Breaking
Tue. Dec 17th, 2024
Spread the love

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ. ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳ – 2024, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ.

ಸ್ಥಳ : ಕೃಷಿ ಮಹಾವಿದ್ಯಾಲಯ ಆವರಣ, ನವುಲೆ, ಶಿವಮೊಗ್ಗ, October 18 ಶುಕ್ರವಾರ,19 ಶನಿವಾರ, 20 ಭಾನುವಾರ, 21ಸೋಮವಾರ.

15.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 16,17 ಹಾಗೂ 18ರಂದು ಭಾರಿ ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಮಟ್ಟಿಗೆ ಕಡಿಮೆಯಾದರೂ 21ರಿಂದ ಗುಡುಗು ಮಳೆಯೊಂದಿಗೆ ಹಿಂಗಾರು ಅರಂಭವಾಗುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 16,17 ಹಾಗೂ 18ರಂದು ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಿಮೆಯಾದರೂ 21ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಕ್ಟೊಬರ್ 17ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಒಕ್ಟೊಬರ್ 16 ಹಾಗೂ 17ರಂದು ಭಾರಿ ಮಳೆಯ ಮುನ್ಸೂಚೆನೆ ಇದೆ. 18 ರಿಂದ ಕಡಿಮೆಯಾದರೂ, ಉತ್ತರ ಒಳನಾಡು ಭಾಗಗಳಲ್ಲಿ 19 ಅಥವಾ 20 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ 21ರಿಂದ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚೆನೆ ಇದೆ.

14.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗಳ ಪರಿಣಾಮ ಒಕ್ಟೊಬರ್ 14ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಒಕ್ಟೊಬರ್ 16,17ರಂದು ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ (ವಾಯುಭಾರ ಕುಸಿತ ಹಾದು ಹೋಗಲಿರುವುದರಿಂದ).

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 17ರಂದು ದಕ್ಷಿಣ ಕರ್ನಾಟಕದ ಮೂಲಕ ಹಾದುಹೋಗುವ ನಿರೀಕ್ಷೆ ಇದ್ದು, ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಕ್ಟೊಬರ್ 17ರಂದು ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಒಕ್ಟೊಬರ್ 16,17 ಹಾಗೂ 18ರಂದು ಆಂದ್ರಾ ಕರಾವಳಿ ಮೂಲಕ ಪ್ರವೇಶಿಸಿ, ದಕ್ಷಿಣ ಕರ್ನಾಟಕದ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಇದರಿಂದ ಗಾಳಿಯೊಂದಿಗೆ ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ. (ಪಥ ಬದಲಾದರೆ ಮಳೆಯ ಪ್ರಮಾಣ ಬದಲಾಗಬಹುದು).

13.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಡಲ ತೀರ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಒಕ್ಟೊಬರ್ 14ರಿಂದ ಹಿಂಗಾರು ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡು ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಹಿಂಗಾರು ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಒಕ್ಟೊಬರ್ 14ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಹಾವೇರಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 17ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ, ತಮಿಳುನಾಡು ಕರಾವಳಿಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಒಕ್ಟೊಬರ್ 16ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿವೆ. ರಾಜ್ಯದಲ್ಲೂ ಇದರ ಪ್ರಭಾವದಿಂದ ಭಾರಿ ಮಳೆಯ ನಿರೀಕ್ಷೆ ಇದೆ.

12.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ (ಪಶ್ಚಿಮದ ಮೋಡದಿಂದ). ಕಡಲ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ( ಪೂರ್ವದ ಮೋಡದಿಂದ) ಸ್ವಲ್ಪ ಜಾಸ್ತಿ ಇರಬಹುದು. ಮಂಗಳೂರು ಹಾಗೂ ಉಡುಪಿ ಕಡಲ ತೀರ ಭಾಗಗಳಲ್ಲಿ ಸಹ ಸ್ವಲ್ಪ ಜಾಸ್ತಿ ಇರಬಹುದು (ಪಶ್ಚಿಮದ ಮೋಡದಿಂದ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ (ಪೂರ್ವದ ಮೋಡದಿಂದ).
ಈಗಿನಂತೆ ಒಕ್ಟೊಬರ್ 15 ರಿಂದ 17ರ ತನಕ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಭಾರಿ ಮಳೆಯ ಮುನ್ಸೂಚೆನೆ ಇದೆ. (ಬದಲಾಗಬಹುದು)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತವಾಗಿ ಭಾರಿ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಕ್ಟೊಬರ್ 15 ಹಾಗೂ 16ರಂದು ಭಾರಿ ಮಳೆಯ ಸಾಧ್ಯತೆ ಇದೆ. (ಬದಲಾಗಬಹುದು)

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಪೂರ್ವದ ಮೋಡದಿಂದ).
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ( ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಕ್ಟೊಬರ್ 15 ಹಾಗೂ 16ರಂದು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಭಾರಿ ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. ಕಾದುನೋಡಬೇಕಾಗಿದೆ.

1

1.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಬೆಳಗಾವಿ, ಧಾರವಾಡ, ಶಿವಮೊಗ್ಗ ಗಡಿ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಂಗಳೂರು, ಉಡುಪಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಾದು ನೋಡಬೇಕಾಗಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಅನಿರೀಕ್ಷಿತ ಭಾರಿ ಮಳೆಯು ಮುನ್ಸೂಚನೆಗೆ ಸಿಗುತ್ತಿಲ್ಲ. (ನಿನ್ನೆಯ ರೀತಿ).
ಈಗಿನಂತೆ ವಾಯುಭಾರ ಕುಸಿತಗಳ ಪರಿಸ್ಥಿತಿ ಅವಲೋಕಿಸಬೇಕಿದೆ.

ಒಳನಾಡು : ಉತ್ತರ ಒಳನಾಡಿನ ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ ( ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ ಜಿಲ್ಲೆಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.

ಈಗಾಗಲೇ ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ ಮತ್ತು ಅದು ಪಶ್ಚಿಮಾಭಿಮುಖವಾಗಿ ಚಲಿಸಿ ಒಕ್ಟೊಬರ್ 13ರ ಸುಮಾರಿಗೆ ಓಮನ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

1

0.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇದ್ದರೆ, ದಕ್ಷಿಣ ಕನ್ನಡದ ಸುಳ್ಯ, ಕಡಬ ಭಾಗಗಳಲ್ಲಿ ಕಡಿಮೆ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.
ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು

ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತವು ಒಕ್ಟೊಬರ್ 12ರ ಸುಮಾರಿಗೆ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅದು ಆ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.

0

9.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಜಾಸ್ತಿಯೇ ಇರಬಹುದು. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಿನ ಬಿಟ್ಟು ದಿನ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ಗುಡುಗು ಸಹಿತ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ( ಅಥಣಿ ಸಹಿತ), ಗದಗ, ದಾವಣಗೆರೆ, ಬಳ್ಳಾರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಿನ ಬಿಟ್ಟು ದಿನ ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ಎರಡರ ಪರಿಣಾಮ ಕಾದು ನೋಡಬೇಕಾಗಿದೆ.

0

8.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಕ್ಟೊಬರ್ 9, 10 ರಂದು ಸ್ವಲ್ಪ ಕಡಿಮೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಕಾಣಿಸುತ್ತಿದೆ. ನಡುವೆ ಒಂದೆರಡು ದಿನ ಕಡಿಮೆ ಇರಬಹುದು.

ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ನಿಧಾನ ಗತಿಯಲ್ಲಿದೆ ಮತ್ತು ಹೆಚ್ಚೇನ ಒತ್ತಡವೂ ಇಲ್ಲದಿರುವುದರಿಂದ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಗಾಳಿ ಅಥವಾ ಮಾರತಗಳ ಚಲನೆಯ ದಿಕ್ಕು ನಿರ್ದಿಷ್ಟವಾಗಲ್ಲದಿರುವುದರಿಂದ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗುತ್ತಿದೆ.
ಈ ಅನಿಶ್ಚಿತತೆ ಹಿಂಗಾರು ಆರಂಭವಾಗುವ ತನಕವೂ ಮುಂದುವರಿಯುವ ಸಾಧ್ಯತೆ ಇದೆ.

0

7.10.2024ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 12ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಕ್ಟೊಬರ್ 15ರ ತನಕ ಉತ್ತರ ಕನ್ನಡ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಗದಗ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರಿನ ಒಂದೆರಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಕ್ಟೊಬರ್ 10ರ ನಂತರದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಸ್ವಷ್ಠತೆ ಇನ್ನಷ್ಟೇ ದೊರೆಯಬೇಕಿದೆ.

0

6.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಕ್ಟೊಬರ್ 11ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಹಾಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ವಾಯುಭಾರ ಕುಸಿತ : ಈಗಿನಂತೆ ಒಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

0

5.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಪಶ್ಚಿಮದ ಮೋಡದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಲ್ಲಲ್ಲಿ ದಿನಕ್ಕೊಂದು ಮಳೆ ಯತೆ ಒಕ್ಟೊಬರ್ 13ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ದಾವಣಗೆರೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸೂಚನೆಗಳಿವೆ.

ಈಗಿನ ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.

0

4.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 4ರಿಂದ ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಒಕ್ಟೊಬರ್ 10ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 4ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಒಕ್ಟೊಬರ್ 8ರ ತನಕ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕೆಲವು ಭಾಗಗಳಲ್ಲಿ ಸಾಮಾನ್ಯ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ
ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಸೃಷ್ಠಿಯಾಗಿದೆ. ಹಿಂಗಾರು ಆರಂಭ ವಿಳಂಬವಾಗಲಿದೆ.

0

3.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಹಾಗೂ ಗುಡುಗಿನ ಸಾಧ್ಯತೆ ಇದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಹಾಗೂ ಗುಡುಗಿನೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಒಕ್ಟೊಬರ್ 6ರಿಂದ ಅಲ್ಲಲ್ಲಿ ಮಳೆಯಗುವ ಲಕ್ಷಣಗಳಿವೆ. ಒಕ್ಟೊಬರ್ 9ರ ನಂತರ ಒಣ ಹವೆ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಕ್ಟೊಬರ್ 6ರ ತನಕ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸಧ್ಯಕ್ಕೆ ಹಿಂಗಾರು ಆರಂಭವಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

0

2.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 2 ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೀದರ್ ಹಲವು ಭಾಗಗಳಲ್ಲಿ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ತುಮಕೂರು, ಚಿಕ್ಕಬಳ್ಳಾಪುರ ಬಹುತೇಕ ಭಾಗಗಳಲ್ಲಿ, ಚಿತ್ರದುರ್ಗದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.

01.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಸುಳ್ಯ ತಾಲೂಕು ಕೆಲವು ಭಾಗಗಳಲ್ಲಿ ಮುಂಜಾನೆಯೇ ಮಳೆಯಾದ್ದರಿಂದ ಮತ್ತೆ ಜೋರು ಮಳೆಯ ನಿರೀಕ್ಷೆ ಕಡಿಮೆಯಾಗಿದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ವಿಜಯಪುರದ ವಿಜಯಪುರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ.
ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿವಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ನಾಳೆಯಿಂದ ಅಂದರೆ ಒಕ್ಟೊಬರ್ 1ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.

Related Post

Leave a Reply

Your email address will not be published. Required fields are marked *