ರೈತ ಭಾಂದವರಲ್ಲಿ ವಿನಂತಿ, ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ. ಮಾಡಿಸಿಕೊಳ್ಳಬೇಕು. ಎಫ್.ಐ.ಡಿ. ಈಗಾಗಲೇ ಆಗಿದ್ದಲ್ಲಿ ನಿಮಗೆ ಸಂಬಂಧಿಸಿದ ಎಲ್ಲಾ ಸರ್ವೆ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ. ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಎಂದು ಖಾತೆದಾರರ ಪ್ರತ್ಯೇಕವಾಗಿ ಎಫ್.ಐ.ಡಿ. ಮಾಡಿಕೊಳ್ಳಬೇಕು.
ನಿಮಗೆ ಸಂಬಂಧಿಸಿದ ಎಲ್ಲಾ ಸ.ನಂಗಳನ್ನು ಎಫ್.ಐ.ಡಿ. ಮಾಡಿಸದಿದ್ದಲ್ಲಿ ಸರ್ಕಾರ ವತಿಯಿಂದ ಬರುವಂತಹ ಯಾವುದೇ ಪರಿಹಾರ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ. ಇದಕ್ಕೆ ನೀವೇ ಹೊಣೆಯಾಗಿರುತ್ತೀರಿ. ಆದ್ದರಿಂದ ಎಲ್ಲಾ ರೈತರು ನಿಮ್ಮ ಹೆಸರಿನಲ್ಲಿ ಎಲ್ಲಾ ಸ.ನಂ.ಗಳನ್ನು ಎಫ್.ಐ.ಡಿ. ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಕೋರಿದೆ.
ಎಫ್.ಐ.ಡಿ. ಮಾಡಿಸಿಕೊಳ್ಳಲು ಬೇಕಾದ ದಾಖಲಾತಿಗಳು :
1. ಆಧಾರ್ ಕಾರ್ಡ್
2. ಬ್ಯಾಂಕ್ ಪಾಸ್ ಪುಸ್ತಕ
3. RTC
4. ಮೊಬೈಲ್ ನಂ
FID – ಪಹಣಿ ಜೋಡಣೆ ಮಾಡುವುದು ಏಕೆ?
ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್. ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ಬೆಳೆ ನಷ್ಟ ಪರಿಹಾರ ವಿತರಿಸಲು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಯಾವುದೇ ಸವಲತ್ತುಗಳನ್ನು ಪಡೆಯಲು. ಸಬ್ಸಿಡಿಯಲ್ಲಿ ಬಿತ್ತನೆ ಬೀಜ ಮತ್ತು ಯಂತ್ರೋಪಕರಣಗಳನ್ನು ಪಡೆಯಲು. ಸರ್ಕಾರವು ರೈತರಿಗೆ ಕೊಡುವ ಯಾವುದೇ ಸಬ್ಸಿಡಿ, ಪ್ರೋತ್ಸಾಹ ಧನ ಮತ್ತು ಪರಿಹಾರಗಳನ್ನು ಪಡೆಯಲು.
ಬಹಳ ಮಾಹಿತಿಗಾಗಿ ಮಾತ್ರ ಓದಿ
ಜಿಲ್ಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವದರ ಜೊತೆಗೆ ಫೂಟ್ಟ ತಂತ್ರಾಂಶದ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ಶೀಘ್ರವೇ ರೈತರ ಜಮೀನುಗಳ ವಿವರ ಜೋಡಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ವೈಶಾಲಿ. ಎಂ.ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಜರುಗಿದ ಬರ ನಿರ್ವಹಣೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸಬೇಕು.
ಜಿಲ್ಲೆಯಲ್ಲಿ ಸಧ್ಯ ಕುಡಿಯುವ ನೀರಿನ ತೊಂದರೆ ಇರುವುದಿಲ್ಲ. ಆದರೂ ಕುಡಿಯುವ ನೀರಿನ ತೊಂದರೆಗೊಳಗಾಗಬಹುದಾದ ಗ್ರಾಮಗಳನ್ನು ಗುರುತಿಸುವಂತೆ ತಿಳಿಸಿದರು. ಯಾವುದೇ ಕಾರಣಕ್ಕೂ ಜಿಲ್ಲೆಯ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದ ರೆ ಆಗದಂತೆ ನಿಗಾವಹಿಸಬೇಕು. ಆಗತ್ಯ ಬಿದ್ದಲ್ಲಿ ಟ್ಯಾಂಕರ ಹಾಗೂ ಖಾಸಗಿ ಬೋರವೆಲಗಳನ್ನು ಗುರುತಿಸಿ ಸರ್ಕಾರದ ಮಾರ್ಗ ಸೂಚಿಗಳನ್ನಯ ಬಳಸಿಕೊಳ್ಳಲು ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮೇವು ಬ್ಯಾಂಕಗಳಲ್ಲಿ ಸಮರ್ಪಕ ಮೇವಿನ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ತಿಳಿಸಿದರು.
ರೈತರು ಸರಕಾರದ ಸೌಲಭ್ಯಗಳು ಹಾಗೂ ಸಹಾಯಧನ ಪಡೆಯಲು ರೈತರಿಗೆ ಸಂಬಂಧಪಟ್ಟ ಎಲ್ಲಾ ಜಮೀನುಗಳನ್ನು (ಫೂಟ್ಸ್ ತಂತ್ರಾಂಶ) ಎಫ್.ಐ.ಡಿ ಗೆ ಕಡ್ಡಾಯವಾಗಿ ಜೋಡಣೆ ಮಾಡಿಸಬೇಕಾಗಿದೆ. ಎಫ್. ಆಯ್.ಡಿ. ಜೋಡಣೆಯಲ್ಲಿ ಜಿಲ್ಲೆಯ ಪ್ರಗತಿಯು ಉತ್ತಮವಾಗಿದ್ದು ಬಾಕಿ ಉಳಿದ ಜಿಲ್ಲೆಯ ಎಲ್ಲ ರೈತರೂ ಪ್ರೊಟ್ಟ ತಂತ್ರಾಂಶದಲ್ಲಿ ತಮ್ಮ ಜಮೀನುಗಳ ವಿವರಗಳ ಜೋಡಣೆ ಕಾರ್ಯವು ಶೀಘ್ರವೇ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ತದನಂತರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳಿಂದ ಅನುಮೋದನೆ ಪಡೆದಂತಹ ಕಾಮಗಾರಿಗಳನ್ನು ಶೀಘ್ರವೇ ಪ್ರಾರಂಭಿಸಿ ಕಾಲಮಿತಿಯೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಿವಿಧ ಇಲಾಖೆಗಳಿಂದ ಒದಗಿಸಲಾಗುವ ಸಹಾಯಧನವನ್ನು ಫಲಾನುಭವಿಗಳಿಗೆ ಕಾಲಮಿತಿಯೊಳಗೆ ವಿತರಿಸಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಜರುಗಿಸಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ನಿಗಾವಹಿಸಬೇಕು. ಈಗಾಗಲೇ ಅನುಮೋದನೆಗೊಂಡಂತಹ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯವನ್ನು ಡಿಸೆಂಬರ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.
ಈ ಕಾರ್ಯದಲ್ಲಿ ವಿಳಂಭ ಧೋರಣೆ ಅಥವಾ ಉದಾಸೀನತೆ ತೋರಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುವದು. ಅಲ್ಲದೇ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು. ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಡಿ ದಾಖಲಾಗುವ ದೂರುಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಅವುಗಳ ಕಡೆ ಗಮನ ಹರಿಸಿ ಕಾಲಮಿತಿಯೊಳಗಾಗಿ ಸಮಸ್ಯೆಗಳ ನಿವಾರಣೆಗೆ ಕ್ರಮ ವಹಿಸಬೇಕು.
ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣೆ ವ್ಯವಸ್ಥೆಯಡಿ ದಾಖಲಾಗುವ ದೂರುಗಳನ್ನು ಮಾನ್ಯ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸುತ್ತಿದ್ದು, ದೂರುಗಳ ನಿವಾರಣೆಯಲ್ಲಿ ಅಧಿಕಾರಿಗಳು ವಿಳಂಭ ಹಾಗೂ ಬೇಜವಾಬ್ದಾರಿತನವನ್ನು ತೋರಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಸಕಾಲದಡಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇ ಮಾಡಬೇಕು. ಸಕಾಲದಲ್ಲಿ ಕಂಡು ಬರುವ ತಾಂತ್ರಿಕ ದೋಷಗಳನ್ನು ಸಂಬಂಧಿಸಿದವರ ಗಮನಕ್ಕೆ ತಂದು ಕೂಡಲೇ ದೋಷಗಳನ್ನು ಪರಿಹರಿಸಿಕೊಂಡು ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಅಚ್ಚುಕಟ್ಟಾಗಿ ಜರುಗಬೇಕು. ಜಿಲ್ಲೆಯ ಹದಿನೆಂಟು ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡಗೆ ಅಗತ್ಯದ ಕ್ರಮ ಜರುಗಿಸಬೇಕು. ಜಿಲ್ಲೆಯ ಎಲ್ಲ ಕಾಲೇಜುಗಳಿಗೆ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡಗೊಳಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಸೂಚನೇ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಎನ್. ಕೆ.ನಿರ್ಮಲಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಗಂಗಪ್ಪ.ಎಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.