ಈ ಬೆಳೆ ಸಮೀಕ್ಷೆ ಆಪ್ ಅನ್ನು ಡೌನ್ಲೋಡ್ ಮಾಡುವುದು ಹೇಗೆ?
2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023″ ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳ “ಮುಂಗಾರು ಬೆಳೆ ಸಮೀಕ್ಷೆ 2023-24″ ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ. ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದು ನಿಮ್ಮನ್ನು ಪ್ಲೇ ಸ್ಟೋರ್ ಗೆ ಕರೆದುಕೊಂಡು ಹೋಗುತ್ತದೆ ಅಲ್ಲಿ ಡೌನ್ಲೋಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. https://play.google.com/store/apps/details?id=com.csk.PR_Kharif_2023.cropsurvey
ಬೆಳೆ ಸಮೀಕ್ಷೆ ಮಾಡಿದರೆ ಯಾವೆಲ್ಲ ಲಾಭ ದೊರೆಯುತ್ತವೆ?
ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ದಿನಾಂಕ 25- 092023 ರೊಳಗೆ ತುರ್ತಾಗಿ ವಿವರಗಳನ್ನು ದಾಖಲಿಸಬೇಕು. ಈಗಾಗಲೇ ಜಿಲ್ಲೆಯ 6 ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯವಾಗಿರುತ್ತದೆ ಎಂದು ಶ್ರೀಮತಿ ತಾರಾಮಣಿ ಜಿ.ಹೆಚ್, ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ 18004253553 ಗೆ ಕರೆ ಮಾಡಲು ಕೋರಿದೆ.
https://chat.whatsapp.com/DgyceSrfHaIHrMa62BudxU
ಅತಿ ಕಡಿಮೆ ಬೆಲೆಯಲ್ಲಿ ಕುರಿ ಗೊಬ್ಬರ ಸಿಗುತ್ತದೆ, ಕೂಡಲೇ ಈ ಸಂಖ್ಯೆ ಕರೆ ಮಾಡಿ📞📞📞📞
ನಿಮ್ಮ ಹಸು, ಆಡು ಮತ್ತು ಕುರಿಗಳಿಗೆ ಬೇಕಾಗುವ ಮೇವಿನ ಬೀಜಗಳನ್ನು ಇಲ್ಲಿ ಖರೀದಿಸಬಹುದು