ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ನೀವೇ ಬೆಳೆ ಸಮೀಕ್ಷೆ ಮಾಡಿ, ಅಪ್ಲೋಡ್ ಮಾಡಿ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿ ದಾಖಲಾದಲ್ಲಿ ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಖರೀದಿ ಕೇಂದ್ರದಲ್ಲಿ ಉತ್ಪನ್ನ ನೀಡಲು ಮತ್ತು ಬೆಳೆ ಸಾಲ ಪಡೆಯಲು ತೊಂದರೆಯಾಗುವುದಿಲ್ಲ. ಬೆಳೆ ಸಮೀಕ್ಷೆ ಪ್ರಕಾರ ದಾಖಲಾದ ಬೆಳೆ ವಿವರ ನಿಮ್ಮ ಪಹಣಿಯಲ್ಲಿ ನಮೂದಾಗುತ್ತದೆ. ಇಂದೇ ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಿ. ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ.
https://play.google.com/store/apps/details?id=com.csk.farmer23_24.cropsurvey
ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.
https://youtu.be/12y0D8uyTMs ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು ಬೆಳೆ ದರ್ಶಕ 2023 ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. https://play.google.com/store/apps/details?id=com.crop.offcskharif_2021
ಬೆಳೆ ಸಮೀಕ್ಷೆಗೆ ಬಳಸುವ ಬೆಳೆ ಕೋಡ್ ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.
https://drive.google.com/file/d/1BMliO5N8g3eJYOQ7wb6k4jdi3IbHKZoH/view
ಬ
ೆಳೆ ಸಮೀಕ್ಷೆಯನ್ನು ರೈತರೇ ಮಾಡಿಕೊಳ್ಳುವ ಆಪ್ ಬಿಡುಗಡೆ ಆಗಿದೆ. ರೈತರು ತಮ್ಮ ಹೊಲಗಳಲ್ಲಿ ಏನೇನು ಬೆಳೆದಿದ್ದಿರಿ ಎಂಬುದನ್ನು ಸರ್ವೇ ಮಾಡಿಕೊಳ್ಳಬೇಕು.. ಒಂದು ವೇಳೆ ನಿಮಗೆ ಗೊತ್ತಾಗದೆ ಇದ್ದರೆ ನಿಮ್ಮ ಗ್ರಾಮದ PR(ಖಾಸಗಿ ನಿವಾಸಿ(Private Resident) ಗಳನ್ನು ಸಂಪರ್ಕಿಸಿ ಸರ್ವೇ ಮಾಡಿಸಿಕೊಳ್ಳಬಹುದು.
ಈ ರೈತರ ಆಪ್ ಕೇವಲ 15 ದಿವಸಗಳು ಮಾತ್ರ ಇರಲಿದ್ದು ಬೇಗನೆ ತಮ್ಮ ತಮ್ಮ ಹೊಲಗಳನ್ನು ಸರ್ವೇ ಮಾಡಿಕೊಳ್ಳಿರಿ. 15 ದಿನಗಳ ನಂತರ PR ಆಪ್ ಬಿಡುಗಡೆ ಯಾಗಲಿದ್ದು ಅವರು ಹೊಲ ಗಳಲ್ಲಿ ಹೋಗಿ ಸರ್ವೇ ಮಾಡುವಾಗ ಸರ್ವೇ ಸರಿಯಾಗಿ ಆಗಿಲ್ಲ ಎಂಬ ಮಾತುಗಳು ಬೇಡ.
28.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮತ್ತು ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಕೊಡಗು ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಲಕ್ಷಣಗಳಿದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಈಗ ರಾಜ್ಯದ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುತ್ತಿದ್ದು, ಜುಲೈ 1 ಅಥವಾ 2 ರಿಂದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆದರೂ ಪರಿಸ್ಥಿತಿ ಬದಲಾಗಬಹುದು. ಕಾದು ನೋಡಬೇಕಾಗಿದೆ.
27.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಾಗಲೇ ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
26.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಪ್ರಕಾರ ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.
25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ.* ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.