ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ. ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಮಾರ್ಚ್ 3, 2024 ರಿಂದ ಎಪ್ರಿಲ್ 3, 2024 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಅರ್ಹತೆ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿಯ ವಿವರ ಹಾಗೂ ಪ್ರವರ್ಗವಾರು ಮತ್ತು ಜಿಲ್ಲಾವಾರು ಹುದ್ದೆಗಳ ವಿವರವನ್ನು ಹಾಗೂ ಇನ್ನಿತರ & kea ನಲ್ಲಿ ನೋಡಬಹುದು. ಧಾರವಾಡ ಜಿಲ್ಲೆಯ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನ: ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಯು ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು, ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ / ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಳಸಲಾದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು ಹಾಗೂ ಸದರಿ ಅರ್ಜಿಯಲ್ಲಿ ಕೋರಲಾದ ಒಂದು ಜಿಲ್ಲೆಗೆ ಮಾತ್ರ ಪರಿಗಣಿಸಲಾಗುವುದು. ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ / ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ.
ಶೈಕ್ಷಣಿಕ ವಿದ್ಯಾರ್ಹತೆ
ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ. (ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.) ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ. ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ ಐ ಓ ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ. ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜಿ.ಎಲ್.ಡಿ.ಸಿ) (ಅಭ್ಯರ್ಥಿಗಳು ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)
ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ (NPS).
ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಭೂ ರಹಿತ ಕೃಷಿ ಕಾರ್ಮಿಕ ಹಾಗೂ ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿಧ್ಯಾನಿದಿ.
ರೈತರ ಮಕ್ಕಳ ಸ್ನಾತಕೋತ್ತರ ಶಿಕ್ಷಣದವರೆಗೆ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮವನ್ನು ಮುಂದುವರೆಸಿದೆ. ಈ ಯೋಜನೆಯಡಿ ಎಸ್.ಎಸ್.ಎಲ್.ಸಿ. / 10 ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣಸಂಸ್ಥೆ / ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ.
ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು ಫೆಬ್ರುವರಿ 29 ರೊಳಗೆ ಪ್ರಮಾಣ ಪತ್ರವನ್ನು ಅಪ್ ಲೋಡ್ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲಾ ಅರ್ಹ ರೈತರ ಮಕ್ಕಳು ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (https://ssp.postmatric.karnataka.gov.in)ನೋಂದಾಯಿಸಿಕೊಳ್ಳಬಹುದಾಗಿದೆ.
ರೈತ ವಿದ್ಯಾನಿಧಿ : ಆದಾಯ ಪ್ರಮಾಣ ಪತ್ರ ಸಲ್ಲಿಕೆಗೆ 29 ಕೊನೆ
ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂ-ರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಪೋಷಕರ ಆದಾಯ 2.50 ಲಕ್ಷ ಮೀರಿರದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದಾಯ ಪ್ರಮಾಣ ಪತ್ರ ಅಪಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂ-ರಹಿತ ಕೃಷಿ ಕಾರ್ಮಿಕರ ವಿದ್ಯಾನಿದಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುವದಿಲ್ಲವೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ( ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಅರ್ಜಿ ಅಹ್ವಾನಿಸಲಾಗಿದೆ.
ವೃತ್ತಿಪರ ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ತಡವಾಗಿದ್ದರಿಂದ ಕಾಲೇಜುಗಳು ತಡವಾಗಿ ಪ್ರಾರಂಭಿಸಲಾಗಿದ್ದು ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲವೆಂದು ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ಕಲ್ಪಿಸಲಾಗಿದೆ. ಮೆಟ್ರಿಕ್ ನಂತರ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಸ್ಥಾನಗಳು ಉಳಿದಿದ್ದು ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ, ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳು ಮಾತ್ರ ಪ್ರವೇಶಾತಿ ಕಲ್ಪಿಸಲು ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ
ಲಾಗಿನ್‌ನಲ್ಲಿ ಫೆ. 20 ರಿಂದ 29ರವರೆಗೆ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ತಾಲ್ಲೂಕ ಹಂತದಲ್ಲಿ ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಪ್ರವರ್ಗ-1 ಎಸ್.ಸಿ & ಎಸ್.ಟಿ 2.50 ಲಕ್ಷ, ಮತ್ತು ಪ್ರವರ್ಗ-2ಎ, 2ಬಿ. 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ಮಿತಿಯಲ್ಲಿರಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.