ಗ್ರಾಮ ಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ
ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯಲ್ಲಿ ಸೇರ್ಪಡೆಗೆ ಅವಕಾಶ.
ಪ್ರಧಾನಮಂತ್ರಿ ಮತ್ ಸಂಪದ ಯೋಜನೆಯಡಿ ಅರ್ಜಿ
ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಪ್ರಧಾನಮಂತ್ರಿ ಮತ್ತ್ವವಾಹಿನಿ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಪರಿಸರ ಸ್ನೇಹಿ ಕಿಯೋಸ್ಕ ಮೀನು ಮಾರಾಟಕ್ಕಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು 1 ಲಕ್ಷ, ಪರಿಶಿಷ್ಟ ಜಾತಿ, ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು 50 ಸಾವಿರ ರೂ.ಗಳ ಭದ್ರತಾ ಠೇವಣಿ ನೀಡಿ ಮಾಸಿಕ 3 ಸಾವಿರ ರೂ. ಬಾಡಿಗೆ ಆಧಾರದ ಮೇಲೆ ನೀಡಲಾಗುವುದು. ಆಸಕ್ತ ಮೀನುಗಾರರು, ಮೀನುಗಾರರ ಸಹಕಾರ ಸಂಘಗಳು, ಮೀನುಗಾರ ರೈತ ಉತ್ಪಾದಕರ ಸಂಘಗಳು ಮಾರ್ಚ 25 ರೊಳಗಾಗಿ ಮೀನುಗಾರಿಗೆ ಸಹಾಯಕ ನಿರ್ದೇಶಕರು ಬಾದಾಮಿ (8095303104) (7411121617) ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಸಿರಿಧಾನ್ಯಗಳ ಪ್ರೋತ್ಸಾಹಕ್ಕಾಗಿ 25ಕೋಟಿ ವೆಚ್ಚದಲ್ಲಿ ಸಿರಿಧಾನ್ಯ ಉದ್ಯಾನವನ ಸ್ಥಾಪನೆ
ರಾಯಚೂರು ಜಿಲ್ಲೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯಗಳ ಸಂಶೋಧನಾ ಪ್ರಯೋಗಾಲಯ ಸ್ಥಾಪನೆ. ಸಿರಿಧಾನ್ಯಗಳ ಬೀಜ ಕೇಂದ್ರ ಸ್ಥಾಪನೆ ಹಾಗೂ ಸಿರಿಧಾನ್ಯಗಳ ಮೌಲವರ್ಧನೆ ಸಂಕೀರ್ಣವನ್ನು ಆದಷ್ಟು ಬೇಗ ಸ್ಥಾಪನೆ ಮಾಡಿ ಉದ್ಘಾಟಿಸಿ ರೈತರಿಗೆ ಅನುಕೂಲವಾಗಬೇಕು ಎಂದು ಕೃಷಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಹೇಳಿದರು. ಶುಕ್ರವಾರ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಮೌಲ್ಯ ಸರಪಳಿ ಉದ್ಯಾನದ ಶಂಕುಸ್ಥಾಪನೆಯನ್ನು ವರ್ಚುವಲ್ ಮುಖಾಂತರ ನೆರವೇರಿಸಿ ಮಾತನಾಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯಗಳ ಪ್ರೋತ್ಸಾಹಕ್ಕಾಗಿ ಸಿರಿಧಾನ್ಯ ಉದ್ಯಾನವನ್ನು 25ಕೋಟಿ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು ಇದರಿಂದ ಜಿಲ್ಲೆಯ ಜನರಿಗೆ ಹಾಗೂ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ರೈತರಿಗೆ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಹೆಚ್ಚಿಸಲು ಹಾಗೂ ಮೌಲ್ಯವರ್ಧನೆ ಮತ್ತು ಬ್ರಾಂಡಿಂಗ್ ಮಾರುಕಟ್ಟೆ ವಿಸ್ತರಣೆಗೆ ವಿಶ್ವವಿದ್ಯಾಲಯ ಹಾಗೂ ಸರ್ಕಾರದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು. ಇದೇ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಎನ್.ಎಸ್ ಬೋಸರಾಜು ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕೃಷಿ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರದಿಂದ ಕಾರ್ಯ ನಿರ್ವಹಿಸಲಾಗುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಸಿರಿಧಾನ್ಯಗಳ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ಸಿರಿಧಾನ್ಯಗಳ ಉದ್ಯಾನವನ್ನು ಸ್ಥಾಪಿಸಲಾಗುತ್ತಿದ್ದು, ರೈತರ ಉಪಯೋಗಕ್ಕಾಗಿ ನಡೆಸುವ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ. ಹನುಮಂತಪ್ಪ, ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ಮಲ್ಲಿಕಾರ್ಜುನ, ಸಂಶೋಧನಾ ನಿರ್ದೇಶಕ ಡಾ.ಬಿ.ಕೆ ದೇಸಾಯಿ, ರಿಜಿಸ್ಟ್ರಾರ್ ಎಂ.ವೀರನಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ : 27,067 ಹೊಸ ಉದ್ಯೋಗ ಸೃಷ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (295) 635 ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ. ಉತ್ತರ ಕರ್ನಾಟಕದ ವಿಜಯಪುರ. ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಜ್ಞಾನ್ ಇನ್ನೊಕಾಂ ಮ್ಯಾನುಫ್ಯಾಕ್ಟರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಫೋನ್ ತಯಾರಿಕಾ ಘಟಕ ಜನರಿಗೆ ಎಂದು ಆರಂಭಿಸಲಿದೆ. ಇದರಿಂದ 21723 ಉದ್ಯೋಗಗಳು ದೊರೆಯಲಿವೆ. ಅವರು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.
ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು : ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ ಎಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್. ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.