ಕೃಷಿ ಮೇಳ-2024 Krishi Mela-2024
ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು Agricultural technologies for management of climate change.
08.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. (ಮುನ್ಸೂಚನೆಯಲ್ಲಿ ಉಡುಪಿ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು) ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ತುಂತುರು ಮಳೆಗೆ ಸೀಮಿತವಾಗುವ ಲಕ್ಷಣಗಳಿವೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉತ್ತರ ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.
07.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ (ನಿರಂತರ) ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ (ನಿರಂತರ) ಮುಂದುವರಿಯುವ ಮುನ್ಸೂಚೆನೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಭಾರತದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನದ ಉತ್ತರ ಭಾಗಕ್ಕೆ ತಲಿಪಿದ್ದು ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ.
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದರೂ, ಗಾಳಿಯು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯು ಇನ್ನೂ 2 ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 8 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
06.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಮತ್ತು ಕಾಸರಗೋಡು ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಗಾಳಿ ಹಾಗೂ ಅಲ್ಲಲ್ಲಿ ಗುಡುಗು ಸಾಧ್ಯತೆ ಇದೆ. (ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆಯಾದ್ದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ)
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು. ಹಾಸನ ಪೂರ್ವ ಭಾಗಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ರಾಮನಗರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಇದರ ಪ್ರಭಾವದಿಂದ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ದುರ್ಬಲಗೊಂಡಿದೆ. ತಮಿಳುನಾಡಿನಲ್ಲಿ ಈಗ ಆಗುತ್ತಿರುವ ಮಳೆಯ ಪ್ರಭಾವದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ 6ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.
ರೈತ ಸಂಘದ ಹೋರಾಟಕ್ಕೆ ಸಿಕ್ಕ ಜಯ
ವಿಜಯಪುರ ಜಿಲ್ಲೆಯ ಅಥರ್ಗಾಗ್ರಾಮದಯುವ ರಾಜ ನಿಂಬರಗಿಯ ಗ್ರಾಮ ಆಡಳಿತ ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂದು ಹೋರಾಟ ಹಮ್ಮಿಕೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಗ್ರಾಮ ಲೆಕ್ಕಾಧಿಕಾರಿಯಾದ ಯುವರಾಜ ನಿಂಬರಗಿಯನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಇದುರೈತರ ಸಂಘ, ಜೈಜವಾನ್ ಜೈಕಿಸಾನ್ ಭಾರತ ಮಾತೆಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿದರ ಹಿನ್ನೆಲೆಗ್ರಾಮ ಲೆಕ್ಕಾಧಿಕಾರಿಗೆ ಅಮಾನತ್ತು ಮಾಡಿರುವುದು ಸಂಘ ಹಮ್ಮಿಕೊಂಡ ಹೋರಾಟದ ಜಯವಾಗಿದೆಎಂದು ಹರ್ಷ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಕಛೇರಿಗೆ ತೆರಳಿ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿರುವ ಹಿನ್ನೆಲೆಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆಧನ್ಯವಾದ ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಸರ್ಕಾರಿ ಸೇವೆ ಸಲ್ಲಸುವವರು ಎಂತಹ ವ್ಯಕ್ತಿಯೊಂದಿಗೆ ಮಾತನಾಡಬೇಕೆಂದು ಅವರಿಗೆ ಗೌರವದೊಂದಿಗೆ ಮಾತನಾಡಬೇಕು. ಅಮಾನತ್ತು ಗೊಂಡಗ್ರಾಮ ಲೆಕ್ಕಾಧಿಕಾರಿ ಅಧಿಕಾರಿಯ ಅಮಲಿನಲ್ಲಿ ಅವರಿವರೆನ್ನದೇ ಎಲ್ಲರಿಗೂ ಅವಾಚ್ಯ ಶಬ್ದದಿಂದ ನಿಂದಿಸಿ ತಮಗೆ ಬೇಕಾಬಿಟ್ಟಿಯಾಗಿ ಕೆಲಸ ಕಾರ್ಯನಿರ್ವಹಿಸುವ ಇಂತಹಅಧಿಕಾರಿ ಸರ್ಕಾರಿ ಕೆಲಸಕ್ಕೆ ಹಾಗೂ ಇನ್ನೂಳಿದ ಅಧಿಕಾರಿಗಳಿಗೆ ಕಳಂಕ ತಂದಂತಾಗುತ್ತದೆ ಎಂದು ರಾಜ್ಯಾಧ್ಯಕ್ಷ ಮೋತಿರಾಮ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಸುನಿತಾಕೋತ, ಜಿಲ್ಲಾಧ್ಯಕ್ಷರಾದ ವಿಜಯ ಕುಮಾರರಾಠೋಡ ಮಾತನಾಡಿ, ಸರ್ಕಾರಿ ಕೆಲಸ ಮಾಡುವವರು ಎಲ್ಲ ವರ್ಗದವರನ್ನು ಗೌರವಯುತವಾಗಿ ಕಾಣಬೇಕು. ದೇಶದ ಬೆನ್ನೆಲು ಬಾಗಿರುವ ರೈತರನ್ನು ಕೀಳಾಗಿ ಕಾಣಬಾರದು ಹಾಗೂ ರೈತರ ಕೆಲಸಕ್ಕೆ ಸರಳ ರೀತಿಯಲ್ಲಿ ಮಾಡಿಕೊಡಬೇಕು. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿ ಕೆಲಸ ಮಾಡಬೇಕು. ಒಂದು ವೇಳೆ ಅಧಿಕಾರಿಗಳು ಸರಿಯಾಗಿ ಕೆಲಸ ಕಾರ್ಯನಿರ್ವಹಿಸದಿದ್ದರೆ ನಾವು ಹೋರಾಟದ ಮೂಲಕ ಎಚ್ಚರಿಕೆ ಮಾಡಬೇಕಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಇಂಡಿ ತಾಲೂಕಿನ ಅಧ್ಯಕ್ಷರ ಜಾಕಸಾಬ ಬಾದಶಾಸಾಬ ಮಕಾನದಾರ ಮಾತನಾಡಿ, ಸರ್ಕಾರಿ ಕೆಲಸಕ್ಕಾಗಿ ಬಂದ ರೈತರನ್ನು ಅಡಚನೆ ಮಾಡದೇ ಅವರು ಕೆಲಸ ಮಾಡಬೇಕು. ಕೆಲವು ಅಧಿಕಾರಿಗಳು ಬೇಸತ್ತುಕೊಂಡು ಕಾರ್ಯ ಮಾಡುತ್ತಿದ್ದಾರೆ. ತಕ್ಷಣ ಎಲ್ಲ ಸರ್ಕಾರಿಗಳು ಸಾರ್ವಜನಿಕರಿಗೆ ತೊಂದರೆ ನೀಡದೇ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು ಇರದಿದ್ದರೆ ಸರ್ಕಾರಿ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಂಡು ತಕ್ಕ ಪಾಠ ಕಲಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫಿಜಿಯೋಥೆರಪಿಸ್ಟ್, ಆಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ
2024-25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮದ್ಯವರ್ತನೆಯ ಕಾರ್ಯಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೊಸಪೇಟೆ ತಾಲ್ಲೂಕಿನಲ್ಲಿ ವಿಕಲಚೇತನ ಮಕ್ಕಳಿಗೆ ಫಿಜಿಯೋಥೆರಪಿ ಮತ್ತು ಆಯಾ ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಫಿಜಿಯೋಥೆರಪಿಸ್ಟ್ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಇನ್ ಫಿಜಿಯೋಥೆರಪಿಯಲ್ಲಿ ಪದವಿ ಪಡೆದಿರಬೇಕು.
ಆಯಾ ಹುದ್ದೆಗೆ ಕನಿಷ್ಠ 7ನೇತರಗತಿ ಉತ್ತೀರ್ಣರಾಗಿರಬೇಕು. ಆಸಕ್ತರು ಆಗಸ್ಟ್ 7ರೊಳಗೆ ಹೊಸಪೇಟೆಯ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿ.ಆರ್.ಸಿ)ದಲ್ಲಿ ಅರ್ಜಿ ಖುದ್ದಾಗಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಅಂಚೆಯ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಆಗಸ್ಟ್ 8 ರಂದು ಹೊಸಪೇಟೆಯ ಬಿ.ಆರ್.ಸಿ. ಕೇಂದ್ರದಲ್ಲಿ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಸಂದರ್ಶನದ ಭೇಟಿಗೆ ಯಾವುದೇ ಸಾರಿಗೆ ಭತ್ಯೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9480695078 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕ್ಷೇತ್ರ ಸಮನ್ವಯಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಷ್ಯವೇತನಕ್ಕೆ ಅರ್ಜಿ ಅಹ್ವಾನ
ಪ್ರಸಕ್ತ ಸಾಲಿನ ಮಿಲಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯ ಸೈನಿಕರ ಮಕ್ಕಳು ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತರು ಕಾರ್ಯಾಲಯದಿಂದ ಅರ್ಜಿ ಪಡೆದು ಭರ್ತಿಮಾಡಿದ ಅರ್ಜಿಯನ್ನು ದಿ:30-09-2024 ರೊಳಗಾಗಿ ಸೈನಿಕ ಕಲ್ಯಾಣ ದೂರವಾಣಿ:0831-2950293 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಶೇ. 90 ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಹೆಣ್ಣು ಹಾಗೂ ಗಂಡು ಮಕ್ಕಳಿಗಾಗಿ ಜನರಲ್ ಕೆ ಎಸ್ ತಿಮ್ಮಯ್ಯ ನಗದು ಪ್ರಶಸ್ತಿಯನ್ನು ನೀಡಲು ಉದ್ದೇಸಿಶಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾಜಿ ಸೈನಿಕರ ಹೆಣ್ಣು ಹಾಗೂ ಗಂಡು ಮಕ್ಕಳು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು 30-11-2024 ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ 0831-2950293 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ- 3ಎ ನಲ್ಲಿ ಸೇರಿದ ಒಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ, ಗಂಗಡ್ಗಾರ್, ದಾಸ್ ಒಕ್ಕಲಿಗ, ರೆಡ್ಡಿ, ಮರಸು, ಗೌಡ, ವಕ್ಕಲಿಗ, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ಗೌಂಡರ್, ನಾಮಧಾರಿಗೌಡ ಒಕ್ಕಲಿಗ, ಉಪ್ಪಿನ ಹಾಗೂ ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಾಲ್ಯಾಣ ನೀರಾವರಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಆಗಸ್ಟ್ 30 ರೊಳಗಾಗಿ http://sevasindhu.karnataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ http://kvcdc.karnataka.gov.in
ಅಥವಾ ನಿಗಮದ ಮೊಬೈಲ್ ಸಂಖ್ಯೆ 080-29904350,29904268, 0831-2402163 ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 10 ರಂದು ಉದ್ಯೋಗ ಮೇಳ
ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಮೈಸೂರಿನ ಮಾನಸಗಂಗೋತ್ರಿಯ ಜೆ.ಎಸ್.ಎಸ್ ವಿಕಲಚೇತನರ ಪಾಲಿಟೆಕ್ನಿಕ್ ಜೆ.ಎಸ್.ಎಸ್ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಆಗಷ್ಟೆ.10 ರಂದು ಬೆಳಗ್ಗೆ 9 ಗಂಟೆಗೆ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರ ಪಾಟೀಲ ದೂರವಾಣಿ:9480812121 (placements@samarthanam.org) ಹಾಗೂ ಸುಭಾಷ ದೂ:9449864693 (centerhead Bangalore@samarthanam. org) ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಡಳಿತಾತ್ಮಕ ಪರೀಕ್ಷೆಗಳಿಗಾಗಿ ಉಚಿತ ತರಬೇತಿ
ಕರ್ನಾಟಕ ಆರ್ಯು ವೈಶ್ಯ ಬೆಂಗಳೂರು ಇವರ ವಾಸವಿ ಅಕಾಡೆಮಿ ಇವರ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಸವಿ ಅಕಾಡೆಮಿಯು ಕೇಂದ್ರ ಲೋಕಸೇವಾ ಆಯೋಗ ಐ.ಪಿ.ಎಸ್., ಐ.ಎ.ಎಸ್. ಇತ್ಯಾದಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಆಡಳಿತಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯವನ್ನು ಮಾಡಿಕೊಡಲಾಗುತ್ತದೆ.
ಬೆಂಗಳೂರು ನಗರದ ವಿಜಯನಗರ ಬಡಾವಣೆಯಲ್ಲಿರುವ ಚಂದ್ರಾಲೇಔಟ್‌ನಲ್ಲಿರುವ ಹೆಸರಾಂತ ಅಕಾಡೆಮಿಯ ಸಹಯೋಗದೊಂದಿಗೆ ಯುಪಿಎಸ್‌ಸಿ ತರಗತಿಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಯಾವುದೇ ಪದವೀಧರರು ಯುಪಿಎಸ್‌ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅವಕಾಶವಿದೆ. 2025ರಲ್ಲಿ ನಡೆಯುವ ಸಂಪೂರ್ಣವಾಗಿ ಉಚಿತವಾಗಿರುತ್ತವೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ ನಿಯಮಾನುಸಾರ ಪ್ರವೇಶವನ್ನು ಪಡೆಯಲು ಅವಕಾಶವಿದೆ. ಪ್ರವೇಶಾಸಕ್ತ ವಿದ್ಯಾರ್ಥಿಗಳು, ವಾಸವಿ ಅಕಾಡೆಮಿಯು ನಡೆಸುವ ಪ್ರವೇಶ ಮತ್ತು ಮೌಖಿಕ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತೀರ್ಣರಾಗಬೇಕಾಗುತ್ತದೆ.
ಹಲವಾರು ಮಾಜಿ ಹಾಗೂ ಹಾಲಿ ಐ.ಎ.ಎಸ್. ಅಧಿಕಾರಿಗಳಿಂದ ವಿಶೇಷ ಮಾರ್ಗದರ್ಶನ ನೀಡಲಾಗುತ್ತದೆ. ತರಬೇತಿಯ ಅವಧಿ 8 ತಿಂಗಳು ಅರ್ಜಿ ಸಲ್ಲಿಸಲು ಕೊನೆಯ ದಿ.25-08-2024 ಪ್ರವೇಶ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ದಿನಾಂಕ 01-09-2024 ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ವಾಸವಿ ಅಕಾಡೆಮಿ ನಡೆಸುವ ಯುಪಿಎಸ್‌ಸಿ ತರಗತಿಗಳಿಗಾಗಿ ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ ದೂರವಾಣಿ ಸಂಖ್ಯೆ: 9916116615, 966390043 https://forms.gle/DwKPA1RXrLXcXUpV8 ಬಡಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ಸಹ ಐಎಎಸ್ ಹಾಗೂ ಸಮಾನಂತರ ಪರೀಕ್ಷೆಗಳನ್ನು ಬರೆಯಲು ಈ ನಮ್ಮ ತರಗತಿಗಳು ಹೆಚ್ಚಿನ ಪರಿಣಾಮಕಾರಿಯಾಗಿರುತ್ತದೆ ಎಂದು ಪತ್ರಿಕೆಗಳ ಮೂಲಕ ತಿಳಿಸಿ ಆಸಕ್ತ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಲು ಜಿಲ್ಲಾ ನಿರ್ದೇಶಕ ಹರೀಶ ವಡವಡಗಿ, ಜಿಲ್ಲಾ ಅಧ್ಯಕ್ಷರಾದ ರಾಘವೇಂದ್ರ ಕಾಲವಾಡ, ಕಾರ್ಯದರ್ಶಿ ವೆಂಕಟೇಶ ಬೆಟದೂರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.