Breaking
Thu. Dec 26th, 2024

8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಜಮೆ.

Spread the love

ಅನ್ನದಾತರಿಗೆ ನೆಮ್ಮದಿಯ ಗ್ಯಾರಂಟಿ

ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ. 16,615 ರಾಸುಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹6.98 ಕೋಟಿ ಪರಿಹಾರ ವಿತರಣೆ.

16,895 ಕುರಿ / ಮೇಕೆಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹8.12 ಕೋಟಿ ಪರಿಹಾರ ವಿತರಿಸಲು ಕ್ರಮ. ಜಾನುವಾರುಗಳ ಸಾಂಕ್ರಾಮಿಕ ರೋಗ ಕಾಲು ಬಾಯಿ ಜ್ವರ ಬಾರದಂತೆ ತಡೆಯಲು 99.07 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಗೂ ಚರ್ಮಗಂಟು ರೋಗ ಬಾರದಂತೆ ತಡೆಯಲು 72.52 ಲಕ್ಷ ದನಗಳಿಗೆ ಲಸಿಕೆ. ₹10 ಕೋಟಿ ವೆಚ್ಚದಲ್ಲಿ ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹100 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ.

26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚೆನೆ ಇದೆ. ಮಂಗಳೂರಿನ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 28ರ ತನಕವೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಡಿಸೆಂಬರ್ 27ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26ರಂದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದರೆ, 27ರಂದು ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಒಳನಾಡು : ರಾಜ್ಯದ ಉತ್ತರ ಹಾಗೂ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉತ್ತರ ಕರ್ನಾಟಕ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.

ಡಿಸೆಂಬರ್ 28ರಿಂದ ಮೋಡ ಹಾಗೂ ತುಂತುರು ಮಳೆಯ ಪ್ರಮಾಣ ಕಡಿಮೆಯಾಗಿ ಡಿಸೆಂಬರ್ 29 ಅಥವಾ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

24.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ವಾತಾವರಣವು ಡಿಸೆಂಬರ್ 27ರ ತನಕ ಮುಂದುವರಿದು 28ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು.

ಮಲೆನಾಡು : ಮಲೆನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿಸೆಂಬರ್ 26ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26ರಿಂದ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿದ್ದು ಒಣಹವೆ ಆವರಿಸುವ ಲಕ್ಷಣಗಳಿವೆ.
2025ರ ಜನವರಿಯಲ್ಲಿ ಮಳೆಯ ಲಕ್ಷಣಗಳಿಲ್ಲ.

23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉತ್ತರ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ದಕ್ಷಿಣ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ.

ಈಗಿನಂತೆ ಡಿಸೆಂಬರ್ 27ರ
ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿಸೆಂಬರ್ 26ರಂದು ದಕ್ಷಿಣ ತಮಿಳುನಾಡು ತೀರದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರಿಂದ ಹಿಂಗಾರು ರೀತಿಯ ಮಾರುತಗಳು ಬರುವುದರಿಂದ ರಾಜ್ಯದಲ್ಲಿ 2 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿಸೆಂಬರ್ 24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ)
ಈಗಿನಂತೆ ಡಿಸೆಂಬರ್ 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿಸೆಂಬರ್ 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಡಿಸೆಂಬರ್ 28ರಿಂದ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿಸೆಂಬರ್ 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಈ ವಾಯುಭಾರ ಕುಸಿತವು ಡಿಸೆಂಬರ್ 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

20.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸ್ವಲ್ಪ ಮಟ್ಟಿಗೆ ಛಳಿ ಪ್ರಮಾಣವು ಕಡಿಮೆಯಾಗಿದ್ದು ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 22ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಸೆಖೆ ಆರಂಭವಾಗುವ ಲಕ್ಷಣಗಳಿವೆ. 25ರಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಛಳಿಯ ಪ್ರಮಾಣ ಈಗಾಗಲೇ ಕಡಿಮೆಯಾಗಿದ್ದು, ಡಿಸೆಂಬರ್ 22ರಿಂದ ಮೋಡದ ವಾತಾವರಣದ ಜೊತೆಗೆ ತುಂತುರು ಮಳೆಯ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಛಳಿಯ ಪ್ರಮಾಣ ಹೆಚ್ಚಿರಬಹುದು.
ದಕ್ಷಿಣ ಒಳನಾಡಿನ ಛಳಿಯ ಪ್ರಮಾಣವು ಕಡಿಮೆಯಾಗಿದ್ದು ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ..
*ಕೋಲಾರದ ತಮಿಳುನಾಡು ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.*
ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿಸೆಂಬರ್ 22ರಿಂದ ಛಳಿಯ ಪ್ರಮಾಣವು ಕಡಿಮೆಯಾಗುವ ಸಾಧ್ಯತೆಗಳಿದ್ದು, 25 ಅಥವಾ 26ರಿಂದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಈಶಾನ್ಯಕ್ಕೆ ಚಲಸುತ್ತಿದ್ದರೂ ನಿಧಾನ ಗತಿಯಲ್ಲಿದೆ. ಶಿಥಿಲಗೊಳ್ಳಲು ಸಮಯ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಡಿಸೆಂಬರ್ 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರ ಭಾರತದ ಕಡೆಗೆ ಚಲಿಸುವುದರಿಂದ ರಾಜ್ಯದಾದ್ಯಂತ ಛಳಿಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳೊಂದಿಗೆ ಅಲ್ಲಲ್ಲಿ ಮಳೆಯ ವಾತಾವರಣವು ಸೃಷ್ಠಿಯಾಗುವ ಸಾಧ್ಯತೆಗಳಿವೆ.
ಇದರೊಂದಿಗೆ ಉತ್ತರ ರಾಜಸ್ಥಾನದಲ್ಲಿ ತಿರುಗುವಿಕೆ ಆರಂಭವಾಗುವ ಲಕ್ಷಣಗಳಿದ್ದು. ಉತ್ತರ ಭಾರತದ ಹಲವು ಕಡೆ ಡಿಸೆಂಬರ್ 24ರ ನಂತರ ಮಳೆಯ ಮುನ್ಸೂಚೆನೆ ಇದೆ.

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿಸೆಂಬರ್ 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ.
ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಗೋಚರಿತ್ತಿಲ್ಲ. ಮಳೆಯ ಆತಂಕವೂ ದೂರವಾಗಿದೆ.
*ರಾಜ್ಯದ ವಿವಿಧ ಭಾಗಗಳಲ್ಲಿ ರೈತರು, ಕೃಷಿಕರು ಬೆಳೆಕಟಾವು ಕಾರ್ಯವನ್ನು ನಿರಾತಂಕವಾಗಿ ನಡೆಸಬಹುದು.*
ಆದರೆ ಡಿಸೆಂಬರ್ 18ರಿಂದ 3 ದಿವಸಗಳ ಕಾಲ ಬೆಂಗಳೂರು ದಕ್ಷಿಣ ಸಹಿತ ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

17.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ತಲುಪಿದ್ದು, ಡಿ. 17ರಂದು ತಮಿಳುನಾಡು ಆಂದ್ರಾ ಕರಾವಳಿ ಮೂಲಕ ಈಶಾನ್ಯ ಕಡೆ ಚಲಿಸುವ ಲಕ್ಷಣಗಳಿವೆ.
ವಾಯುಭಾರ ಕುಸಿತ ಭಾರತದ ಉತ್ತರ ಕರಾವಳಿ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಡಿಸೆಂಬರ್ 19ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ವಾಯುಭಾರ ಕುಸಿದ ಪಥವು ಬದಲಾಗವ ಸಾಧ್ಯತೆಗಳಿರುವುದರಿಂದ ಕಾದು ನೋಡಬೇಕಾಗಿದೆ.

15.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ, ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಸುಳ್ಯ ತಾಲೂಕಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದ ಜೋತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಮಲೆನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 16ರ ತನಕ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ.

ಬಂಗಾಳಕೊಲ್ಲಿಯ ಅಂಡಮಾನ್ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ವಾಯುಭಾರ (1002hPa) ಕುಸಿತವಾಗಿ ಡಿಸೆಂಬರ್ 18ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು.
ತಮಿಳುನಾಡು ಕರಾವಳಿ ದಾಟಿ ಮುಂದೆ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. ಹಾಗಾದರೆ ಮಾತ್ರ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯಬಹುದು.
ಸಾಗುವ ಹಾದಿ ಕಾದು ನೋಡಬೇಕಾಗಿದೆ.

14.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ದಿನವಿಡೀ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ದಿನದ ಬಹುಪಾಲು ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 14ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮತ್ತೆ ಮೋಡದ ವಾತಾವರಣದ ಲಕ್ಷಣಗಳಿವೆ.

ಮಲೆನಾಡು : ಕೊಡಗು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮೋಡ ಹಾಗೂ ಸಣ್ಣ ಪ್ರಮಾಣದ ಮಳೆಯ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ.

ಶ್ರೀಲಂಕಾ ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಮತ್ತಷ್ಟು ದಕ್ಷಿಣಕ್ಕೆ ಚಲಿಸಿದ್ದು, ನಾಳೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಂದರ್ಭದಲ್ಲಿ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಡಿಸೆಂಬರ್ 17ರ ಸುಮಾರಿಗೆ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಒತ್ತಡದ ಪ್ರಮಾಣವು 1005hPa ಸನೀಹ ಇರುವುದರಿಂದ ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

13.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಹಾಗೂ ಉಳಿದ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸ್ವಲ್ಪ ಮೋಡ ಮಾತ್ರ ಇರಬಹುದು.
ಈಗಿನಂತೆ ಡಿಸೆಂಬರ್ 13ರಂದು ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ರಾತ್ರಿಯ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಹಾಸನ ಅಲ್ಲಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮತ್ತು ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 13ರಿಂದ ಮಳೆ ಕಡಿಮೆಯಾಗಿ 14ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪು, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಹಾಗೂ ನಂತರ ನಿರಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 13ರಂದು ಹಾವೇರಿ, ಧಾರವಾಡ ಸ್ವಲ್ಪ ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಶ್ರೀಲಂಕಾ ಉತ್ತರ – ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ದಕ್ಷಿಣ ಕೇರಳದ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿವೆ.
ಡಿಸೆಂಬರ್ 17ರಂದು ಇನ್ನೊಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಗಳಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಡಿಸೆಂಬರ್ 11ರಂದು ಮಳೆಯ ಸಾಧ್ಯತೆ ಕಡಿಮೆ ಇದ್ದು, 12 ಹಾಗೂ 13ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ವಾಯುಭಾರ ಕುಸಿತದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಡುವು ಪಡೆದರೂ ಡಿಸೆಂಬರ್ 16ರಿಂದ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 12 ಹಾಗೂ 13ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಗಲಿದ್ದು, ಡಿಸೆಂಬರ್ 16ರಿಂದ ಇನ್ನೊಂದು ವಾಯುಭಾರ ಕುಸಿತದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 11ರಂದು ಕರ್ನಾಟಕ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ವಾಯುಭಾರ ಕುಸಿತದ ತುಂತುರು ಮಳೆ ಆರಂಭವಾಗಿ 12 ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಡಿಸೆಂಬರ್ 16ರಿಂದ ಮತ್ತೆ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಬಳಿಯ ವಾಯುಭಾರ ಕುಸಿತವು ಡಿಸೆಂಬರ್ 11 ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, 12ರಂದು ದಕ್ಷಿಣ ಕೇರಳ ಕಡೆಗೆ ಸಾಗುವ ಸಾಧ್ಯತೆಗಳಿವೆ.

10.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿಸೆಂಬರ್ 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು (1005hPa) ಡಿಸೆಂಬರ್ 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿಸೆಂಬರ್ 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿಸೆಂಬರ್ 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.

09.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ 12ರ ತನಕ ಮಳೆ ಕಡಿಮೆಯಾಗಲಿದ್ದು 13 ಹಾಗೂ 14ರಂದು ವಾಯುಭಾರ ಕುಸಿತದ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿಮೆ ಇರಬಹುದು.

ಮಲೆನಾಡು : ಕೊಡಗಿನ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10 ಹಾಗೂ 11ರಂದು ಬಿಡುವು ಪಡೆವ ಮಳೆಯು 12ರಿಂದ 14ರ ತನಕ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. 15ರಿಂದ ಮತ್ತೆ ಮಳೆ ಕಡಿಮೆಯಾಗಲಿದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿಸೆಂಬರ್ 10ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಬಿಡುವು ಪಡೆಯಬಹುದು. ಡಿಸೆಂಬರ್ 13ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ.
ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಡಿಸೆಂಬರ್ 12 ಹಾಗೂ 13ರಂದು ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು (ನಿಮ್ನತೆ 1005hpa) ಶ್ರೀಲಂಕಾ ಬಳಿ ತಲುಪಿದ್ದು ಡಿಸೆಂಬರ್ 11ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ. ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ. ಡಿಸೆಂಬರ್ 14ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ.
ಇದರ ಜೊತೆಗೆ ಇನ್ನೆರಡು ವಾಯುಭಾರ ಕುಸಿತ ಇದೇ ಹಾದಿಯಲ್ಲಿ ಬರುವ ನಿರೀಕ್ಷೆ ಇದೆ.
ಅಂತೂ ಡಿಸೆಂಬರ್ ತಿಂಗಳ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಮುನ್ಸೂಚೆನೆ ಇದೆ.

08.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಉಡುಪಿ ಸಾಮಾನ್ಯ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 11ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು: ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಡಿಸೆಂಬರ್ 8ರತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಡಿಸೆಂಬರ್ 13ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.

ನಿಕೋಬಾರ್ ಕರಾವಳಿಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಡಿಸೆಂಬರ್ 11 ಅಥವಾ 12ರ ಸುಮಾರಿಗೆ ಶ್ರೀಲಂಕಾ ಕರಾವಳಿ ಮೂಲಕ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪರಿಣಾಮವನ್ನು ಕಾದು ನೋಡಬೇಕಾಗಿದೆ.

07.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಇನ್ನು ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಡಿಸೆಂಬರ್ 9 ರಿಂದ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಡಿಸೆಂಬರ್ 9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Related Post

Leave a Reply

Your email address will not be published. Required fields are marked *