Breaking
Tue. Dec 17th, 2024

ಏಪ್ರಿಲ್ 1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ, ಬರದಲ್ಲಿ ಸಿಕ್ಕ ಸರ್ಕಾರಿ ಭಾಗ್ಯ

Spread the love

ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ) ಸಂತೋಷಕುಮಾರ್ ಪಾಟೀಲ ಅಭಿಪ್ರಾಯಪಟ್ಟರು.

https://bhoomisuddi.com/mahatma-gandhi-national-employment-guarantee-scheme/

ನಗರದ ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ ಪಿಡಿಓ, ಕಾಯಕಬಂಧು ಹಾಗೂ ನರೇಗಾ ಸಿಬ್ಬಂದಿಯ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬರಗಾಲದ ತೀವ್ರತೆಯಿಂದ ಕೆಲಸ ಸಿಗದಿರುವ ಆತಂಕದಲ್ಲಿರುವ ಗ್ರಾಮೀಣ ಪ್ರದೇಶ ಕೂಲಿಕಾರರಿಗೆ ನೆರವಾಗಲೆಂದು ಎಪ್ರೀಲ್-1 ರಿಂದ ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಇದ್ದೂರಲ್ಲೇ ನರೇಗಾ ಕೆಲಸ ಕೊಡುತ್ತಿರುವುದು ಗ್ರಾಮೀಣ ಪ್ರದೇಶದ ಜನರ ಗುಳೆ ತಪ್ಪಿಸುವ ಕೆಲಸವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನರೇಗಾ ಯೋಜನೆ ಮಹತ್ವದ ಪಾತ್ರವಹಿಸಿದೆ.

ಯೋಜನೆಯಡಿ ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ. ನರೇಗಾ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಸೇರಿಸುವ ಕೆಲಸವಾಗಬೇಕೆಂದು ತರಬೇತಿಯಲ್ಲಿ ಭಾಗವಹಿಸಿದ್ದ ಕಾಯಕಬಂಧುಗಳಿಗೆ ಕಿವಿಮಾತು ಹೇಳಿದರು. ಕುರಿತು ತಾಂತ್ರಿಕ ಸಂಯೋಜಕ ಹನಮಂತ ಡಂಬಳ ವಿಷಯ ಮಂಡಿಸಿದರು. ತರಬೇತಿ ಕಾರ್ಯಾಗಾರವನ್ನು ಸಸಿಗೆ ನೀರೂಣಿಸುವ ಮೂಲಕ ಸಂತೋಷಕುಮಾ‌ರ್ ಪಾಟೀಲ್, ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ, ಆನಂದ ಭೋವಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ತಾಲೂಕು ಪಂಚಾಯತ ನರಗುಂದ ಅವರು ಜಂಟಿಯಾಗಿ ಉದ್ಘಾಟಿಸಿದರು.

402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ

ಮೇ 8 ರಂದು ನಿಗದಿಯಾಗಿದ್ದ 402 PSI(Police Sub Inspector) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. 402 PSI ಹುದ್ದೆಗಳ ನೇಮಕಾತಿಗೆ ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ತಿಳಿಸಿದೆ.

ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ0ಣ ಪ್ರಕಟಿಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ವಸತಿ ನಿಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 2024-25ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ website:https://sevasindhuservices.Karnataka.gov.in ಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ವಸತಿ ಶಾಲೆಗಳಲ್ಲಿ ಶೇ.50ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರಿಸಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್‌ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾಧ ಭವನ, ಜಿಲ್ಲಾ ಪಂಚಾಯತ್, ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ವಿಸ್ತರಣಾಧಿಕಾರಿ ಮೊ: 9900229780, ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆ 8971459683, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ: 9980952960 ಹಾಗೂ ಚಡಚಣ ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಮೊ: 9620828185, ಶಾಲೆ ಅಫಜಲಪುರ ಟಕ್ಕೆ ಪ್ರಾಂಶುಪಾಲ ಮೊ: 8310830407, ಮುದ್ದೇಬಿಹಾಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮೊ: 9844493306.

Agri jobs

Related Post

Leave a Reply

Your email address will not be published. Required fields are marked *