Breaking
Tue. Dec 17th, 2024
Spread the love

21.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 23ರಿಂದ 3 ಅಥವಾ 4 ದಿನಗಳ ಕಾಲ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 23ರಿಂದ ಮಳೆ ಸ್ವಲ್ಪ ಜಾಸ್ತಿ ಇರಬಹುದು.

ಒಳನಾಡು: ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 22ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆ. 20ರಂದು ಸಹ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಸೆಪ್ಟೆಂಬರ್ 23ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆರೆಗೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 20ರಂದು ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿದ್ದು, 21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಸಾಧ್ಯತೆಗಳಿವೆ.

Related Post

Leave a Reply

Your email address will not be published. Required fields are marked *