Breaking
Tue. Dec 17th, 2024

ತೋಟಗಾರಿಕೆ ಇಲಾಖೆಯಿಂದ ತರಕಾರಿ ಬೀಜಗಳ ಹೈಬ್ರಿಡ್, ಸುಧಾರಿತ ತಳಿ ವಿತರಣೆ

Spread the love

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿಗೆ “ತರಕಾರಿ ಬೀಜಗಳ ಹೈಬ್ರಿಡ್ ಹಾಗೂ ಸುಧಾರಿತ ತಳಿ ವಿತರಣೆ ಎಂಬ ಕಾರ್ಯಕ್ರಮ”ವನ್ನು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳನ್ನು ನೀರಾವರಿ ಸೌಲಭ್ಯವಿರುವ ಸಣ್ಣ & ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆಸಕ್ತ ರೈತರು ತಾಲೂಕಿನ ತೋಟಗಾರಿಕೆ ಇಲಾಖೆಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಜೊತೆಗೆ ಪ್ರಸಕ್ತ ಸಾಲಿನ ಉತಾರ , ನೀರಾವರಿ ಸರ್ಟಿಫಿಕೆಟ್, ಆಧಾರ ಕಾರ್ಡ, ಓಟರ್ ಐಡಿ, ಬ್ಯಾಂಕ್ ಪಾಬುಕ್ ಹಾಗೂ ಪ.ಜಾತಿ/ಪ.ಪಂಗಡ ರೈತರು ಜಾತಿ ಪ್ರಮಾಣ ಪತ್ರ ನಕಲು ಪ್ರತಿ ಸಲ್ಲಿಸುವುದು. ಎಂದು ಗದಗ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ (ಜಿ.ಪಂ) ಶೈಲೇಂದ್ರ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಡಿ ತಾಲೂಕಿನ ರೈತರಿಗೆ ಕೃಷಿ ತರಬೇತಿ

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜನವರಿ 29, 30 ಹಾಗೂ 31 ರಂದು ಕ್ರಮವಾಗಿ ಮೂರು ದಿನಗಳ ಕಾಲ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇಂಡಿ ತಾಲೂಕಿನ ರೈತರಿಗೆ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು ಮತ್ತು ನಿರ್ವಹನೆ ಕುರಿತು ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾ ಸುತಾರ್ ಮೊ: 9886134310 ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ. ಇಂದು ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶೆಟ್ಟರ್, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಒಪ್ಪಿದ್ದಾರೆ. ನಂತರ ದಿಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿದ್ದಾರೆ. ಈ ಸಂದರ್ಭ ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಬಿ.ಎಸ್. ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.

ದೈಹಿಕ ವಿಕಲಚೇತನರಿಗೆ ಬ್ಯಾಟರಿಚಾಲಿತ ವೀಲ್‌ ಚೇ‌ರ್ ಯೋಜನೆಯಡಿ ಅರ್ಜಿ ಆಹ್ವಾನ

2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ರವರ ವತಿಯಿಂದ 15 ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳ್ಳುತ್ತಿರುವ ಬ್ಯಾಟರಿಚಾಲಿತ ವೀಲ್ ಚೇರ್ ಯೋಜನೆಯಡಿ ವಿಕಲಚೇತನ ಫಲಾನುಭವಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕ ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರುವರಿ 10 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ತಾಲ್ಲೂಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಎಮ್.ಆರ್.ಡಬ್ಲ್ಯೂ. ತಾಲ್ಲೂಕ್ ಪಂಚಾಯತ, ಗದಗ 8867556465, ಎಮ್.ಆರ್.ಡಬ್ಲ್ಯೂ. ತಾಲ್ಲೂಕ್ ಪಂಚಾಯತ, ರೋಣ-9741615926. ಎಮ್.ಆರ್.ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ಮುಂಡರಗಿ 9611922445, ಎಮ್.ಆರ್. ಡಬ್ಲ್ಯೂ.ತಾಲ್ಲೂಕ್ ಪಂಚಾಯತ, ಶಿರಹಟ್ಟಿ 8951128679, ಎಮ್.ಆರ್. ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ನರಗುಂದ 9591679022 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 029 ರ ದೂರವಾಣಿ ಸಂಖ್ಯೆ: 08372-220419 ಮೂಲಕ ಸಂಪರ್ಕಿಸಬಹುದಾಗಿದೆ.

ಜಾನಪದ ಕಲಾ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಜನರಿಗಾಗಿ ಬೆಳಗಾವಿ ವಿಭಾಗ ಮಟ್ಟದ ಜಾನಪದ ಕಲಾ ತರಬೇತಿ ಶಿಬಿರವನ್ನು ಬೆಳಗಾವಿ ಜಿಲ್ಲೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿರುತ್ತದೆ. ಜಾನಪದ ಕಲಾ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಗದಗ ಜಿಲ್ಲೆಯಿಂದ 10 ಜನ ಪರಿಶಿಷ್ಟ ಜಾತಿ ಹಾಗೂ 04 ಜನ ಪರಿಶಿಷ್ಟ ಪಂಗಡ ಈ ಪ್ರಕಾರ ಒಟ್ಟು 14 ಜನ ಯುವಕ/ ಯುವತಿಯರನ್ನು ಗುರುತಿಸಿ ಗದಗ ಜಿಲ್ಲೆಯಿಂದ ಪಟ್ಟಿಯನ್ನು ಕಳುಹಿಸಿಕೊಡಲು ನಿರ್ದೇಶಿಸಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಜನವರಿ 30 ರೊಳಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಯುವಕ/ಯುವತಿಯರ ವಯಸ್ಸು 15-29 ವರ್ಷಗಳಿಗೆ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ನಿಗಧಿತ ನಮೂನೆಯಲ್ಲಿ ವಿವರವನ್ನು ನೀಡುವುದು.

ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. (ಹೆಸರು, ಖಾತೆ ಸಂಖ್ಯೆ, ಐ.ಎಫ್. ಎಸ್.ಸಿ. ಕೋಡ್ ಇರುವ ಪುಟ) ಶಿಬಿರಾರ್ಥಿಗಳು ಭಾವಚಿತ್ರವುಳ್ಳ ಆಧಾರ ಸಂಖ್ಯೆ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು.

ಯುವಜನಮೇಳ ಮತ್ತು ಯುವಜನೋತ್ಸವ ಕಾರ್ಯಕ್ರಮಗಳಿಗೆ ಆಳವಡಿಸಲಾಗಿರುವ ಕಾರ್ಯಕ್ರಮಗಳಿಗೆ ಅನುಗುಣವಾಗಿ ಜಾನಪದ ಪ್ರಕಾರಗಳಿಗೆ ಶಿಬಿರವನ್ನು ಏರ್ಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಇವರ ಕಛೇರಿ ದೂರವಾಣಿ ಸಂಖ್ಯೆ 0831-2950306ರ ಮೂಲಕ ಸಂಪರ್ಕಿಸಬಹುದಾಗಿದೆ.

Related Post

Leave a Reply

Your email address will not be published. Required fields are marked *