಿ ಇನ್ನೂ 575 ಕೋಟಿ ಬರಬೇಕಿದೆ. ಮುಖ್ಯಮಂತ್ರಿ ಗಳ ವಿಶೇಷ ನಿಧಿಯಿಂದ ಅಲ್ಪಸಂಖ್ಯಾತ ರ ಅಭಿವೃದ್ಧಿ ಗೆ ಐವತ್ತು ಕೋಟಿ ಘೋಷಿಸಿತ್ತು. ಬಂದದ್ದು ಶೂನ್ಯ. ಅಲ್ಪ ಸಂಖ್ಯಾತ ವಿಧ್ಯಾರ್ಥಿಗಳ ವಿಧ್ಯಾರ್ಥಿವೇತನಕ್ಕಾಗಿ ಘೋಶಿಸಿದ್ದು 160ಕೋಟಿ ಬಿಡುಗಡೆ ಯಾದದ್ದು 50.63 ಕೋಟಿ ವ್ಯಯವಾದದ್ದು 39.67 ಕೋಟಿ ಇದು ಕಳೆದ ಬಾರಿಯ ಬಜೆಟ್‌ನಲ್ಲಿ ಬಿಡುಗಡೆ ಯಾದ ವಿವರಗಳು.
ಹೀಗೆ ಅಲ್ಪ ಸಂಖ್ಯಾತರಿಗೆ ಲಾಲಿ ಪಾಪ್ ನೀಡಿ ಸಮಧಾನಿಸಲು ಸರಕಾರ ಹೊರಟಿದೆ. ಅಲ್ಪ ಸಂಖ್ಯಾತರ ಮಹತ್ವದ ಪಾತ್ರದಿಂದ ಈ ಸರಕಾರ ಆಡಳಿತ ಕ್ಕೆ ಬಂದಿದೆ.ಸರಕಾರ ಅಲ್ಪ ಸಂಖ್ಯಾತರ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇದು ನ್ಯಾಯವಲ್ಲ ಎಂದು ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ಗ್ಯಾರಂಟಿಗೆ ಸರಕಾರ ಹೆಚ್ಚು ಒತ್ತು ಕೊಟ್ಟಂತೆ ಕಂಡು ಬರುತ್ತದೆ. ರೈತರಿಗೆ ಆರ್ಥಿಕ ವಾಗಿ ದುರ್ಬಲ ರಾಗಿರುವವರಿಗೆ ತ್ವರಿತ ನ್ಯಾಯ ಒದಗಿಸಲು ಸಿವಿಲ್ ಪ್ರಕ್ರಿಯೆ ಸಂಹಿತೆ ಆಧಿ ನಿಯಮ, ವಸತಿ ರಹಿತರನ್ನು ಗುರುತಿಸಲು ಸಮೀಕ್ಷೆ, ನ್ಯಾಯಾಲಯದ ಕಲಾಪದ ನೇರ ಪ್ರಸಾರ ಇವೆಲ್ಲವೂ ಉತ್ತಮ ಅಂಶವಾಗಿದೆ.
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ಈ ನಾಡಿನ ಜನತೆಯನ್ನು ಪದೇ ಪದೇ ಅವಮಾನಿಸುವುದನ್ನು ನಿಲ್ಲಿಸಿ.
ನಿಮ್ಮನ್ನು ಮಂಗಳೂರು. ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು. ಎಂದು ಕೇಳಿದರು. ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗು, ದೇಶದ ಮಕ್ಕಳು-ಯುವಜನರ ಬದುಕು- ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು ಪ್ರಶ್ನಿಸಿದರು.
ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು. ಜಾತಿ-ಜಾತಿಗಳ ಮಧ್ಯೆ, ಧರ್ಮ- ಧರ್ಮಗಳ ಮಧ್ಯೆ ಕಿತ್ತಾಟ. ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು.